Fake PMO Officer: ನಾನು ಅಮಿತ್ ಶಾ ದತ್ತು ಪುತ್ರ, PMO ಅಧಿಕಾರಿ ಎಂದು ವೈದ್ಯನಿಗೆ 2.7 ಕೋಟಿ ವಂಚಿಸಿದವ ಅರೆಸ್ಟ್ !

Published : Nov 24, 2025, 11:36 AM IST
Bengaluru Fake PMO Officer Arrested for 2 7cr fraud

ಸಾರಾಂಶ

ಪ್ರಧಾನಮಂತ್ರಿ ಕಚೇರಿಯ ಉನ್ನತ ಅಧಿಕಾರಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದತ್ತು ಪುತ್ರ ಎಂದು ನಂಬಿಸಿ, ವೈದ್ಯರೊಬ್ಬರಿಗೆ 2.7 ಕೋಟಿ ರೂ ವಂಚಿಸಿದ ಸುಜಯೇಂದ್ರ ಎಂಬ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ದೇವನಹಳ್ಳಿ ಬಳಿ ಆಯುರ್ವೇದ ಆಸ್ಪತ್ರೆ ತೆರೆಯುವ ಆಮಿಷವೊಡ್ಡಿ ಈತ ಹಣ ಪಡೆದಿದ್ದ.

ಬೆಂಗಳೂರು (ನ.24): ತಾನು ಪ್ರಧಾನಮಂತ್ರಿ ಕಚೇರಿ (PMO)ಯಲ್ಲಿ ಕೆಲಸ ಮಾಡುವ ಉನ್ನತ ಅಧಿಕಾರಿ ಎಂದು ಹೇಳಿಕೊಂಡು, ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ದತ್ತು ಪುತ್ರ ಎಂದು ಬಿಂಬಿಸಿಕೊಂಡು ವೈದ್ಯರೊಬ್ಬರಿಗೆ ಬರೋಬ್ಬರಿ 2.7 ಕೋಟಿ ರೂಪಾಯಿಗಳಷ್ಟು ಪಂಗನಾಮ ಹಾಕಿದ ವಂಚಕನನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ವಿಜಯನಗರದ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ. ಈತ ಜಮ್ಮು ಕಾಶ್ಮೀರ ಮೂಲದ ವೈದ್ಯರೊಬ್ಬರನ್ನು ಸಂಪರ್ಕಿಸಿ ತಾನು ಪ್ರಧಾನಮಂತ್ರಿ ಕಚೇರಿಯ ಅಧಿಕಾರಿಯಾಗಿರುವುದಾಗಿ ನಂಬಿಸಿದ್ದಾನೆ. ಮಾತ್ರವಲ್ಲದೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಸ್ಟೇಜ್ ಹಂಚಿಕೊಂಡಿರುವುದಾಗಿ ಫೋಟೋಗಳನ್ನು ತೋರಿಸಿ ವಿಶ್ವಾಸ ಗಳಿಸಿ ವಂಚಿಸಿದ್ದಾನೆ.

ದೇವನಹಳ್ಳಿ ಬಳಿ ವಿಲ್ಲಾ ಆಸ್ಪತ್ರೆ ಆಮಿಷ:

​ದೇವನಹಳ್ಳಿ ಬಳಿ ಅತ್ಯಾಧುನಿಕ ವಿಲ್ಲಾ ಮಾದರಿಯಲ್ಲಿ ಆಯುರ್ವೇದ ಆಸ್ಪತ್ರೆಯನ್ನು ತೆರೆಯಲು ಸರ್ಕಾರದಿಂದ ಅವಕಾಶ ಮಾಡಿಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದ ಸುಜಯೇಂದ್ರ, ಈ ನೆಪದಲ್ಲಿ ವೈದ್ಯರಿಂದ ಹಂತ ಹಂತವಾಗಿ 2.7 ಕೋಟಿ ರೂಪಾಯಿ ಹಣವನ್ನು ವಸೂಲಿ ಮಾಡಿದ್ದಾನೆ.

ಕಳ್ಳಾಟ ಬಯಲಾಗಿದ್ದು ಹೇಗೆ?

ವಂಚನೆಗೊಳಗಾದ ವೈದ್ಯರು ದೂರು ನೀಡಿದ ಬಳಿಕ ತನಿಖೆ ಕೈಗೊಂಡ ವಿಜಯನಗರ ಪೊಲೀಸರು ಸುಜಯೇಂದ್ರ ಕಳ್ಳಾಟ ನಡೆಸಿರುವುದು ಗೊತ್ತಾಗಿದೆ. ಸುಜಯೇಂದ್ರನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತನ ವಂಚನೆಯ ಅಸಲಿಯತ್ತು ಬಯಲಾಗಿದೆ.

​ಎರಡು ಬಾರಿ ಜೈಲು ವಂಚಕ: ಆರೋಪಿ ಸುಜಯೇಂದ್ರ ಎಂಥ ಖರ್ನಾಕ್ ಎಂದರೆ ಈಗಾಗಲೇ ಎರಡು ಬಾರಿ ಜೈಲು ಪಾಲಾಗಿದ್ದ ಹಳೇ ಅಪರಾಧಿಯಾಗಿದ್ದಾನೆ. ಅವನ ವಿರುದ್ಧ ಈಗಾಗಲೇ 4 ಚೆಕ್ ಬೌನ್ಸ್ (Cheque Bounce) ಪ್ರಕರಣಗಳು ದಾಖಲಾಗಿವೆ ಎಂಬ ಅಂಶ ತನಿಖೆಯಲ್ಲಿ ಬಯಲಾಗಿದೆ. ಇಷ್ಟೇಲ್ಲ ವಂಚನೆ ಪ್ರಕರಣಗಳಿದ್ದರೂ ಉಪಮುಖ್ಯಮಂತ್ರಿಯವರೊಂದಿಗೆ ಸ್ಟೇಜ್‌ ಹಂಚಿಕೊಂಡಿರುವದು ಅಚ್ಚರಿ. ಸದ್ಯ

​ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮ೧ಹತ್ಯೆ; ನೇರಳೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ವ್ಯತ್ಯಯ!
ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!