ಮದುವೆಯಾದವನ ಜತೆ ವಿದ್ಯಾರ್ಥಿನಿಯ ಲವ್ವೀ ಡವ್ವೀ, ನಾ ನಿನ್ನ ಬಿಟ್ಟಿರಲಾರೆನೆಂದು ಇಬ್ಬರೂ ಆತ್ಮಹತ್ಯೆ!

Published : Jul 03, 2024, 11:49 AM ISTUpdated : Jul 05, 2024, 12:57 PM IST
ಮದುವೆಯಾದವನ ಜತೆ ವಿದ್ಯಾರ್ಥಿನಿಯ ಲವ್ವೀ ಡವ್ವೀ, ನಾ ನಿನ್ನ ಬಿಟ್ಟಿರಲಾರೆನೆಂದು ಇಬ್ಬರೂ ಆತ್ಮಹತ್ಯೆ!

ಸಾರಾಂಶ

ಬೆಂಗಳೂರು ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯುವಕನಿಗೆ ಈಗಾಗಲೇ ಮದುವೆಯಾಗಿತ್ತು ಎಂದು ತಿಳಿದುಬಂದಿದೆ.

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಸ್ನೇಹಿತನ್ನೇ ರೇಪ್ ಮಾಡಿ ಮನೆ ದೋಚಿದ HIV ಪೀಡಿತ!

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್  ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು.  ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಕಾರು ಕದ್ದು ₹15 ಲಕ್ಷಕ್ಕೆ ರಾಜ್ಯ ಬಿಜೆಪಿ ಮುಖಂಡಗೆ ಮಾರಿದ ಕಳ್ಳರು!

ಮದುವೆಯಾಗಿದ್ದ ಶ್ರೀಕಾಂತ್!
ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಟೋ ಓಡಿಸಿಕೊಂಡು ಕಾಲೇಜು ಮಾಡ್ತಿದ್ದ: ಕಳೆದ ಎರಡು ವರ್ಷಗಳ ಹಿಂದೆ ಶ್ರೀಕಾಂತ್ ಮದುವೆಯಾಗಿದ್ದ . ಬೆಳಗ್ಗೆ ಕಾಲೇಜು ಹೋಗಿ ಓದುತ್ತಿದ್ದ ಸಂಜೆ ಆಟೋ ಓಡಿಸಿ ಸಂಪಾದನೆ ಮಾಡ್ತಿದ್ದ. ಆದ್ರೆ ಕಾಲೇಜಿನಲ್ಲಿ ಅಂಜನಾ ಎಂಬುವ ಯುವತಿಯ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಅಂಜನಾ. ಈ ವಿಚಾರ ಹೆಂಡತಿಗೆ ತಿಳಿದು ರಾಜಿ ಪಚಾಯ್ತಿ ಆಗಿತ್ತು. ಎರಡು ಕುಟುಂಬದವರು ಕುಳಿತು ರಾಜಿ ಪಂಚಾಯ್ತಿ ಮಾಡಿಸಿದ್ದರು. ಅಂತಿಮ ವರ್ಷದ ಬಿಕಾಂ ಆಗಿದ್ದರಿಂದ ಕಾಲೇಜು ಮುಗಿಸಿ ಆಕೆ ಸವಾಸಕ್ಕೆ ಹೋಗಲ್ಲ ಎಂದು ಶ್ರೀಕಾಂತ್ ಹೇಳಿದ್ದ, ಆದ್ರೆ  ಶ್ರೀಕಾಂತ್ ನ ಬಿಡೋಕೆ ಅಂಜನಾಗೆ ಇಷ್ಟವಿರಲಿಲ್ಲ. ಹೀಗಾಗಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್