ಬೆಂಗಳೂರಿನಲ್ಲಿ ಒಂಟಿ ಮನೆಗಳ ಬಾಗಿಲು ಮುರಿದು ಕಳ್ಳತನ ಮಾಡುತ್ತಿದ್ದ ಐನಾತಿ ಕಳ್ಳನನ್ನು ಬಂಧಿಸಿರುವ ಗಿರಿನಗರ ಪೊಲೀಸರು ಆತನ ಜೀವನ ಶೈಲಿಯನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.
ಬೆಂಗಳೂರು (ಆ.16): ಬೆಂಗಳೂರಿನಲ್ಲಿ ಒಂಟಿ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ಬಂದು ಕಳ್ಳತನ ಮಾಡುತ್ತಿದ್ದ ಐನಾತಿ ಕಳ್ಳನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕದ್ದ ಆಭರಣಗಳೊಂದಿಗೆ ಕಾಡಿಗೆ ತೆರಳಿ ಅಲ್ಲಿ ವಾಸಿಸುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ.
ಹೌದು, ಬೆಂಗಳೂರಿನ ಗಿರಿನಗರ ಪೊಲೀಸರು ಐನಾತಿ ಕಳ್ಳನನ್ನು ಸೆರೆ ಹಿಡಿದಿದ್ದಾರೆ. ಸಿಟಿಯಲ್ಲಿ ಕಳ್ಳತನ, ಕಾಡಿನಲ್ಲಿ ವಾಸ ಮಾಡುತ್ತಿದ್ದನು. ಈತ ಕದ್ದ ಆಭರಣಗಳೊಂದಿಗೆ ಕಾಡಿಗೆ ಎಸ್ಕೇಪ್ ಆಗುತ್ತಿದ್ದನು. ಹೀಗೆ, ನಗರದಲ್ಲಿ ಕಳ್ಳತನ ಮಾಡಿ ಕಾಡಿನಲ್ಲಿ ವಾಸ ಮಾಡುತ್ತಿದ್ದ ಕುಖ್ಯಾತ ಕಳ್ಳ ನರಸಿಂಹಾರೆಡ್ಡಿ ಈಗ ಬಂಧನವಾಗಿದ್ದಾನೆ. ಸುಮಾರು 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದನು. ಇತ್ತೀಚೆಗೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿದ್ದ ಜಾಡು ಹಿಡಿದು ತನಿಖೆ ಆರಂಭಿಸಿದ ಪೊಲೀಸರಿಗೆ ಕದ್ದ ಆಭರಣ ಸಮೇತ ಕಾಡಿನಲ್ಲಿ ವಾಸವಾಗಿದ್ದನ್ನು ಪತ್ತೆ ಮಾಡಿದ್ದಾರೆ.
undefined
ಮಹಿಳೆ ಅರೆ ನಗ್ನಗೊಳಿಸಿ ವಾರ್ಡ್ ಬಾಯ್‌ನಿಂದ ಸರ್ಜರಿ: ವ್ಯಾಟ್ಸಾಪ್ ವಿಡಿಯೋದಿಂದ ಪ್ರಕರಣ ಬೆಳಕಿಗೆ!
ಈತ ಎರಡು ಕಾಡುಗಳಲ್ಲಿ ತಲೆಮರೆಸಿಕೊಳ್ಳುತ್ತಿದ್ದನು. ನೆಲಮಂಗಲ ಬಳಿಯ ಗುಡೇಮಾರನಹಳ್ಳಿ ಹಾಗೂ ಕೃಷ್ಣಗಿರಿಯ ಫಾರೆಸ್ಟ್ ನಲ್ಲಿ ತಲೆಮರೆಸಿಕೊಳ್ಳುತ್ತಿದ್ದನು. ಈತ ಹಗಲಿನಲ್ಲಿ ಕಾಡಿನ ಬಂಡೆಗಳ ಮೇಲೆ ಹಾಗೂ ರಾತ್ರಿ ವೇಳೆ ಮರಗಳ ಮೇಲೆ ಮಲಗುತ್ತಿದ್ದನು. ಅಷ್ಟೇ ಅಲ್ಲದೇ ಈತ ಆಗಾಗ ಸಿಟಿಗೆ ಬಂದು ಸುತ್ತಾಡಿ ಒಂಟಿ ಮನೆಗಳು ಹಾಗೂ ಬೀಗ ಹಾಕಿರುವ ಮನೆಗಳನ್ನು ನೋಡಿಕೊಂಡು ರಾತ್ರಿ ಬಂದು ಕಳ್ಳತನ ಮಾಡುತ್ತಿದ್ದನು. ನಂತರ ಪೊಲೀಸರಿಗೆ ಸಿಗದೇ ಕಾಡಿಗೆ ಹೋಗಿ ವಾಸ ಮಾಡುತ್ತಿದ್ದನು. ಬೆನ್ನುಬಿದ್ದ ಪೊಲೀಸರಿಗೆ ನೀವು ನನ್ನನ್ನು ಹಿಡಿಯಲು ಸಾಧ್ಯವೇ ಇಲ್ಲ ಎಂದು ಚಾಲೆಂಜ್ ಮಾಡಿ ಹೋಗುತ್ತಿದ್ದನು.
ಈತ ಪೊಲೀಸರು ನನ್ನ ಹಿಂದೆ ಬರಬೇಕು, ಬೆನ್ನು ಬಿದ್ದು ನನ್ನನ್ನು ಬಂಧಿಸಬೇಕು ಎಂದು ಚಾಲೆಂಜ್ ಮಾಡುತ್ತಿದ್ದನು. ಹೀಗೆ ಗುಡೇಮಾರನಹಳ್ಳಿ ಕಾಡಿನಲ್ಲಿದ್ದ ವೇಳೆ ಗಿರಿನಗರ ಪೊಲೀಸರಿಂದ ನರಸಿಂಹ ರೆಡ್ಡಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ನೆಲಮಂಗಲದ ಸೋಲೂರು ಮೂಲದ ನರಸಿಂಹಾರೆಡ್ಡಿ ಆಗಿದ್ದಾನೆ. ಬಂಧಿತನಿಂದ ಬರೋಬ್ಬರಿ 70 ಲಕ್ಷ ರೂ. ಮೌಲ್ಯದ ಒಂದು ಕೆಜಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಒಂಟಿ ಮನೆಗಳು, ಬೀಗ ಹಾಕಿದ ಮನೆಗಳನ್ನ ಟಾರ್ಗೇಟ್ ಮಾಡುತ್ತಿದ್ದ ಆರೋಪಿಯ ಕಾಟಕ್ಕೆ ಸ್ಥಳೀಯರು ಬೇಸತ್ತಿದ್ದರು.
ಭಾರತದ ಐಟಿ ಉದ್ಯಮ ಕುಸಿತ ಭೀತಿ: ಅಮೇರಿಕದ ಸಾಫ್ಟ್‌ವೇರ್ ಪ್ರಾಜೆಕ್ಟ್‌ಗಳು ವಿಯೆಟ್ನಾಂ, ಫಿಲಿಪೈನ್ಸ್ ಪಾಲು
ವರ ಮಹಾಲಕ್ಷ್ಮಿ ಹಬ್ಬದ ಫೋಟೋ ಸಾಮಾಜಿಕ ಜಾಲತಾಣಕ್ಕೆ ಶೇರ್ ಮಾಡಬೇಡಿ:
ವರ ಮಹಾಲಕ್ಷ್ಮಿ ಹಬ್ಬದಲ್ಲಿ ಲಕ್ಷ್ಮಿಯನ್ನು ಚಿನ್ನಾಭರಣಗಳಿಂದ ಅಲಂಕಾರ ಮಾಡಿ ಇನ್ಸ್ಟಾಗ್ರಾಂ , ಫೇಸ್ ಬುಕ್ ಶೇರ್ ಮಾಡುವ ಮುನ್ನ ಎಚ್ಚರವಾಗಿರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ. ಲಕ್ಷ್ಮೀ ದೇವಿಯ ಮೈ ಮೇಲೆ ಆಭರಣಗಳನ್ನ ಹಾಕಿರೋರು ಹುಷಾರಾಗಿರಿ. ನೀವು ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತ ಫೋಟೋಗಳನ್ನು ಹಂಚಿಕೊಂಡರೆ ಸೀದಾ ನಿಮ್ಮ ಮನೆಗೆ ಕಳ್ಳರು ಕಳ್ಳತನ ಮಾಡಲು ಸಂಚು ರೂಪಿಸುತ್ತಾರೆ. ನಿಮ್ಮ ಮನೆಗೆ ಯಾರೇ ಅನುಮಾನಾಸ್ಪದ ವ್ಯಕ್ತಿಗಳು ಬಂದರೂ ಅವರನ್ನು ವಿಚಾರಿಸಿ. ಅನುಮಾನ ಬಂದಲ್ಲಿ ಪೊಲೀಸರಿಗೆ ತಿಳಿಸಿ. ಇನ್ನು ನೀವು ದುಡಿದು ಕಷ್ಟಪಟ್ಟು ಸಂಪದಾನೆ ಮಾಡಿದ ಹಣ ಮತ್ತು ಖರೀದಿಸಿದ ಆಭರಣಗಳನ್ನು ತೋರ್ಪಡಿಕೆ ಮಾಡಿ ಕಳ್ಳರ ಪಾಲಾಗುವಂತೆ ಮಾಡಬೇಡಿ ಎಂದು ಪೊಲೀಸರು ಸೂಚನೆ ನಿಡಿದ್ದಾರೆ.