ಮಕ್ಕಳಿದ್ದ ಮನೆಗೆ ಪೆಟ್ರೋಲ್‌ ಎರಚಿ ಬೆಂಕಿ ಹಚ್ಚಿದ ತಂದೆ!

Published : Jan 08, 2020, 07:30 AM IST
ಮಕ್ಕಳಿದ್ದ ಮನೆಗೆ ಪೆಟ್ರೋಲ್‌ ಎರಚಿ ಬೆಂಕಿ ಹಚ್ಚಿದ ತಂದೆ!

ಸಾರಾಂಶ

ಮಕ್ಕಳಿದ್ದ ಮನೆಗೆ ಪೆಟ್ರೋಲ್‌ ಎರಚಿ ಬೆಂಕಿ ಹಚ್ಚಿದ ತಂದೆ!| ಕುಡುಕ ಅಪ್ಪನನ್ನು ತೊರೆದು ದೊಪ್ಪನ ಮನೆಯಲ್ಲಿದ್ದ ಮಕ್ಕಳು| ತನ್ನನ್ನು ಬಿಟ್ಟು ಹೋಗಿದ್ದಕ್ಕೆ ಬುದ್ಧಿ ಕಲಿಸಲು ಕೃತ್ಯ ಎಸಗಿದ ಅಪ್ಪ

ಬೆಂಗಳೂರು[ಜ.08]: ಮಕ್ಕಳು ನನ್ನ ಬಿಟ್ಟು ಹೋದರು ಎಂಬ ಕಾರಣಕ್ಕೆ ತಂದೆಯೊಬ್ಬ ಮಕ್ಕಳು ಮಲಗಿದ್ದ ವೇಳೆ ಮನೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿರುವ ಪ್ರಕರಣ ಬೆಳಕಿಗೆ ಬಂದಿದೆ.

ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಪ್ರಕರಣದ ಸಂಬಂಧ ನಂದಿನಿ ಲೇಔಟ್‌ ಪೊಲೀಸರು ಆರೋಪಿ ಶಂಕರ್‌ ಎಂಬಾತನನ್ನು ಬಂಧಿಸಿದ್ದಾರೆ.

ಪುತ್ರಿ ಅಮಲಾ ಯಲಹಂಕದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸಹೋದರ ಯಶ್ಪಾಲ್‌ ಹಾಗೂ ತಂದೆ ಶಂಕರ್‌ ಜತೆ ರಾಜೀವ್‌ ಗಾಂಧಿ ನಗರದಲ್ಲಿ ವಾಸಿಸುತ್ತಿದ್ದರು. ಸುಂಕದಕಟ್ಟೆಯ ಕಟ್ಟಿಂಗ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿರುವ ಶಂಕರ್‌ ಕುಡಿದು ಬಂದು ಮಕ್ಕಳಿಗೆ ಬೆದರಿಸುತ್ತಿದ್ದ. ಇದರಿಂದ ನೊಂದ ಮಕ್ಕಳು ರಾಜೀವ್‌ ಗಾಂಧಿ ವೃತ್ತದ ಆಂಜನೇಯ ದೇವಾಲಯದ ಹತ್ತಿರವಿದ್ದ ದೊಡ್ಡಪ್ಪನ ಮನೆಯಲ್ಲಿ ವಾಸಿಸುತ್ತಿದ್ದರು. ಮಕ್ಕಳು ಮನೆ ಬಿಟ್ಟು ಹೋಗಿರುವುದರಿಂದ ಆಕ್ರೋಶಗೊಂಡಿದ್ದ ತಂದೆ ಶಂಕರ್‌ ಇವರಿಗೆ ತಕ್ಕ ಪಾಠ ಕಲಿಸಬೇಕು ಎಂದು ನಿರ್ಧರಿಸಿದ್ದ.

ಜ.2ರಂದು ರಾತ್ರಿ ದೊಡ್ಡಪ್ಪನ ಮನೆಯಲ್ಲಿ ಮಕ್ಕಳು ಮಲಗಿದ್ದ ಸಂದರ್ಭದಲ್ಲಿ ಇವರ ಮನೆ ಬಳಿ ಬಂದ ಶಂಕರ್‌ ಕಿಟಕಿಯಿಂದ ಮನೆಯ ಒಳಗೆ ಹಾಗೂ ಬಾಗಿಲಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ. ಮನೆಗೆ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಮಕ್ಕಳು ಜೋರಾಗಿ ಕೂಗಿದ್ದರು. ಚೀರಾಟ ಕೇಳಿ ನೆರೆ-ಹೊರೆಯವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ, ಮಕ್ಕಳನ್ನು ರಕ್ಷಿಸಿದ್ದಾರೆ.

ಮಗಳು ಮನೆ ಬಿಟ್ಟು ಹೋಗಿ ದೊಡ್ಡಪ್ಪನ ಮನೆಯಲ್ಲಿ ನೆಲೆಸಿದ್ದಕ್ಕೆ ಆಕ್ರೋಶಗೊಂಡು ಶಂಕರ್‌ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!