Bengaluru Accident: ಬೈಕ್‌ಗೆ ಡಿಕ್ಕಿ ಹೊಡೆದ ಟಿಪ್ಪರ್‌: ಚಕ್ರದಡಿ ಸಿಲುಕಿ ಸಾವನ್ನಪ್ಪಿದ ಮಹಿಳೆ

By Sathish Kumar KH  |  First Published May 11, 2023, 1:20 PM IST

ಬೆಂಗಳೂರು ನಗರದ ಹೊರಭಾಗ ಆನೇಕಲ್ ಬಳಿ ಟಿಪ್ಪರ್‌ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದ್ದು, ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಬೈಕ್‌ ಸವಾರ ಹಾಗೂ ಮತ್ತೊಬ್ಬ ಬಾಲಕಿಯ ಸ್ಥಿತಿ ಗಂಭೀರವಾಗಿದೆ. 


ಬೆಂಗಳೂರು (ಮೇ 11): ರಾಜ್ಯ ರಾಜಧಾನಿ ಬೆಂಗಳೂರು ನಗರದ ಹೊರಭಾಗ ಆನೇಕಲ್ ಬಳಿ ಟಿಪ್ಪರ್‌ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದ್ದು, ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಬೈಕ್‌ ಸವಾರ ಹಾಗೂ ಮತ್ತೊಬ್ಬ ಬಾಲಕಿಯ ಸ್ಥಿತಿ ಗಂಭೀರವಾಗಿದೆ. 

ಬೆಂಗಳೂರು ಹೊರವಲಯ  ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್‌ನ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ತಾಯಿ, ಮಗ ಹಾಘೂ ಮೊಮ್ಮಗಳು ಮೂವರು ಹೋಗುತ್ತಿದ್ದ ಬೈಕ್‌ ಡಿಕ್ಕಿಯಾದ ಕೂಡಲೇ ಕೆಳಗೆ ಬಿದ್ದ ತಾಯಿಯ ಮೇಲೆ ಟಿಪ್ಪರ್‌ ಹರಿದಿದೆ. ಇದರಿಂದ ತಾಯಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಇನ್ನು ಆಕೆಯ ಮಗ ಮತ್ತು ಮೊಮ್ಮಗಳು ಕೂಡ ರಸ್ತೆಗೆ ಬಿದ್ದಿದ್ದು, ತಲೆ ಮತ್ತು ದೇಹದ ಇತರೆ ಭಾಗಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Tap to resize

Latest Videos

undefined

Bengaluru: ಡ್ಯೂಟಿಯಲ್ಲಿದ್ದ ಕಂಡಕ್ಟರ್‌ಗೆ ಗುದ್ದಿದ ಬಿಎಂಟಿಸಿ ಬಸ್‌: ಗೋಡೆಗೆ ಅಪ್ಪಚ್ಚಿಯಾಗಿ ಸಾವು!

ಮೃತರ ಸಂಬಂಧಿಕರಿಂದ ಪ್ರತಿಭಟನೆ: ಮೃತ ಮಹಿಳೆಯನ್ನು ಇಂಡ್ಲವಾಡಿ ಗ್ರಾಮದ ವಾಸಿಗಳಾದ ನಿಂಗಮ್ಮ( 55) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಗನನ್ನು ಸಂದೀಪ್ ಎನ್ನಲಾಗುತ್ತಿದೆ. ಮೊಮ್ಮಗಳ ಸ್ಥಿತಿಯು ಗಂಭೀರವಾಗಿದೆ. ಟಿಪ್ಪರ್‌ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಗಳಿಂದ ಟಿಪ್ಪರ್‌ ಚಾಲಕ ಹಾಗೂ ಮಾಲೀಕರ ಮೇಲೆ ಆಕ್ರೋಶ ವ್ಯಕ್ತವಾಗಿದೆ. ಸುಮಾರು ಎರಡು ಗಂಟೆಗಳ ಕಾಲ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನು ಪ್ರತಿಭಟನಾಕಾರರ ಮನವೊಲಿಸಿ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಕಾರಿಗೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್- ಇಬ್ಬರು ಸ್ಪಾಟ್‌ ಡೆತ್‌: 
ಚಿಕ್ಕಮಗಳೂರು: ಕಾರು ಹಾಗೂ ಟೆಂಪೋ ಟ್ರಾವೆಲ್ಲರ್ (ಟಿಟಿ) ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಟಿಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗೊಂಡ ಘಟನೆ ಬೆಂಗಳೂರು - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ. ಈ ಭೀಕರ ಅಪಘಾತ ನಡೆದ ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Karnataka Election 2023: ಯಾದಗಿರಿಯ ಕೆಂಭಾವಿ, ಸುರಪುರದಲ್ಲಿ ಸೆಕ್ಷನ್‌ 144 ಜಾರಿ: 2 ದಿನ ಹೊರಬರುವಂತಿಲ್ಲ

ಕೇರಳದಿಂದ ಪ್ರವಾಸಕ್ಕೆ ಹೋಗುತ್ತಿದ್ದವರಿಗೆ ಗಾಯ: ಭೀಕರ ಅಪಘಾತವು ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ನಡೆದಿದ್ದು, ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್ (3) ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊನ್ನಾವರದಿಂದ ಸಂಬಂಧಿಕರ ಮದುವೆಗೆ ಗಿರಿಧರ್ ಕುಟುಂಬ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಇನ್ನು  ಕೇರಳದಿಂದ ಚಿಕ್ಕಮಗಳೂರಿಗೆ ಟೆಂಪೋ ಟ್ರಾವೆಲ್ಲರ್‌ನಲ್ಲಿ ಪ್ರವಾಸಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೇರಳ ಮೂಲದ 7 ಪ್ರವಾಸಿಗರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳ ಪರಿಶೀಲನೆ ಮಾಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

click me!