ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.
ರಾಮನಗರ (ಜೂ.14): ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.
ಕಳೆದ ಮೂರು ದಿನಗಳ ಅಂತರದಲ್ಲಿ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಒಂದೇ ಕುಟುಂಬದ ಇಬ್ಬರು ಸಾವು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. 13 ಬಾಲಕಿ ಹಾಗೂ 20 ವರ್ಷದ ಯುವತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಹೆಚ್.ಡಿ.ಕೋಟೆಯಿಂದ ಮದುವೆ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುವ ವೇಳೆ ಅಫಘಾತ ಸಂಭವಿಸಿದೆ.
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ಭೀಕರ ಕಾರು ಅಪಘಾತ: ಚಾಲಕ ಸಾವು, ಮೂವರ ಸ್ಥಿತಿ ಗಂಭೀರ
ಕಾರಿನಲ್ಲಿ ಹೋಗ್ತಿದ್ದವರು ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಾರಿನಲ್ಲಿ ಒಟ್ಟು 6 ಜನರಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದೆ. ಈ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನ ರಾಮನಗರ ಜಿಲ್ಲಾಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮದುವೆಗೆ ಹೋಗಿದ್ದ ಸ್ನೇಹಿತರು ಮಸಣ ಸೇರಿದ್ದರು: ರಾಮನಗರ (ಜೂ.11): ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭಾನುವಾರ ಮಧ್ಯಾಹ್ನ ವೇಗವಾಗಿ ಹೋಗುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು, ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮತ್ತೆ ಇಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ (Bengaluru mysuru expressway) ಎಲ್ಲ ವಾಹನಗಳು ಕೂಡ ಕನಿಷ್ಠ ಪ್ರತಿ ಗಂಟೆಗೆ 80 ಕಿ.ಮೀ. ವೇಗಕ್ಕಿಂತ ಹೆಚ್ಚಿನ ವೇಗದಲ್ಲಿಯೇ ಪ್ರಯಾಣ ಮಾಡುತ್ತವೆ. ಹೀಗಿರುವಾಗ ಚಾಲಕರ ಸ್ವಲ್ಪ ನಿಯಂತ್ರಣ ತಪ್ಪಿದರೂ ವಾಹನಗಳಿಗೆ ದೊಡ್ಡ ಮಟ್ಟದಲ್ಲಿಯೇ ಅಪಘಾತವಾಗುವುದು ಖಚಿತ. ಇನ್ನು ಮದ್ದೂರಿನಿಂದ ರಾಮನಗರದ ಕಡೆಗೆ ಇಂಡಿಕಾ ಕಾರಿನಲ್ಲಿ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ನಾಲ್ವರಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದೆ. ಒಟ್ಟು ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
Toll Price Hike: ಸದ್ದಿಲ್ಲದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಟೋಲ್ ದರ ಏರಿಕೆ, ಪ್ರಯಾಣಿಕರ ಜೇಬಿಗೆ ಕತ್ತರಿ!
ನಜ್ಜುಗುಜ್ಜಾಗಿ 50 ಮೀಟರ್ ಉರುಳಿ ಹೋದ ಕಾರು: ಇನ್ನು ಕಾರು ವೇಗವಾಗಿ ಚಾಲನೆಯಲ್ಲಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕೂಡಲೇ ಡಿವೈಡರ್‌ಗೆ ಡಿಕ್ಕಿ ಹೊಡೆದು ಮುಂಭಾಗ ಸಂಪೂರ್ಣ ಜಖಂ ಆಗಿದೆ. ಆಗ ಕಾರಿನ ಮುಂಭಾಗದಲ್ಲಿದ್ದ ಚಾಲಕನಿಗೆ ಜೀವಹಾನಿಯಾಗಿದೆ. ಇನ್ನು ಡಿವೈಡರ್ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದ್ದರಿಂದ ಕಾರಿನ ಮೇಲ್ಭಾಗವೂ ಕೂಡ ಬಹುಶಃ ನಜ್ಜುಗುಜ್ಜಾಗಿದೆ. ಇದರಿಂದ, ಕಾರಿನ ಹಿಂಬದಿ ಸೀಟಿನಲ್ಲಿದ್ದ ಮೂವರಿಗೂ ಗಂಭೀರ ಗಾಯವಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜಕನವಾಗಿದೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.