ಬಿಎಂಎಸ್ ಕಾಲೇಜಿನ ಮತ್ತೊಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ: ಒಂದೇ ತಿಂಗಳಲ್ಲಿ ಇಬ್ಬರ ಸಾವು

Published : Feb 18, 2025, 12:01 PM ISTUpdated : Feb 18, 2025, 12:16 PM IST
ಬಿಎಂಎಸ್ ಕಾಲೇಜಿನ ಮತ್ತೊಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ: ಒಂದೇ ತಿಂಗಳಲ್ಲಿ ಇಬ್ಬರ ಸಾವು

ಸಾರಾಂಶ

ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ತಿಂಗಳು ಇದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದ.

ಬೆಂಗಳೂರು (ಫೆ.18): ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿರುವ ಬಸವನಗುಡಿಯಲ್ಲಿರುವ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದೊಂದು ತಿಂಗಳ ಹಿಂದೆ ಇದೇ ಕಾಲೇಜಿನ ವಿದ್ಯಾರ್ಥಿ ಕಟ್ಟಡದ ಮೇಲಿಂದ ಜಿಗಿದು ಸಾವಿಗೆ ಶರಣಾಗಿದ್ದನು. ಇದೀಗ ಮತ್ತೊಂದು ಘಟನೆ ನಡೆದಿದೆ.

ಬೆಂಗಳೂರಿನ ಹನುಮಂತ ನಗರದ ಪಿಜಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಆದಿತ್ಯಾ ಸಿಂಗ್ (19) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 1st ಸೆಮಿಸ್ಟರ್ ಒದುತ್ತಿದ್ದನು. ಈತ ಮೂಲತಃ ಉತ್ತರಪ್ರದೇಶ ರಾಜ್ಯದವನಾಗಿದ್ದು, ಬೆಂಗಳೂರಿನಲ್ಲಿ ಅಭ್ಯಾಸ ಮಾಡುತ್ತಿದ್ದನು. ಆದರೆ, ಈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಅದರಲ್ಲಿಯೂ ಒಂದೇ ಕಾಲೇಜಿನಲ್ಲಿ ಒಂದು ತಿಂಗಳ ಅಂತರದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಕಾಲೇಜು ಆಡಳಿತ ಮಂಡಳಿ ವಿರುದ್ಧ ಅನುಮಾನ ಬರುವಂತ ಮಾಡಿದೆ.

ಇನ್ನು ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲಿಯೇ ಹನುಮಂತನರದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಹನುಮಂತನಗರ ಠಾಣೆ ಪೊಲೀಸರು ಪಿಜಿಗೆ ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದೀಗ ವಿದ್ಯಾರ್ಥಿ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದ್ದು, ಕಳೇಬರವನ್ನು ವಿದ್ಯಾರ್ಥಿ ಪೋಷಕರಿಗೆ ರವಾನಿಸಲಾಗಿದೆ. ಮಗನನ್ನು ಬೆಂಗಳೂರು ಕಾಲೇಜಿಗೆ ಓದಲು ಸೇರಿಸಿ, ತಂಗಲು ಪಿಜಿ ವ್ಯವಸ್ಥೆ ಮಾಡಿ ಬಿಟ್ಟು ಹೋಗಿದ್ದರು. ಆದರೆ, ಇದೀಗ ಅವರೇ ಬಂದು ಮಗನ ಮೃತದೇಹವನ್ನು ಊರಿಗೆ ತೆಗೆದುಕೊಂಡು ಹೋಗಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಘಟನೆಗೆ ಕುರಿತಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

ಇದನ್ನೂ ಓದಿ: ಅಪ್ರಾಪ್ತೆಯರಿಗೆ ಮೊಬೈಲ್‌ ನೀಡಿ ಶೋಷಣೆ, ಮತಾಂತರಕ್ಕೆ ಯತ್ನ:10 ಮುಸ್ಲಿಂ ಯುವಕರ ವಿರುದ್ಧ ಪೋಕ್ಸೋ ಕೇಸ್‌

ಕಳೆದ ತಿಂಗಳು ಅಂದರೆ ಜ.18ರಂದು ಇದೇ ಬಿಎಂಎಸ್ ಕಾಲೇಜಿನ ಬಹುಮಹಡಿ ಕಟ್ಟಡದಿಂದ ಜಿಗಿದು ಅಕ್ಷಯ್ ರೆಡ್ಡಿ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದನು. ನಾಲ್ಕನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ (Aerospace Student) ಅಕ್ಷಯ್ ಕಾಲೇಜು ಕಟ್ಟಡದಿಂದ ಹಾರಿದ್ದನು. ಆತ್ಮಹತ್ಯೆಗೆ ಅಧಿಕೃತ ಕಾರಣ ತಿಳಿದು ಬಂದಿರಲಿಲ್ಲ. ಕಾಲೇಜು ಆಡಳಿತ ಮಂಡಳಿಯ ಟಾರ್ಚರ್‌ನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಒಂದೇ ತಿಂಗಳ ಅಂತರದಲ್ಲಿ ಎರಡನೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈತನ ಸಾವಿಗೂ ಕಾರಣ ತಿಳಿದುಬಂದಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು