ಬೆಂಗಳೂರಿನಲ್ಲಿ ಪದವಿ ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕರೆದೊಯ್ದು ಅತ್ಯಾಚಾರ ಯತ್ನ ನಡೆದಿದ್ದು, ವಿದ್ಯಾರ್ಥನಿಯನ್ನು ಹೆಬ್ಬಗೋಡಿ ಬಳಿ ಬೀಸಾಡಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬೆಂಗಳೂರು (ಆ.18): ಇಡೀ ದೇಶದಾದ್ಯಂತ ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಚಾರ ನಡೆದು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲಿಯೇ ಬೆಂಗಳೂರಿನಲ್ಲಿ ಪದವಿ ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕರೆದೊಯ್ದು ಅತ್ಯಾಚಾರ ಮಾಡಿ ಬೀಸಾಡಿರುವ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇನ್ನು ವಿದ್ಯಾರ್ಥಿನಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದ್ದು, ಯುವತಿಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ರೇಪ್ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಸಂತ್ರಸ್ತ ವಿದ್ಯಾರ್ಥಿನಿ ಖಾಸಗಿ ಕಾಲೇಜಿನಲ್ಲಿ ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿ ಅಭ್ಯಾಸ ಮಾಡುತ್ತಿದ್ದಳು. ಈ ಯುವತಿಯನ್ನು ನಿನ್ನೆ ರಾತ್ರಿ ಆಟೋದಲ್ಲಿ ಕರೆದೊಯ್ಯುವ ವೇಳೆ ಕೃತ್ಯ ಎಸಗಲಾಗಿದೆ. ಇನ್ನು ವಿದ್ಯಾರ್ಥಿನಿ ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವೈದ್ಯೆ ಮೇಲೆ ನಡೆದ ಅತ್ಯಾಚಾರ, ಹತ್ಯೆ: ಆಸ್ಪತ್ರೆಗಳಿಗೂ ವಿಮಾನ ನಿಲ್ದಾಣ ರೀತಿ ಸುರಕ್ಷತೆ ವಹಿಸುವಂತೆ ಬೇಡಿಕೆ
ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದಾಗ ಘಟನೆಯ ಬಗ್ಗೆ ಸಂತ್ರಸ್ತೆ ಯುವತಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ದೂರು ನೀಡಿದ್ದಾಳೆ. ಯುವತಿಯ ದೂರನ್ನು ಆಧರಿಸಿ ಪೊಲೀಸರು ಸಂಬಂಧಪಟ್ಟ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಬೆಳಗ್ಗೆ ಘಟನೆ ಸಂಬಂಧ ಹೆಚ್ ಎಸ್ ಆರ್ ಲೇಔಟ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಸದ್ಯ ಸಂತ್ರಸ್ತೆಗೆ ಮೆಡಿಕಲ್ ಟೆಸ್ಟ್ ಮಾಡಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಹೆಚ್ ಎಸ್ ಆರ್ ಲೇಔಟ್ ಠಾಣೆ ಪೊಲೀಸರಿಂದ ತನಿಖೆ ಮುಂದುವರೆದಿದೆ.
ತಡರಾತ್ರಿವರೆಗೂ ಪಾರ್ಟಿ ಮಾಡಿದ್ದ ಯುವತಿ: ಇನ್ನು ನಿನ್ನೆ ರಾತ್ರಿ ವೇಳೆ ಅತ್ಯಾಚಾರ ಸಂತ್ರಸ್ತೆ ಯುವತಿ ಕೋರಮಂಗಲದ ಪಬ್ ಒಂದರಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದಾಳೆ. ಬಳಿಕ ಕಾರಿನಲ್ಲಿ ಸ್ನೇಹಿತರ ಜೊತೆ ಮನೆಗೆ ಹೊರಟಿರುವಾಗ, ತಾನು ಆಟೋದಲ್ಲಿ ಮನೆಗೆ ಹೋಗುವುದಾಗಿ ಕಾರಿನಿಂದ ಇಳಿದಿದ್ದಾಳೆ. ಕೋರಮಂಗಲದ ಎನ್.ಎಂ.ಜಿ ಜಂಕ್ಷನ್ ಬಳಿ ಕಾರಿನಿಂದ ಇಳಿದಿ ಆಟೋ ಹತ್ತಿ ಮನೆಯತ್ತ ಹೋಗುವುದಾಗಿ ಕಾರಿನಲ್ಲಿದ್ದ ಸ್ನೇಹಿತರನ್ನು ಕಳಿಸಿದ್ದಾಳೆ. ಈ ವೇಳೆ ಯುವತಿ ಮೈ ಮೇಲೆ ಪ್ರಜ್ಞೆ ಇಲ್ಲದಂತೆ ಕುಡಿದು ಓಲಾಡುತ್ತಿದ್ದು, ಮನೆಯ ಅಡ್ರೆಸ್ ಹೇಳಿ ಆಟೋದಲ್ಲಿಯೇ ಮಲಗಿದ್ದಾಳೆ.
ಈ ವೇಳೆ ಯುವತಿಗೆ ಪ್ರಜ್ಞೆ ಇಲ್ಲದಿರುವುದನ್ನು ನೋಡಿದ ಆಟೋ ಚಾಲಕ ಯುವತಿ ಮೇಲೆ ಆಟೋದಲ್ಲಿ ಆತ್ಯಾಚಾರಕ್ಕೆ ಯತ್ನ ಮಾಡಿದ್ದಾನೆ. ಬಳಿಕ ಆಟೋ ಚಾಲಕ ಹೆಚ್ ಎಸ್ ಆರ್ ಲೇಔಟ್ ಕಡೆ ಹೋಗಿದ್ದಾನೆ. ಅಲ್ಲಿ ಅತ್ಯಾಚಾರ ಕಿರುಕುಳ ನೀಡಿ, ಅಲ್ಲಿಂದ ಹೆಬ್ಬುಗೋಡಿ ಕಡೆ ಆಕೆ ಕರೆದುಕೊಂಡು ಹೋಗಿ ಬಿಸಾಡಿದ್ದಾರೆ. ಯುವತಿ ಹೆಬ್ಬಗೋಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಖಾಸಗಿ ಆಸ್ಪತ್ರೆಯವರು ಕೋರಮಂಗಲ ಪೊಲೀಸರಿಗೆ ಎಂಎಲ್ ಸಿ ಕಳಿಸಿದ್ದರು. ಕೋರಮಂಗಲ ಪೊಲೀಸರು ನಮ್ಮ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆ. ಸಂತ್ರಸ್ಥೆ ಬರೀ ಕಾರು ಹತ್ತಿ ಹೋಗಿದ್ದಾರೆ ಎಂದು ಕೋರಮಂಗಲ ಪೊಲೀಸರು ಹಾಗೂ ಎಚ್ ಎಸ್ ಆರ್ ಲೇಔಟ್ ಪೊಲೀಸರ ನಡುವೆ ಜಾಟಪಟಿ ಮಾಡಿದ್ದಾರೆ. ಕೊನೆಗೆ ಡಿಸಿಪಿ ಸೂಚನೆ ಮೇರೆಗೆಹೆಚ್‌ಎಸ್‌ಆರ್ ಠಾಣೆಯಲ್ಲಿ ಯುವತಿ ದೂರನ್ನು ದಾಖಲಿಸಿಕೊಂಡು ಕ್ರಮಕ್ಕೆ ಮುಂದಾಗಿದ್ದಾರೆ.
ದೇಶಾದ್ಯಂತ ವೈದ್ಯರು ಮುಷ್ಕರ ನಡೆಸುತ್ತಿರುವುದೇಕೆ?: ಕೋಲ್ಕತಾ ಆಸ್ಪತ್ರೆಯಲ್ಲಿ ಆ.9 ರಂದು ಆಗಿದ್ದೇನು?
ಬೆಂಗಳೂರಿನ ಹೆಚ್ಎಸ್‌ಆರ್ ಲೇಔಟ್‌ನಲ್ಲಿ ಅತ್ಯಾಚಾರ ಪ್ರಯತ್ನ ಆಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸಂತ್ರಸ್ತ ಯುವತಿ ದೂರು ನೀಡಿದ್ದಾರೆ. ಅದು ಮೆಡಿಕಲ್ ಟೆಸ್ಟ್ ನಡೆಯುತ್ತಿದೆ. ಗ್ಯಾಂಗ್ ರೇಪ್ ಪ್ರಯತ್ನ ಇಲ್ಲಿ ನಡೆದಿದರೋದು ನಿಜ. ಪ್ರೊಸೀಜರ್ ಏನಾಗಿದೆ ಎಂದು ನೋಡಬೇಕು. ನಂತರವೇ ಬಗ್ಗೆ ಪೂರ್ಣ ಮಾಹಿತಿ ನೀಡಲಾಗುತ್ತದೆ. ಸದ್ಯಕ್ಕೆ ಸಂತ್ರಸ್ತ ಯುವತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- ಡಾ.ಜಿ. ಪರಮೇಶ್ವರ್, ಗೃಹ ಸಚಿವ