ಮಹಿಳೆಗೆ ಸಾಲ ಕೊಟ್ಟು ಮಂಚಕ್ಕೆ ಕರೆದ ಆನ್‌ಲೈನ್ ಸ್ನೇಹಿತ, ಒಪ್ಪದ ಗೃಹಿಣಿಗೆ ಬೆದರಿಕೆ, ಕಿರುಕುಳ!

Kannadaprabha News   | Kannada Prabha
Published : Dec 22, 2025, 06:10 AM IST
Bengaluru housewife harassment by online friend who lent money to a woman

ಸಾರಾಂಶ

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯಿಂದ 30 ಸಾವಿರ ರೂ. ಸಾಲ ಪಡೆದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಹಣದ ನೆಪದಲ್ಲಿ ಅಶ್ಲೀಲ ವಿಡಿಯೋ ಕಳುಹಿಸಿ, ನಂಬರ್ ಸಾರ್ವಜನಿಕವಾಗಿ ಹಾಕುವುದಾಗಿ ಬೆದರಿಸಿದ ಆರೋಪಿ ಪಾರಿತೋಷ್ ಯಾದವ್ ವಿರುದ್ಧ ಮಹಿಳೆ ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು (ಡಿ.22): ಸಾಮಾಜಿಕ ಜಾಲತಾಣದ ಮೂಲಕ ಪರಿಚಿತನಾದ ವ್ಯಕ್ತಿಯೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು, ನೊಂದ ಮಹಿಳೆ ಆರೋಪಿ ವಿರುದ್ಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮಹಿಳೆ ನೀಡಿದ ದೂರಿನನ್ವಯ ಪಾರಿತೋಷ್ ಯಾದವ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಲಗ್ಗೆರೆ ನಿವಾಸಿಯಾಗಿರುವ 32 ವರ್ಷದ ಮಹಿಳೆಗೆ ಮದುವೆಯಾಗಿ ಮಕ್ಕಳಿದ್ದು, ಒಂದು ವರ್ಷದ ಹಿಂದೆ ಪಾರಿತೋಷ್ ಯಾದವ್ ಎಂಬಾತ ಆ್ಯಪ್‌ವೊಂದರ ಮೂಲಕ ಪರಿಚಯವಾಗಿದ್ದು, ನಂತರ ಇಬ್ಬರ ಮಧ್ಯೆ ಸ್ನೇಹ ಉಂಟಾಗಿತ್ತು. ಈ ನಡುವೆ ಜನರೇಟರ್‌ ಸ್ಫೋಟಗೊಂಡ ಪರಿಣಾಮ ಮಹಿಳೆಯ ಮಗಳಿಗೆ ಗಂಭೀರ ಗಾಯವಾಗಿತ್ತು. ಮಗಳ ಚಿಕಿತ್ಸೆಗಾಗಿ ಮಹಿಳೆ ಪಾರಿತೋಶ್ ಯಾದವ್ ಬಳಿ 30 ಸಾವಿರ ರು. ಸಾಲ ಪಡೆದಿದ್ದಳು.

ಸ್ವಲ್ಪ ದಿನಗಳ ನಂತರ ಆರೋಪಿ ಕೊಟ್ಟಿರುವ ಹಣವನ್ನು ವಾಪಸ್‌ ನೀಡುವಂತೆ ಕೇಳಿದ್ದ. ಹಣ ನೀಡಲು ಸ್ವಲ್ಪ ಕಾಲಾವಕಾಶ ಬೇಕು ಎಂದು ಮಹಿಳೆ ಹೇಳಿದ್ದರು. ಮಹಿಳೆಯ ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡ ಆರೋಪಿ ಮಹಿಳೆಗೆ ಅಶ್ಲೀಲ ವಿಡಿಯೋಗಳನ್ನು ಕಳುಹಿಸಿ ದೈಹಿಕವಾಗಿ ಸಹಕರಿಸುವಂತೆ ಕಿರುಕುಳ ನೀಡಿದ್ದಾನೆ.

.ನಂಬರ್‌ ಪಬ್ಲಿಕ್ ಟಾಯ್ಲೆಟ್‌ನಲ್ಲಿ ಬರೆಯುವ ಬೆದರಿಕೆ

ನನಗೆ ಸಹಕರಿಸದಿದ್ದರೆ ನಿನ್ನ ನಂಬರ್‌ ಅನ್ನು ಸೆಕ್ಸ್ ಆ್ಯಪ್‌ಗಳಲ್ಲಿ ಹಾಕುತ್ತೇನೆ, ಪಬ್ಲಿಕ್ ಟಾಯ್ಲೆಟ್ ಮತ್ತು ಸೋಶಿಯಲ್ ಮೀಡಿಯಾಗಳಲ್ಲಿ ನಿನ್ನ ನಂಬರ್ ಬರೆದು ವೇಶ್ಯಾವಾಟಿಕೆ ಮಾಡುವವರು ಎಂದು ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದ. ಜತೆಗೆ ಅಶ್ಲೀಲ ಫೋಟೋ ಮತ್ತು ವಿಡಿಯೋವನ್ನು ಕಳುಹಿಸಿ ಮಾನಸಿಕ ಹಿಂಸೆ ನೀಡಿದ್ದ. ಈ ವಿಷಯ ಆಕೆ ಪತಿಗೂ ಗೊತ್ತಾಗಿ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿತ್ತು. ಇದರಿಂದ ಮನನೊಂದು ಮಹಿಳೆ ಪೀಣ್ಯದಲ್ಲಿರುವ ಸ್ನೇಹಿತೆ ಮನೆಗೆ ಹೋಗಿದ್ದರು. ನಂತರ ಆತ್ಮ೧ಹತ್ಯೆ ಮಾಡಿಕೊಳ್ಳಲು ಯೋಚಿಸಿ ಶಿವಪುರ ಕೆರೆ ಹೋಗಿ, ಕೈಕುಯ್ದುಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಸ್ನೇಹಿತೆಯರು ಆಕೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚೇತರಿಸಿಕೊಂಡಿರುವ ಮಹಿಳೆ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ತನಗೆ ಮಾನಸಿಕವಾಗಿ ಹಿಂಸೆ ನೀಡುತ್ತಿರುವ ಆರೋಪಿಯ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- ಲಗ್ಗೆರೆ ನಿವಾಸಿ, 32 ವರ್ಷದ ಮಹಿಳೆ ಸಂತ್ರಸ್ತೆ. ಈಕೆಗೆ ಮಕ್ಕಳಿದ್ದಾರೆ.-ವರ್ಷದ ಹಿಂದೆ ಆನ್‌ಲೈನ್‌ನಲ್ಲಿ ಪಾರಿತೋಷ್ ಯಾದವ್ ಎಂಬಾತ ಪರಿಚಯ, ಸ್ನೇಹ-ಈ ಮಧ್ಯೆ ಜನರೇಟರ್‌ ಸ್ಫೋಟದಿಂದ ಮಹಿಳೆ ಮಗಳಿಗೆ ಗಂಭೀರ ಗಾಯವಾಗಿತ್ತು- ಮಗಳ ಚಿಕಿತ್ಸೆಗಾಗಿ ಮಹಿಳೆ ಯಾದವ್ ಬಳಿ 30 ಸಾವಿರ ಸಾಲ ಪಡೆದಿದ್ದಳು-ಇದನ್ನೇ ದುರುಪಯೋಗಪಡಿಸಿಕೊಂಡ ಆತ ಅಶ್ಲೀಲ ವಿಡಿಯೋ ಕಳಿಸಿ ಕಿರುಕುಳ ಕೊಟ್ಟಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು
ಕರೆಂಟ್‌ ಅಕೌಂಟಲ್ಲಿ ₹150 ಕೋಟಿ ಅಲ್ಲ, ₹1 ಸಾವಿರ ಕೋಟಿ ವಹಿವಾಟು