
ಕೋಟ(ರಾಜಸ್ಥಾನ)(ಮೇ.10): ಬೆಂಗಳೂರು ಮೂಲದ ಮೊಹಮ್ಮದ್ ನಾಸಿರ್ (22) ಎಂಬ ವಿದ್ಯಾರ್ಥಿ ಇಲ್ಲಿನ ವಿಜ್ಞಾನನಗರದಲ್ಲಿ ಕಟ್ಟಡದ 10ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಈತ ಒಂದು ವರ್ಷದಿಂದ ಕೋಟದ ಕೋಚಿಂಗ್ ಇನ್ಸಟಿಟ್ಯೂಟ್‌ನಲ್ಲಿ ನೀಟ್ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ, ಭಾನುವಾರ ಜೈಪುರದಲ್ಲಿ ಪರೀಕ್ಷೆಯನ್ನು ಬರೆದು ಸೋಮವಾರ ಕೋಟಕ್ಕೆ ಮರಳಿದ್ದ. ಅದೇ ದಿನ ರಾತ್ರಿ 11 ಗಂಟೆಗೆ ಇಲ್ಲಿನ ಕಟ್ಟಡವೊಂದರ 10ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಮಯದಲ್ಲಿ ಅವನ ರೂಂನಲ್ಲಿ ಯಾರು ಇರಲಿಲ್ಲ ಎಂದು ಪೊಲೀಸರು ತಿಳಿಸಿದರು.
ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಪ್ರೇಮಿಗಳ ಶವ ಪತ್ತೆ: ಮನೆಯಿಂದ ಓಡಿಹೋಗಿ ಮಸಣ ಸೇರಿದರು
ಈತನ ದೇಹವನ್ನು ಎಂಬಿಎಸ್ ಆಸ್ಪತ್ರೆಯೆಯಲ್ಲಿ ಇರಿಸಲಾಗಿದ್ದು, ಬೆಂಗಳೂರಿನಿಂದ ಆತನ ಪೋಷಕರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ