
ಬೆಂಗಳೂರು (ನ.24): ಬೆಂಗಳೂರು ಉತ್ತರ ವಲಯದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿ ಎಂಬಲ್ಲಿ ಆಂಧ್ರ ಮೂಲದ ಬಿಬಿಎಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸ್ನೇಹಿತನೇ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಕೊಲೆಯಾದ ಯುವತಿಯನ್ನು ಆಂಧ್ರ ಮೂಲದ, ದೇವಿಶ್ರೀ(21) ಎಂದು ಗುರುತಿಸಲಾಗಿದೆ. ಈಕೆ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಬಿಬಿಎಂ ವ್ಯಾಸಾಂಗ ಮಾಡುತ್ತಿದ್ದಳು.
ನಿನ್ನೆ ಬೆಳಿಗ್ಗೆ, ಯುವತಿ ತನ್ನ ಸ್ನೇಹಿತನೆಂದು ಹೇಳಲಾದ ಪ್ರೇಮ್ ವರ್ಧನ್ ಎಂಬಾತನ ಜೊತೆ ಇನ್ನೊಬ್ಬ ಸ್ನೇಹಿತೆಯ ರೂಮಿಗೆ ತೆರಳಿದ್ದಳು. ಅಲ್ಲಿ ಆಕೆಯ ಸ್ನೇಹಿತ ಪ್ರೇಮ್ ವರ್ಧನ್ ಯುವತಿಯನ್ನು ಕೊಲೆ ಮಾಡಿ, ತಾನೊಬ್ಬನೇ ಸ್ಥಳದಿಂದ ವಾಪಸ್ಸಾಗಿದ್ದಾನೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿರುವ ಮನೆಯವರು. ಬಳಿಕ ಸ್ಥಳಕ್ಕೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ಕೊಲೆ ಮಾಡಿ ತಲೆಮರೆಸಿಕೊಂಡಿರುವ ಆರೋಪಿ ಪ್ರೇಮ್ ವರ್ಧನ್‌ಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಕೊಲೆಗೆ ನಿಖರ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ