ವಕೀಲ್ ಸಾಬ್‌ ಜಗದೀಶ್‌ಗೆ ಜಾಮೀನು, ಆದ್ರೂ ಬಿಡುಗಡೆ ಭಾಗ್ಯ ಇಲ್ಲ!

Published : Mar 05, 2022, 07:30 PM IST
ವಕೀಲ್ ಸಾಬ್‌ ಜಗದೀಶ್‌ಗೆ ಜಾಮೀನು, ಆದ್ರೂ ಬಿಡುಗಡೆ ಭಾಗ್ಯ ಇಲ್ಲ!

ಸಾರಾಂಶ

* ವಕೀಲ್ ಸಾಬ್‌ ಖ್ಯಾತಿಯ ಜಗದೀಶ್‌ಗೆ ಜಾಮೀನು * ಜಾಮೀನು ನೀಡಿದ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ  * ಕೊಲೆ ಯತ್ನ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನದಲ್ಲಿರುವ ವಕೀಲ ಕೆ.ಎಂ. ಜಗದೀಶ್‌

ಬೆಂಗಳೂರು, (ಮಾ.05): ಕೊಲೆ ಯತ್ನ ಪ್ರಕರಣ ದಾಖಲಾಗಿ (Attempt to Murder Case) ನ್ಯಾಯಾಂಗ ಬಂಧನದಲ್ಲಿರುವ ವಕೀಲ ಕೆ.ಎಂ. ಜಗದೀಶ್‌ಗೆ (KM Jagadeesh) ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ (Bengaluru CIty Civl Court) ಆವರಣದಲ್ಲಿ ಈಚೆಗೆ ನಡೆದ ಗಲಭೆ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. 

 ನ್ಯಾಯಾಧೀಶರಾದ ಕಾಶಿಂ ಚೂರಿಖಾನ್‌ ಜಾಮೀನು ಮಂಜೂರು (Bail) ಮಾಡಿದ್ದಾರೆ. 50 ಸಾವಿರ ರೂಪಾಯಿ ಮೊತ್ತದ ಬಾಂಡ್, ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯದ ಹಾಜರಾಗಬೇಕು. ಪ್ರಾಸಿಕ್ಯೂಷನ್‌ ಸಾಕ್ಷಿಗಳ ಮೇಲೆ ಪ್ರಭಾವ ಬೀರುವಂತಿಲ್ಲ. ಸಾಕ್ಷಿಗಳಿಗೆ ತಮ್ಮ ಫೇಸ್‌ಬುಕ್‌ ಖಾತೆ ಮೂಲಕ ಬೆದರಿಕೆ ಒಡ್ಡಬಾರದು, ಇಂಥದ್ದೇ ಅಪರಾಧಗಳನ್ನು ಮತ್ತೆ ಎಸಗಬಾರದು ಎಂಬ ಷರತ್ತುಗಳನ್ನು ವಿಧಿಸಿದೆ.

ವಕೀಲ್ ಸಾಬ್ ಜಗದೀಶ್ ಕುಮಾರ್ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ!

ಇನ್ನು, ಕೊಡಿಗೇಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗದೀಶ್‌ ಅವರ ಜಾಮೀನು ಮನವಿಯ ವಿಚಾರಣೆ ನಡೆಸಿದ ಪೀಠವು ಆದೇಶವನ್ನು ಮಾರ್ಚ್‌ 7ಕ್ಕೆ ಕಾಯ್ದಿರಿಸಿದೆ. ಹೀಗಾಗಿ ಅವರು ಇನ್ನು ಬಂಧನದಲ್ಲೇ ಇರಬೇಕಾಗಿದೆ.

ಕೊಲೆ ಯತ್ನ ಪ್ರಕರಣದಲ್ಲಿ ಸಹ ಆರೋಪಿಗಳಾಗಿರುವ ಶರತ್‌ ಖದ್ರಿ, ಪ್ರಶಾಂತಿ ಸುಭಾಷ್‌ ಮತ್ತು ಜಗದೀಶ್‌ ಪುತ್ರ ಆರ್ಯಗೌಡ ಅವರಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಆದರೆ, ಜಾತಿ ನಿಂದನೆ ಮತ್ತು ಪೊಲೀಸ್‌ ಸಿಬ್ಬಂದಿಗೆ ಬೆದರಿಕೆ ಹಾಕಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜಾಮೀನು ಸಿಕ್ಕಿಲ್ಲವಾದ್ದರಿಂದ ಅವರು ಸದ್ಯಕ್ಕೆ ಜೈಲಿನಿಂದ ಹೊರಬರುವ ಅವಕಾಶವಿಲ್ಲ ಎನ್ನಲಾಗಿದೆ.

ವಕೀಲರಾದ ಕೆ.ಎನ್.ಜಗದೀಶ್‌ ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ. ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದರು.

ರವಿ ಕೃಷ್ಣಾರೆಡ್ಡಿ ಪ್ರತಿಕ್ರಿಯೆ
ಇನ್ನು ಈ ಬಗ್ಗೆ ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಫೇಸ್‌ಬುಕ್‌ ಮೂಲಕ ಪ್ರತಿಕ್ರಿಯಿಸಿದ್ದು, ವಕೀಲ ಜಗದೀಶ್ KN'ರಿಗೆ ನ್ಯಾಯಾಲಯವು ಅವರ ಮೇಲೆ ದಾಖಲಾಗಿರುವ ಮೊದಲ ದೂರು ಪ್ರಕರಣದಲ್ಲಿ (IPC 307 / ಕೊಲೆ ಪ್ರಯತ್ನ) ಜಾಮೀನು ನೀಡಿದೆ ಎನ್ನುವ ಸುದ್ದಿ ಬಂದಿದೆ. ಆದರೆ ಅವರ ಮೇಲೆ ದಾಖಲಾಗಿರುವ ಇನ್ನೊಂದು ದೂರು, ಜಾತಿ ನಿಂದನೆ ಪ್ರಕರಣ, ಮುಂದಿನ ಸೋಮವಾರಕ್ಕೆ (ಮಾರ್ಚ್ 7, 2022) ಮುಂದೂಡಲ್ಪಟ್ಟಿದೆಯಂತೆ. ಆ ಪ್ರಕರಣದಲ್ಲಿ ಜಾಮೀನು ಮಂಜೂರು ಆಗುವ ತನಕ ಜಗದೀಶ್ ಬಿಡುಗಡೆ ಆಗುವುದಿಲ್ಲ.ಸರಿಯಾಗಿ 18 ದಿನಗಳ ಹಿಂದೆ ಪೊಲೀಸರು ಜಗದೀಶರನ್ನು ಬಂಧಿಸಿದ್ದು. ಈ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಗಿಯುವ ತನಕ ಅವರ ಬಿಡುಗಡೆ ಆಗುವುದಿಲ್ಲ. ಈಗಿನ ಪರಿಸ್ಥಿತಿಯಲ್ಲಿ ಅದು ಯಾವಾಗ ಎಂದು ಸ್ಪಷ್ಟವಾಗಿ ಯಾರಿಂದಲೂ ಹೇಳಲು ಸಾಧ್ಯವಿಲ್ಲ. ಆದರೆ ಬಹುಶಃ ಮುಂದಿನ ವಾರ ಯಾವುದೋ ಒಂದು ದಿನ ಆಗಬಹುದು ಎಂದಿದ್ದಾರೆ.

ಭ್ರಷ್ಟಾಚಾರದ ವಿರುದ್ಧದ ಹೋರಾಟಗಳೂ ಸೇರಿದಂತೆ ಸಾಮಾಜಿಕ ಹೋರಾಟಗಳು ಬಹಳ ಸವಾಲಿನವು. ಸುದೀರ್ಘ ಸಮಯ ಮತ್ತು ತಾಳ್ಮೆಯನ್ನು ಬಯಸುತ್ತವೆ. ಮತ್ತು ಏಕಾಂಗಿ ಹೋರಾಟ ಎಂದಿಗೂ ಅಪಾಯಕಾರಿ. ಹಾಗಾಗಿ, ಜೈಲಿನಿಂದ ಹೊರಗೆ ಬಂದಮೇಲೆ ತಾವು ಇಲ್ಲಿಯವರೆಗೂ ನಡೆಸಿಕೊಂಡು ಬಂದಿದ್ದ ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಜಗದೀಶ್ ಮತ್ತಷ್ಟು ಸಂಘಟಿತವಾಗಿ, ಶಿಸ್ತುಬದ್ಧವಾಗಿ, ಕಾನೂನಾತ್ಮಕವಾಗಿ, ಸಂಯಮ ಮತ್ತು ಸಹನೆಯಿಂದ ಮುಂದುವರೆಸಲಿ ಎಂದು ಆಶಿಸುತ್ತೇನೆ. ಅವರಿಗೆ ಶುಭವಾಗಲಿ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ