
ಬೆಂಗಳೂರು (ಸೆ.9): ಪ್ರೇಮವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಮನೆಯಲ್ಲಿ ನೇಣುಬಿಗಿದು ಸಾವಿಗೆ ಶರಣಾದ ಘಟನೆ ರಾಜಾಜಿನಗರದ ಗಾಯತ್ರಿ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಲತಾ(25) ನೇಣುಬಿಗಿದುಕೊಂಡ ಯುವತಿ. ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದವಳು ಮತ್ತು ಮಂಡ್ಯ ಜಿಲ್ಲೆಯ ಮೂಲದ ರಂಜಿತ್ ಎಂಬ ಯುವಕನನ್ನು ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದಳು. ರಂಜಿತ್ ಎಲೆಕ್ಟ್ರೀಷನ್ ಆಗಿ ಕೆಲಸ ಮಾಡುತ್ತಿದ್ದ. ಇಬ್ಬರ ಕುಟುಂಬಗಳೂ ಮದುವೆಗೆ ಒಪ್ಪಿಗೆ ಸೂಚಿಸಿದ್ದರೂ, ರಂಜಿತ್ ಮದುವೆಯ ವಿಚಾರವನ್ನು ಪದೇಪದೇ ಮುಂದೂಡುತ್ತಿದ್ದನು. ಇದೇ ಕಾರಣಕ್ಕೆ ಇಬ್ಬರ ನಡುವೆ ಆಗಾಗ ಗಲಾಟೆಗಳು ನಡೆಯುತ್ತಿದ್ದವು. ನಿನ್ನೆ ರಾತ್ರಿಯೂ ಇದೇ ವಿಷಯಕ್ಕೆ ಸಂಬಂಧಿಸಿ ಲತಾ ಮತ್ತು ರಂಜಿತ್ ನಡುವೆ ತೀವ್ರ ಜಗಳವಾಗಿತ್ತು. ಇದರಿಂದ ಮನನೊಂದ ಲತಾ, ಇಂದು ಬೆಳಿಗ್ಗೆ ತನ್ನ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾಳೆ.
ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಸುಬ್ರಮಣ್ಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರೇಮ ವೈಫಲ್ಯದಿಂದ ಲತಾ ಈ ನಿರ್ಧಾರಕ್ಕೆ ಬಂದಿದ್ದಾಳೆ ಎಂಬುದು ಪ್ರಾಥಮಿಕ ಮಾಹಿತಿಯಾಗಿದೆ. ಅದ್ಯಾಗೂ ಘಟನೆಯ ಸತ್ಯಾಸತ್ಯತೆ ತನಿಖೆಯ ನಂತರ ಬಹಿರಂಗವಾಗಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ