
ಬೆಂಗಳೂರು (ಮೇ 11): ಊರಿಗೆ ತೆರಳಲು ಪೊಲೀಸ್ ಸ್ಟೇಷನ್ನಲ್ಲಿ ನೋಂದಣಿ ಮಾಡಿಸಲು ಬಂದ ಉತ್ತರಪ್ರದೇಶದ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದ ಬೆಂಗಳೂರಿನ ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯ ASI ನನ್ನು ಅಮಾನತು ಮಾಡಲಾಗಿದೆ.
ಬೆಂಗಳೂರಿನ ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯ ASI ರಾಜಾಸಾಬ್ ಅವರನ್ನು ಅಮಾನತು ಮಾಡಿ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಡಾ. ಶರಣಪ್ಪ ಆದೇಶ ಹೊರಡಿಸಿದ್ದಾರೆ.
ರೇಪ್ ಕತೆ ಹಿಂದೆ ಹುಡ್ಗಿಯ ಕರಾಮತ್ತು, ಒಗ್ಗಟ್ಟಿಗಾಗಿ ಕಾಂಗ್ರೆಸ್ ಕಸರತ್ತು; ಮೇ.11ರ ಟಾಪ್ 10 ಸುದ್ದಿ!
ಲಾಕ್‌ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಎಲ್ಲಾ ಹೊರ ರಾಜ್ಯದ ಕಾರ್ಮಿಕರನ್ನು ಅವರವರ ರಾಜ್ಯಗಳಿಗೆ ಕಳುಹಿಸಲು ವಿಶೇಷ ಶ್ರಮಿಕ್ ರೈಲಿನ ವ್ಯವಸ್ಥೆ ಮಾಡಲಾಗಿದೆ. ಆದರೆ, ಈ ರೈಲಿನಲ್ಲಿ ಸಂಚರಿಸಲು ಕಾರ್ಮಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಈ ಹಿನ್ನೆಲೆಯಲ್ಲಿ ಕಾರ್ಮಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಸಲುವಾಗಿ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಈ ವೇಳೆ ಸಿಟ್ಟಿನಿಂದ ಎಎಸ್‌ಐ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಬೂಟುಕಾಲಿನಿಂದ ಒದೆಯಲು ಮುಂದಾದ ವಿಡಿಯೋ ವೈರಲ್ ಆಗಿತ್ತು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಸ್ ಆಗುತ್ತಿದ್ದಂತೆಯೇ ಮೇಲಧಿಕಾರಿಗಳು ಎಚ್ಚೆತ್ತಿಕೊಂಡು ASI ರಾಜಾಸಾಬ್‌ನನ್ನು ಸಸ್ಪೆಂಡ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ