ಬೆಂಗಳೂರಿನಿಂದ ಬಳ್ಳಾರಿಗೆ ಅಜ್ಜಿ ಶವ ಕೊಂಡೊಯ್ಯುತ್ತಿದ್ದ ಕಾರು ಪಲ್ಟಿ: ಮೂವರು ಮೊಮ್ಮಕ್ಕಳ ಸಾವು

By Sathish Kumar KH  |  First Published Jan 19, 2024, 6:07 PM IST

ಅಜ್ಜಿಯ ಮೃತ ದೇಹ ಕಾರಿನಲ್ಲಿ ಕೊಂಡೊಯ್ಯುವಾಗ ಚಿತ್ರದುರ್ಗದ ಬಳಿ ಕಾರಿನ ಟೈರ್ ಬ್ಲ್ಯಾಸ್ಟ್‌ ಆಗಿದ್ದು, ಕಾರು ಪಲ್ಟಿಯಾಗಿ ಮೂವರು ಹೆದ್ದಾರಿಯಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.


ಚಿತ್ರದುರ್ಗ (ಜ.19): ಅಜ್ಜಿಗೆ ಅನಾರೋಗ್ಯವೆಂದು ಚಿಕಿತ್ಸೆ ಕೊಡಿಸುವುದಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಅಜ್ಜಿ ಸಾವನ್ನಪ್ಪಿದ್ದಾರೆ. ಇನ್ನು ಮೃತ ದೇಹವನ್ನು ಕಾರಿನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ಕೊಂಡೊಯ್ಯುವಾಗ ಚಿತ್ರದುರ್ಗದ ಬಳಿ ಕಾರಿನ ಟೈರ್ ಬ್ಲ್ಯಾಸ್ಟ್‌ ಆಗಿದ್ದು, ವೇಗದಲ್ಲಿದ್ದ ಕಾರು ಪಲ್ಟಿಯಾಗಿ ಅಜ್ಜಿಯ ಮೂವರು ಮೊಮ್ಮಕ್ಕಳು ಕೂಡ ಹೆದ್ದಾರಿಯಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಅಜ್ಜಿಯ ಶವ ಕೊಂಡೊಯ್ಯುವಾಗ ಟೈಯರ್ ಬ್ಲಾಸ್ಟ್ ಕಾರು ಪಲ್ಟಿ, 3  ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗದ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ ನಡೆದಿದೆ. ರಾಂಪುರ ಬಳಿಯ ಗ್ರ್ಯಾಂಡ್ ಪೋರ್ಡ್ ಹೋಟೆಲ್ ಬಳಿ ಮಧ್ಯಾಹ್ನದ ವೇಳೆ ಘಟನೆ ನಡೆದಿದೆ. ಮೃತರೆಲ್ಲರೂ ಬಳ್ಳಾರಿಯ ಸಿರುಗುಪ್ಪ ಮೂಲದವರು ಎಂದು ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಿಂದ ಅಜ್ಜಿಯ ಶವ  ಸಿರುಗುಪ್ಪಗೆ ಕೊಂಡೊಯ್ಯುತ್ತಿದ್ದರು. ಅಜ್ಜಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

Tap to resize

Latest Videos

undefined

ಕರ್ನಾಟಕ- ಅಯೋಧ್ಯೆ ಪಾದಯಾತ್ರೆ: ರಾಮ ಮಂದಿರಕ್ಕೆ 1,800 ಕಿ.ಮೀ. ನಡೆದುಕೊಂಡು ಹೋದ ಗದಗಿನ ಗಾಂಧಿ

ಇನ್ನು ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಉಳಿದ 3 ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ರಾಂಪುರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಸ್ಥಳಕ್ಕೆ ಪಿಎಸ್ಐ ಪರಶುರಾಮ್ ಲಮಾಣಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಮೃತ ದೇಹಗಳನ್ನು ಕೂಡ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನ ಟೈರ್ ಬ್ಲಾಸ್ಟ್‌ ಆಗಿದ್ದೇ ಕಾರು ಅಪಘಾತಕ್ಕೆ ಕಾರಣವೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮೃತರೆಲ್ಲರೂ‌ ಸಿರುಗುಪ್ಪ ಮೂಲದವರಾಗಿದ್ದಾರೆ.  ಸುರೇಶ್ (40) ,  ಮಲ್ಲಿ (25),  ಭೂಮಿಕ (9) ಮೃತ ದುರ್ದೈವಿಗಳು. ಇನ್ನು ನಾಗಮ್ಮ (31), ತಾಯಮ್ಮ (56), ಧನರಾಜ್ (39) ಹಾಗೂ ಚಾಲಕ ಶಿವು (26) ಗಂಭೀರ ಗಾಯಾಳುಗಳು ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಮೃತ ದೇಹಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದವು. ಇನ್ನು ಅಪಘಾತವಾದ ಸ್ಥಳದಲ್ಲಿ ಸಮಾರು 2 ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಶಿವಮೊಗ್ಗದಲ್ಲಿ ಪ್ರೀತಿಸಿ ಮದುವೆಯಾಗಿದ್ದ ಮಲೆನಾಡಿನ ಶಮಿತಾ ಆತ್ಮಹತ್ಯೆ!

ಪ್ರೀತಿಸಿ ಮದುವೆಯಾಗಿದ್ದ ನವವಧು ನೇಣಿಗೆ ಶರಣು- ಶಿವಮೊಗ್ಗ : ಕಳೆದ ಎಂಟು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಮಲೆನಾಡಿನ ನವ ವಿವಾಹಿತೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಪಂ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ಶಮಿತಾ ಬಿ.ಯು (24) ಮೃತ ದುರ್ಧೈವಿಯಾಗಿದ್ದಾರೆ.ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ರಾತ್ರಿ ಪಾಳಿಯಲ್ಲಿ ಪತಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್ ಪ್ರೀತಿಸಿ ಮದುವೆಯಾಗಿದ್ದರು. ರಾತ್ರಿ ಅತ್ತೆ ಮಾವನಿಗೆ ತಿಳಿಸಿ ಶರ್ಮಿತಾ ರಾತ್ರಿ ಊಟ ಮಾಡಿ ಮಲಗಲು ಕೋಣೆಗೆ  ತೆರಳಿದ್ದರು. ಆದರೆ, ಬೆಳಗಾಗುವಷ್ಟರಲ್ಲಿ ನೇಣಿಗೆ ಶರಣಾಗಿದ್ದಾರೆ.

click me!