
ಮಂಡ್ಯ ಜ.12): ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಹೈ ಟೆನ್ಷನ್ ವಿದ್ಯುತ್ ಕಂಬ ಉರುಳಿಬಿದ್ದ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಬಳಿಯ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಸುರೇಶ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಡ್ಯದಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬೈಕ್ ಸವಾರ. ಈ ವೇಳೆ ಇದ್ದಕ್ಕಿದ್ದಂತೆ ಉರುಳಿಬಿದ್ದ ಹೈಟೆನ್ಷನ್ ವಿದ್ಯುತ್ ಕಂಬ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸರ್ವಿಸ್ ರಸ್ತೆಗೆ ಬೃಹತ್ ಕಂಬ ಬೀಳುತ್ತಿದ್ದಂತೆ ಮುಂದೆ ಚಲಿಸದೇ ರಸ್ತೆಗೆ ನಿಂತ ವಾಹನಗಳು. ಕಿಮೀಟರ್ ಉದ್ದಕ್ಕೂ ವಾಹನಗಳು ಟ್ರಾಫಿಕ್ ಜಾಮ್.
ಹೈ ಟೆನ್ಷನ್ ವಿದ್ಯುತ್ ಕಂಬದಲ್ಲಿ ಕ್ಲಾಂಪ್ ಕಳ್ಳತನದಿಂದಾಗಿ ವಿದ್ಯುತ್ ಕಂಬ ರಸ್ತೆ ಉರುಳಿಬಿದ್ದಿದೆ ಎನ್ನಲಾಗಿದೆ.
'ಅಜ್ಜಿ ಟಿಕೆಟ್ ಕೊಡಿ' ಎಂದಿದ್ದಕ್ಕೆ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಮಹಿಳಾ ಕಂಡಕ್ಟರ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ