ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಇಂಡಿಕಾ ಕಾರು ಭೀಕರ ಅಪಘಾತವಾಗಿದ್ದು, ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನು ಮೂವರ ಸ್ಥಿತಿ ಗಂಭೀರವಾಗಿದೆ.
ರಾಮನಗರ (ಜೂ.11): ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭಾನುವಾರ ಮಧ್ಯಾಹ್ನ ವೇಗವಾಗಿ ಹೋಗುತ್ತಿದ್ದ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು, ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ (Bengaluru mysuru expressway) ಎಲ್ಲ ವಾಹನಗಳು ಕೂಡ ಕನಿಷ್ಠ ಪ್ರತಿ ಗಂಟೆಗೆ 80 ಕಿ.ಮೀ. ವೇಗಕ್ಕಿಂತ ಹೆಚ್ಚಿನ ವೇಗದಲ್ಲಿಯೇ ಪ್ರಯಾಣ ಮಾಡುತ್ತವೆ. ಹೀಗಿರುವಾಗ ಚಾಲಕರ ಸ್ವಲ್ಪ ನಿಯಂತ್ರಣ ತಪ್ಪಿದರೂ ವಾಹನಗಳಿಗೆ ದೊಡ್ಡ ಮಟ್ಟದಲ್ಲಿಯೇ ಅಪಘಾತವಾಗುವುದು ಖಚಿತ. ಇನ್ನು ಮದ್ದೂರಿನಿಂದ ರಾಮನಗರದ ಕಡೆಗೆ ಇಂಡಿಕಾ ಕಾರಿನಲ್ಲಿ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ನಾಲ್ವರಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸಂಭವಿಸಿದೆ.
ಧಾರವಾಡ ಬೈಪಾಸ್‌ನಲ್ಲಿ ಭೀಕರ ಅಪಘಾತ, ಬಿಂದುಗೌಡ ಸೇರಿ ಮೂವರ ಸಾವು
ಚಾಮುಂಡೇಶ್ವರಿ ಆಸ್ಪತ್ರೆಗೆ ಗಾಯಾಳುಗಳ ದಾಖಲು: ಇನ್ನು ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಕಾರು ಚಾಲಕನನ್ನು ಮದ್ದೂರು ಮೂಲದ ಮಂಜೇಶ್ (28) ಎಂದು ಗುರುತಿಸಲಾಗಿದೆ. ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಘಟನೆ ನಡೆದಿದೆ. ರಾಮನಗರದ ಕಡೆಗೆ ಬರ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಚಾಲಕ ಮೃತ್ಯುವಾದರೆ ಉಳಿದ ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ಮಾಡಿದ್ದು, ಸ್ಥಳ ಪರಿಶೀಲನೆ ಮಾಡಿದ್ದಾರೆ.
ಕೋಡಿಮಠ ಶ್ರೀಗಳ ಭವಿಷ್ಯ: ದೇಶಕ್ಕೆ ಕಾದಿದೆ ಮತ್ತೊಂದು ಗಂಡಾಂತರ, ಸಮುದ್ರದಲ್ಲಿ 2 ರಾಷ್ಟ್ರ ಮುಳುಗಡೆ
ನಜ್ಜುಗುಜ್ಜಾಗಿ 50 ಮೀಟರ್ ಉರುಳಿ ಹೋದ ಕಾರು: ಇನ್ನು ಕಾರು ವೇಗವಾಗಿ ಚಾಲನೆಯಲ್ಲಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕೂಡಲೇ ಡಿವೈಡರ್‌ಗೆ ಡಿಕ್ಕಿ ಹೊಡೆದು ಮುಂಭಾಗ ಸಂಪೂರ್ಣ ಜಖಂ ಆಗಿದೆ. ಆಗ ಕಾರಿನ ಮುಂಭಾಗದಲ್ಲಿದ್ದ ಚಾಲಕನಿಗೆ ಜೀವಹಾನಿಯಾಗಿದೆ. ಇನ್ನು ಡಿವೈಡರ್ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದ್ದರಿಂದ ಕಾರಿನ ಮೇಲ್ಭಾಗವೂ ಕೂಡ ಬಹುಶಃ ನಜ್ಜುಗುಜ್ಜಾಗಿದೆ. ಇದರಿಂದ, ಕಾರಿನ ಹಿಂಬದಿ ಸೀಟಿನಲ್ಲಿದ್ದ ಮೂವರಿಗೂ ಗಂಭೀರ ಗಾಯವಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜಕನವಾಗಿದೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ: ಮಂಡ್ಯ (ಜೂ.11): ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕವಾಗಿದೆ. ಹೆದ್ದಾರಿಗೆ ಅಗತ್ಯವಾದ ಯಾವುದೇ ಸೌಲಭ್ಯ ಕಲ್ಪಿಸದೇ ನಿರ್ಲಕ್ಷ್ಯ ಮಾಡಲಾಗಿದೆ. ಹೆದ್ದಾರಿ ಕಾಮಗಾರಿ ತನಿಖೆ ಕುರಿತು ಅಧಿಕಾರಿಗಳ ಜತೆಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ದೇಶದ ಹಲವು ರಾಷ್ಟ್ರೀಯ ಹೆದ್ದಾರಿಗಳು ಗುಣಮಟ್ಟದಿಂದ ಕೂಡಿವೆ. ಆದರೆ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಳಪೆ ಗುಣಮಟ್ಟದಲ್ಲಿದೆ. ಈ ರಸ್ತೆಯಲ್ಲಿ ವೇಗವಾಗಿ ಸಂಚರಿಸುವುದೇ ದುಸ್ತರವಾಗಿದೆ ಎಂದರು.
ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ: ಸಚಿವ ಚಲುವರಾಯಸ್ವಾಮಿ
ಎಕ್ಸ್‌ಪ್ರೆಸ್ ಕಾರಿಡಾರ್ ಹೆಸರಿಗೆ ಕಳಂಕಪ್ರಾಯ: ಹೆದ್ದಾರಿಯಲ್ಲಿ ಎಷ್ಟುಕಿ.ಮೀ. ವೇಗದಲ್ಲಿ ಸಾಗಬೇಕು ಸೇರಿದಂತೆ ಯಾವ ಮಾರ್ಗಸೂಚಿಗಳನ್ನೂ ಅಳವಡಿಸಿಲ್ಲ, ಎಕ್ಸ್‌ಪ್ರೆಸ್ ಕಾರಿಡಾರ್ ಎನ್ನುವ ಹೆಸರಿಗೆ ಈ ರಸ್ತೆ ಕಳಂಕಪ್ರಾಯ. ಹೆದ್ದಾರಿ ನಡುವೆ ಎಲ್ಲೂ ಶೌಚಾಲಯಗಳನ್ನು ನಿರ್ಮಿಸಿಲ್ಲ. ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸಾಕಷ್ಟುಅವ್ಯವಹಾರಗಳ ಬಗ್ಗೆ ದೂರುಗಳು ಬಂದಿವೆ. ನಿತ್ಯ ಒಂದಲ್ಲ ಒಂದು ದೂರು ಬರುತ್ತಲೇ ಇದೆ. ಕೆಳ ಸೇತುವೆಗಳೂ ಸಹ ಸಮಸ್ಯೆಗಳಿಂದ ಕೂಡಿವೆ. ಹೆದ್ದಾರಿಯಲ್ಲಿ ಓಡಾಡುವುದು ಎಷ್ಟುಆತಂಕಕಾರಿಯೋ ಅಷ್ಟೇ ಪ್ರಮಾಣದಲ್ಲಿ ಕೆಳ ಸೇತುವೆ ಮತ್ತು ಸವೀರ್‍ಸ್ ರಸ್ತೆಗಳಲ್ಲೂ ಕಂಡುಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.