ಡಿಜೆ ಹಳ್ಳಿ-ಕೆಜಿಹಳ್ಳಿ ಕೇಸ್ : ಅವಹೇಳನಕಾರಿ ಪೋಸ್ಟ್ ಹಾಕಿದ ಅಖಂಡ ಸೋದರಳಿಯಗೆ ಜಾಮೀನು

Suvarna News   | Asianet News
Published : Oct 22, 2020, 02:31 PM IST
ಡಿಜೆ ಹಳ್ಳಿ-ಕೆಜಿಹಳ್ಳಿ ಕೇಸ್  : ಅವಹೇಳನಕಾರಿ ಪೋಸ್ಟ್ ಹಾಕಿದ ಅಖಂಡ ಸೋದರಳಿಯಗೆ ಜಾಮೀನು

ಸಾರಾಂಶ

  ಡಿಜೆ ಹಳ್ಳಿ-ಕೆಜಿಹಳ್ಳಿ ಕೇಸ್‌ಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಂಡ ಶ್ರೀನಿವಾಸಮೂರ್ತಿ ಅಳಿಯಗೆ ಜಾಮೀನು ನೀಡಲಾಗಿದೆ

ಬೆಂಗಳೂರು (ಅ.22):   ಡಿಜೆ ಹಳ್ಳಿ ಕೆಜಿ‌ಹಳ್ಳಿ ಗಲಭೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ನವೀನ್ ಗೆ ಜಾಮೀನು ನೀಡಲಾಗಿದೆ. 

ಬಿ.ಎ.ಪಾಟೀಲ್ ನೇತೃತ್ವದ ಹೈಕೋರ್ಟ್ ಏಕ ಸದಸ್ಯ ಪೀಠ ನವೀನ್‌ಗೆ ಜಾಮೀನು ಮಂಜೂರು ಮಾಡಿದೆ. 

ಆರೋಪಿಯ ಜೀವಕ್ಕೆ ಅಪಾಯವಿದೆ ಅನ್ನೋ ಕಾರಣಕ್ಕೆ ಜಾಮೀನು ನೀಡದೆ ಇದ್ದರೆ ತಪ್ಪಾಗುತ್ತದೆ. ಆತನ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ಆದೇಶದ ವೇಳೆ ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.

ಡಿಜೆ ಹಳ್ಳಿ ಗಲಭೆ: ಪ್ರಮುಖ ಆರೋಪಿ ಪರ ಕೈ ನಾಯಕರ ಬ್ಯಾಟಿಂಗ್?

 ನವೀನ್ ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅಳಿಯ ನವೀನ್ ತಾನೂ ಪೋಸ್ಟ್ ಫಾರ್ವರ್ಡ್ ಮಾಡಿ ಡಿಲೀಟ್ ಮಾಡಿದ್ದಾಗಿ ಒಪ್ಪಿಕೊಂಡಿದ್ದ.  ರಾಜಕೀಯ ವಾಗಿ ‌ನವೀನ್ ನ ಟಾರ್ಗೇಟ್ ಮಾಡಲಾಗಿದೆ ಎಂದು ನವೀನ್ ಪರ ವಕೀಲರು ಹೈಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರು. 

ನವೀನ್ ವಿರುದ್ಧ ಸೆಕ್ಷನ್ 153ಎ ಹಾಗೂ 295ಎ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.  ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲೂ ಪ್ರಕರಣ ದಾಖಲಾಗಿತ್ತು.  ಆಕ್ಷೇಪಾರ್ಹ ಪೋಸ್ಟ್‌ ಹಾಕಿದ್ದ ಕಾರಣಕ್ಕೆ ಈ ಕಾಯ್ದೆಗಳ ಅಡಿ ಪ್ರಕರಣ ದಾಖಲಾಗಿತ್ತು. ಇದೀಗ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!