Bengaluru family death: ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

Published : Aug 03, 2023, 04:40 PM ISTUpdated : Aug 04, 2023, 09:43 AM IST
Bengaluru family death: ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಸಾರಾಂಶ

ಬೆಂಗಳೂರಿನ ಕಾಡುಗೋಡಿಯಲ್ಲಿ ವಾಸವಿದ್ದ ದಂಪತಿ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆಗೈದು ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಬೆಂಗಳೂರು (ಆ.03): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಕುಟುಂಬವೊಂದು ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದೆ. ಇನ್ನು ಮನೆಯ ಯಜಮಾನ ತನ್ನ ಇಬ್ಬರು ಹೆಣ್ಣುಮಕ್ಕಳು ಹಾಗೂ ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಹೌದು, ಇತ್ತೀಚಿನ ದಿನಗಳಲ್ಲಿ ಕುಟುಂಬದಲ್ಲಿ ಸಮಸ್ಯೆ ಬಂದರೆ ತಾವೊಬ್ಬರೇ ಆತ್ಮಹತ್ಯೆಗೆ ಶರಣಾಗುವುದಲ್ಲದೇ ಇಡೀ ಕುಟುಂಬದ ಸದಸ್ಯರನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗಿ ವರದಿ ಆಗುತ್ತಿವೆ. ಅದೇ ರೀತಿ, ಬೆಂಗಳೂರಿನ ಕಾಡುಗೋಡಿಯ ಪೊಲೀಸ್ ಠಾಣ ವ್ಯಾಪ್ತಿಯ ಸಾಯಿ ಗಾರ್ಡನ್ ಅಪಾರ್ಟ್ಮೆಂಟ್ ನಲ್ಲಿ ಕಳೆದ ಮೂರು ದಿನಗಳ ಹಿಂದೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ನಡೆದು ಮೂರು ದಿನಗಳ ನಂತರ ಶವಗಳು ದುರ್ವಾಸನೆ ಬಂದ ನಂತರ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳೀಯ ಪೊಲೀಸರು ಬಂದು ಬಾಗಿಲು ಒಡೆದು ನೋಡಿದಾಗ ಕುಟುಂಬದ ಎಲ್ಲ ಸದಸ್ಯರು ಸಾವಿಗೀಡಾಗಿರುವ ದೃಶ್ಯಗಳು ಕಂಡುಬಂದಿದೆ.

Bengaluru City Police: ಸೈಬರ್‌ ವಂಚಕನಿಂದ 3 ಲಕ್ಷಕ್ಕೆ ಕೈಯೊಡ್ಡಿ, ಕೇರಳ ಪೊಲೀಸರಿಗೆ ಸಿಕ್ಕಿಬಿದ್ದರು

ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದನಾ ಯಜಮಾನ: ಇನ್ನು ಮೃತ ದಂಪತಿಯ ಪೈಕಿ ಪತಿ ವಿಜಯ್(31), ಪತ್ನಿ ಹೇಮಾವತಿ (29) ಹಾಗೂ ಇಬ್ಬರು ಹೆಣ್ಣು ಮಕ್ಕಳಾದ ಮೋಕ್ಷಮೇಘನಯನ (2 ವರ್ಷ 6 ತಿಂಗಳು) ಹಾಗೂ ಸೃಷ್ಟಿಸುನಯನ (8 ತಿಂಗಳು) ಸಾವನ್ನಪ್ಪಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಯಾವುದೋ ಬಲವಾದ ಕಾರಣದಿಂದ ಬೇಸತ್ತಿದ್ದ ಕುಟುಂಬದ ಯಜಮಾನ ವಿಜಯ್‌ ತನ್ನ ಹೇಮಾವತಿ ಹಾಗೂ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿದ ನಂತರ ಆತನೂ ಆತ್ಮಹತ್ಯೆ ಶರಣಾಗಿರಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನು ಕಾಡುಗೋಡಿ ಪೊಲೀಸರು ಸ್ಥಳಕ್ಕೆ ಬೇಟಿ ಪರಿಶೀಲನೆ ಮಾಡುತ್ತಿದ್ದಾರೆ. FSL ತಂಡವೂ ಕೂಡ ಸ್ಥಳಕ್ಕೆ ಭೇಡಿ ನೀಡಿದ್ದು, ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.

ಸೈಬರ್‌ ವಂಚಕನಿಂದ 3 ಲಕ್ಷಕ್ಕೆ ಕೈಯೊಡ್ಡಿ, ಕೇರಳ ಪೊಲೀಸರಿಗೆ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್: ಬೆಂಗಳೂರು (ಆ.03): ಬೆಂಗಳೂರಿನ ಸಾಫ್ಟ್‌ವೇರ್‌ ಉದ್ಯಮಿಗೆ 26 ಲಕ್ಷ ರೂ. ವಂಚನೆ ಮಾಡಿದ್ದ ಸೈಬರ್‌ ಕ್ರೈಮ್‌ ಅಪರಾಧಿಯನ್ನು ಬಂಧಿಸಲು ತೆರಳಿದ್ದ ಬೆಂಗಳೂರು ಪೊಲೀಸರು, ಕಳ್ಳನ ಬಳಿಯೇ 3 ಲಕ್ಷ ಹಣಕ್ಕೆ ಬೇಡಿಕೆಯೊಡ್ಡಿ ಕೇರಳ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈಗ ಕೇರಳ ಪೊಲೀಸ್‌ ಠಾಣೆಯಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಜನಸಾಮಾನ್ಯರಿಗೆ ಅನ್ಯಾವಾದರೆ ನ್ಯಾಯ ಕೊಡಿಸಿ ಎಂದು ಪೊಲೀಸ್‌ ಠಾಣೆಗೆ ಹೋಗುತ್ತಾರೆ. ಆದರೆ, ಜನರು ಏನಾದರೂ ನಷ್ಟ ಅನುಭವಿಸಿ ಸಾಯಲಿ, ನಾವು ಲಂಚದ ಹಣ ತಿಂದು ತೇಗೋಣ ಎಂದು ದೂರು ಕೊಟ್ಟ ಅಮಾಯಕರಿಗೆ ವಂಚನೆ ಮಾಡಲು ಪೊಲೀಸರೇ ಕಳ್ಳರೊಂದಿಗೆ ಶಾಮೀಲಾಗಿರುವ ನೂರಾರು ಘಟನೆಗಳು ನಡೆದಿವೆ.

ಬಿಬಿಎಂಪಿ 45 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಖುದ್ದು ಫೀಲ್ಡ್‌ಗಿಳಿದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್‌

ಕರ್ನಾಟಕದಲ್ಲಿ 26 ಲಕ್ಷ ರೂ. ಹಣವನ್ನು ಕಳೆದುಕೊಂದ ಉದ್ಯಮಿಯ ದೂರು ಆಧರಿಸಿ, ತನಿಖೆ ವೇಳೆ ಅಪರಾಧಿ ಕೇರಳದಲ್ಲಿರುವುದನ್ನು ಪತ್ತೆಹಚ್ಚಿ ಬಂಧನಕ್ಕೆ ತೆರಳಿದ್ದು ಬೆಂಗಳೂರು ಪೊಲೀಸರು ಕಳ್ಳನೊಂದಿಗೆ ಶಾಮೀಲಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. 3 ಲಕ್ಷ ರೂ. ಕೊಟ್ಟರೆ ನಿಮ್ಮನ್ನು ಬಿಟ್ಟುಬಿಡುವುದಾಗಿ ಹೇಳಿ ಹಣ ಪಡೆಯುವಾಗ, ಅಲ್ಲಿನ ಕಳ್ಳ ಕೇರಳದ ಪೊಲೀಸರಿಗೆ ದೂರು ನೀಡಿದ್ದಾನೆ. ಲಂಚ ಪಡೆಯುತ್ತಿದ್ದ ಬೆಂಗಳೂರು ಪೊಲೀಸರನ್ನು ಕೇರಳದ ಪೊಲೀಸರು ಬಂಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ