ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ಮೇಲೆ ನಡೆದಿದೆ.
ಮಂಡ್ಯ (ಜೂ.25): ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ಮೇಲೆ ನಡೆದಿದೆ.
ಮಣಿ(25), ಜನಾರ್ಧನ ಪೂಜಾರಿ(21) ಮೃತ ಯುವಕರು. ಮೃತ ಯುವಕರಿಬ್ಬರೂ ಕೋಲಾರ ಹಾಗೂ ಕೊಪ್ಪಳ ಜಿಲ್ಲೆಯವರೆಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕರು. ವೀಕೆಂಡ್ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ಬೆಳಗ್ಗಿನ ಜಾವ ಸಂಭವಿಸಿರುವ ಭೀಕರ ಅಪಘಾತ. ಮುಂದೆ ಹೋಗುತ್ತಿದ್ದ ಅಪರಿಚಿತ ವಾಹನಕ್ಕೆ ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಚೆಲ್ಲಪಿಲ್ಲಿಯಾಗಿದ್ದ ಬಿದ್ದ ಯುವಕರು. ತಲೆಗೆ ಗಂಭೀರ ಪೆಟ್ಟು ಆಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜನಾರ್ದನ ಪೂಜಾರಿ ಕೊಪ್ಪಳ ಜಿಲ್ಲೆಯ ಲಿಂಗದಮಂಡಿ ಗ್ರಾಮದ ಯುವಕ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿದ್ದ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ರವಾನಿಸಿದ ಪೊಲೀಸರು. ಮದ್ದೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರುಗಳ ಡಿಕ್ಕಿ: ನಜ್ಜುಗುಜ್ಜಾದ ಕಾರು, ಅಪ್ಪಚ್ಚಿಯಾದ ಮೂವರ ದೇಹ
ತೆಲಂಗಾಣ ಶಾಸಕ ರೆಡ್ಡಿ ಜೀಪಿನ ಟೈರ್ ಸ್ಫೋಟ
ಕಾರ್ಕಳ: ಮಂಗಳೂರಿನಿಂದ ಶೃಂಗೇರಿ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣದ ಶಾಸಕರು ಪ್ರಯಾಣಿಸುತ್ತಿದ್ದ ಜೀಪೊಂದು ಟಯರ್ ಸ್ಫೋಟಗೊಂಡು ಅಪಘಾತಕ್ಕೊಳಗಾದ ಘಟನೆ ಕಾರ್ಕಳ ಮಿಯ್ಯಾರು ಸೇತುವೆ ಬಳಿಯ ಮುಡಾರು-ನಲ್ಲೂರು ಕ್ರಾಸ್ ಬಳಿ ಶನಿವಾರ ಸಂಭವಿಸಿದೆ.
ಜೀಪ್‌ನಲ್ಲಿ ತೆಲಂಗಾಣ ಶಾಸಕ ಪಂಜುಗುಳಿ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಸಾಗುತ್ತಿದ್ದ ಜೀಪಿನ ಟಯರ್ ಏಕಾಏಕಿ ಸ್ಫೋಟಗೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ವಾಹನದಲ್ಲಿ ಇದ್ದ ಶಾಸಕರಿಗೆ ಯಾವುದೇ ಗಾಯಗಳಾಗಿಲ್ಲ. ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರವೊಂದರ ನಡುಗೆ ಸಿಲುಕಿದ ಜೀಪು ಜಖಂಗೊಂಡಿದೆ.
ವೇಗವಾಗಿ ಜಾಲಿರೈಡ್: ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಕಾರು ಪಲ್ಟಿ, ವಿದ್ಯಾರ್ಥಿ ಸಾವು
Close