
ಬೆಂಗಳೂರು(ಡಿ. 14) ಚೀಟಿ ಹೆಸರಿನಲ್ಲಿ ವಂಚನೆ ನಡೆಸಿದ ಆರೋಪದ ಮೇಲೆ ಗಿರಿನಗರ ಠಾಣಾ ಪೊಲೀಸರು ದಂಪತಿಯನ್ನು ಬಂಧಸಿದ್ದಾರೆ. ನೀಲಾವತಿ ಹಾಗೂ ಜ್ಞಾನೇಶ್ ಬಂಧಿತ ವಂಚಕ ದಂಪತಿ.
ಹೊಸಕೆರೆಹಳ್ಳಿ, ಗಿರಿನಗರ ಸುತ್ತಮುತ್ತಲಿನ ನೂರಾರು ಮಂದಿಗೆ ಚೀಟಿ ಹೆಸರಿನಲ್ಲಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಚೀಟಿ ಹೆಸರಿನಲ್ಲಿ 5 ಕೋಟಿಗೂ ಅಧಿಕ ಹಣ ವಂಚಿಸಿರುವ ಆರೋಪ ಬಂದಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಚೀಟಿ ಹಣ ಹಿಂದಿರುಗಿಸದೇ ತಾವೇ ಬಡ್ಡಿ ನೀಡುವುದಾಗಿ ಹೇಳಿ ವಂಚನೆ ಮಾಡುತ್ತಿದ್ದರು.
ಮನೆ ಬಾಡಿಗೆ ಪಡೆದು ಲೀಸ್ ಗೆ ಕೊಡುತ್ತಿದ್ದ ಬೆಂಗಳೂರಿನ ಐನಾತಿ ದಂಪತಿ
ಇದುವರೆಗೂ 50ಕ್ಕೂ ಅಧಿಕ ಮಂದಿಯಿಂದ ಪೊಲೀಸರಿಗೆ ದೂರು ದಾಖಲಾಗಿದೆ. ಇತ್ತೀಚಿಗೆ ಹೊಸಕೆರೆಹಳ್ಳಿಯ ಮನೆಯನ್ನೂ ಖಾಲಿ ಮಾಡಿ ಎಸ್ಕೇಪ್ ಆಗಿದ್ದ ದಂಪತಿಯನ್ನು ಮೋಸಹೋದವರೆ ಹಿಡಿದು ತಂದು ಪೊಲೀಸರಿಗೆ ಒಪ್ಪಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ