
ಬೆಂಗಳೂರು (ಡಿ.4): ಬೆಂಗಳೂರಿನಲ್ಲಿ ವೃದ್ಧ ದಂಪತಿಗಳ ನಡುವಿನ ಜಗಳ ವಿಕೋಪಕ್ಕೆ ತಿರುಗಿ ದುರಂತ ಸಾವಿನಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆಯೊಂದು ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವೆಂಕಟೇಶನ್ (65) ಎಂಬ ನಿವೃತ್ತ ಚಾಲಕ ತನ್ನ ಪತ್ನಿ ಬೇಬಿ(60) ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿದ್ದಾನೆ. ವೆಂಕಟೇಶನ್ BMTC ಡ್ರೈವರ್ ಆಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದರು.
ಹತ್ಯೆಗೀಡಾದ ವೃದ್ಧೆ ಬೇಬಿಗೆ ಸ್ಟ್ರೋಕ್ ಹೊಡೆದಿದ್ದ ಕಾರಣ ಹಾಸಿಗೆ ಹಿಡಿದು (ಬೆಡ್ ರಿಡನ್) ಮಲಗಿದ್ದರು ಎನ್ನಲಾಗಿದೆ. ಈ ವೃದ್ಧ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದು, ಅವರು ಹೊರಗೆ ಹೋದಾಗ ಸಣ್ಣಪುಟ್ಟ ವಿಚಾರಗಳಿಗೆ ಆಗಾಗ್ಗೆ ಜಗಳವಾಡುತ್ತಿದ್ದರು. ಇದೇ ರೀತಿ ಕಳೆದ ಮಂಗಳವಾರ (2ನೇ ತಾರೀಖು) ಸಹ ಇಬ್ಬರ ನಡುವೆ ಜಗಳ ಶುರುವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದೆ. ಇದರಿಂದ ತೀವ್ರ ಕುಪಿತಗೊಂಡ ವೃದ್ಧ ವೆಂಕಟೇಶನ್ ಅವರು ಮನೆಯಲ್ಲಿದ್ದ ಬಟ್ಟೆ ಒಣಗಾಕುವ ಹಗ್ಗದಿಂದಲೇ ಪತ್ನಿ ಬೇಬಿ ಅವರ ಕತ್ತು ಬಿಗಿದು ಕೊಲೆ ಮಾಡಿದ್ದಾರೆ.
ಪತ್ನಿಯ ಕೊಲೆ ಮಾಡಿದ ಬಳಿಕ, ಅದೇ ಹಗ್ಗವನ್ನು ಬಳಸಿಕೊಂಡು ತಾವೂ ನೇಣಿಗೆ ಶರಣಾಗಿ ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಮುಂದುವರೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ