ಗಂಡ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಲೈವ್ ವೀಡಿಯೊ ಮಾಡಿಕೊಂಡು ಆತ್ಮಹತ್ಯೆ ಮಾಡಿದ ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆಡಿದೆ.
ಬೆಂಗಳೂರು (ಜು.29): ಗಂಡ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಲೈವ್ ವೀಡಿಯೊ ಮಾಡಿಕೊಂಡು ಆತ್ಮಹತ್ಯೆ ಮಾಡಿದ ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆಡಿದೆ. ಮಾನಸ (25)ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಆದರೆ, ದಿಲೀಪ್ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು.
ಇದರಿಂದ ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸ ಅಂದ್ರಹಳ್ಳಿ ಗಂಡನ ಮನೆಯಲ್ಲಿ ವಾಸವಿದ್ದರು. ಭಾನುವಾರ ಸಂಜೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಬಳಿಕ ದಿಲೀಪ್ ಮನೆಯವರ ವಿರುದ್ಧ ಮಾನಸ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತಿ ಕಿರುಕುಳದಿಂದ ಆತ್ಮಹತ್ಯೆ ಎಂದು ಆರೋಪಿಸಿದ್ದಾರೆ. ಠಾಣೆ ಮುಂಭಾಗವೇ ಗಂಡನ ಕಡೆಯವರಿಗೆ ಹಲ್ಲೆ ನಡೆಸಲಾಗಿದೆ. ಸದ್ಯ ಮಾನಸ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಂದೆ ಕಿರುಕುಳದಿಂದ ಮಗ ಆತ್ಮಹತ್ಯೆ: ತಂದೆಯ ಕಿರುಕುಳದಿಂದ ಬೇಸತ್ತ ಮಗನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಸೀಕೆರೆ ಪಟ್ಟಣದ ಟಿಪ್ಪು ನಗರದಲ್ಲಿ ನಡೆದಿದೆ. ಟಿಪ್ಪು ನಗರದ ಅಖಿಲ್ ಪಾಷ(25) ಆತ್ಮಹತ್ಯೆ ಮಾಡಿಕೊಂಡಾತ. ಈತ ಮೂರು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ. ಆತನ ತಂದೆ ಸೈಯ್ಯದ್ ಪಾಷ ವಿನಾಕಾರಣ ಮಗ ಸೊಸೆಗೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಮಾಡಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಅಖಿಲ್ ಪಾಷ ತನ್ನ ಡ್ರೈವಿಂಗ್ ಲೈಸನ್ಸ್, ಆಧಾರ್ ಕಾರ್ಡ್ ಸೇರಿದಂತೆ ಹಲವು ದಾಖಲೆಗಳನ್ನು ಹಾಸನದ ಪೆನ್ಷನ್ ಮೊಹಲ್ಲಾದಲ್ಲಿರುವ ತನ್ನ ತಂದೆ ಮನೆಯಲ್ಲೇ ಬಿಟ್ಟಿದ್ದ.
Breaking: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಮತ್ತೆರಡು ಬಲಿ
ಅವುಗಳನ್ನು ವಾಪಸ್ ಕೊಡುವಂತೆ ಕೇಳಿದಾಗಲೂ ತಂದೆ ಅವುಗಳನ್ನು ಕೊಡದಿದ್ದಾಗ ಜಗಳವಾಗಿತ್ತು. ಈ ಸಂಬಂಧ ಅಖಿಲ್ ಪಾಷ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಕುರಿತಾಗಿ ಸಮಾಜದ ಮುಖಂಡರು ಕೂಡ ಹಲವು ಬಾರಿ ರಾಜಿ ಸಂಧಾನ ಮಾಡಿದ್ದರು. ದೂರಿನ ಅನ್ವಯ ಸೈಯ್ಯದ್ ಪಾಷನನ್ನು ಪೊಲೀಸರು ಠಾಣೆಗೆ ಕರೆದು ವಿಚಾರಿಸಿದಾಗ ಯಾವ ದಾಖಲೆಗಳು ನನ್ನ ಬಳಿ ಇಲ್ಲ ಎಂದು ಹೇಳಿದ್ದಾರೆ. ಇದರಿಂದ ಮನನೊಂದ ಅಖಿಲ್ ಪಾಷ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಅರಸೀಕೆರೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.