ಬಿಬಿಎಂಪಿಯಲ್ಲಿ 118 ಕೋಟಿ ರೂ. ಹಗರಣವನ್ನು ಮಾಡಿದ ಬಿಬಿಎಂಪಿ ಇಂಜಿನಿಯರ್‌ಗಳನ್ನು ರಾಜ್ಯ ಸರ್ಕಾರದಿಂದಲೇ ಅಮಾನತು ಮಾಡಲಾಗಿದೆ.
ಬೆಂಗಳೂರು (ಜೂ.15): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಥಳೀಯ ಆಡಳಿತ ಸಂಸ್ಥೆಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ನಡೆದ ಕಾಮಗಾರಿಗಳ ತನಿಖೆಯನ್ನು ಮಾಡಿದಾಗ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬರೋಬ್ಬರಿ 118 ಕೋಟಿ ರೂ. ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ 6 ಮಂದಿ ಇಂಜಿನಿಯರ್‌ಗಳನ್ನು ಸರ್ಕಾರದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಕೆ.ಆರ್.ಐ.ಡಿ.ಎಲ್ ಕಾಮಗಾರಿಯಲ್ಲಿ ಭಾರಿ ಅಕ್ರಮ ನಡೆದಿರುವ ಪ್ರಕರಣವನ್ನು ಲೋಕಾಯುಕ್ತ ಪ್ರಾಥಮಿಕ ತನಿಖೆಗೆ ಒಳಪಡಿಸಲಾಗಿತ್ತು. ಈ ವೇಳೆ ಅಕ್ರಮ ನಡೆದಿರೋದು ಸಾಬೀತಾದ ಹಿನ್ನೆಲೆಯಲ್ಲಿ ಬಿಬಿಎಂಪಿಯ ಆರುಮಂದಿ ಇಂಜಿನಿಯರ್‌ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಕ್ರಮ ನಡೆದಿದೆ. ಇನ್ನು ಬಿಜೆಪಿ ಅವಧಿಯಲ್ಲಿ ನಡೆದ ಎಲ್ಲ ಅಕ್ರಮಗಳನ್ನು ತನಿಖೆ ಮಾಡುವುದಾಗಿ ಕಾಂಗ್ರೆಸ್ ಸರ್ಕಾರ ಹೇಳುತ್ತಿದ್ದು, ಒಂದು ತಿಂಗಳ ಅವಧಿಯಲ್ಲಿಯೇ ಬಿಬಿಎಂಪಿಯಲ್ಲಿ ದೊಡ್ಡಮಟ್ಟದ ಹಗರಣ ನಡೆಯಲು ಕಾರಣವಾದ ಅಧಿಕಾರಿಗಳು ಖೆಡ್ಡಾಗೆ ಬಿದ್ದಿದ್ದಾರೆ. ಇದಿನ್ನೂ ಪ್ರಾಥಮಿಕ ತನಿಖೆಯಷ್ಟೇ ಆಗಿದ್ದು, ಪೂರ್ಣ ತನಿಖೆಯಲ್ಲಿ ಇನ್ನಷ್ಟು ಕೋಟಿ ರೂಪಾಯಿಗಳ ಹಗರಣ ಮಾಡಿರುವುದು ಬೆಳಕಿಗೆ ಬರುವ ಸಾಧ್ಯತೆಯಿದೆ.
undefined
PSI Scam ಆರೋಪಿಗಳನ್ನು ಬಿಟ್ಟು ನೇಮಕಾತಿ ಮುಂದುವರೆಸಲು ಸಾಧ್ಯವೇ? ಹೈಕೋರ್ಟ್ ಪ್ರಶ್ನೆ
ಹೆಚ್ಚಿನ ತನಿಖೆಗೆ ಪ್ರಾದೇಶಿಕ ಆಯುಕ್ತರ ನೇಮಕ: ಲೋಕಾಯುಕ್ತರ ವರದಿಯನ್ವಯ ಸರ್ಕಾರಕ್ಕೆ ರೂ. 118 ಕೋಟಿ ರೂ.ಗೂ ಅಧಿಕ ನಷ್ಟವಾಗಿರುವುದು ಲೋಕಾಯುಕ್ತರ ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಕೇವಲ 114 ಕಾಮಗಾರಿಗಳ ಪರಿಶೀಲನೆಯಿಂದ ಇಷ್ಟು ಬೃಹತ್ ಮೊತ್ತದ ದುರುಪಯೋಗ / ನಷ್ಟ ಕಂಡುಬಂದಿದ್ದು, ಇನ್ನೂ ಹೆಚ್ಚಿನ ಕಾಮಗಾರಿಗಳ ಪರಿಶೀಲನೆಯಿಂದ ಬೃಹತ್ ಮೊತ್ತದ ಅಕ್ರಮ (ಅಕ್ರಮ ಕಾಮಗಾರಿ), ಹಣ ದುರುಪಯೋಗ ಪತ್ತೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಪ್ರಕರಣದ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು, ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ತೀರ್ಮಾನಿಸಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಾನ್ಯ ಲೋಕಾಯುಕ್ತರು ತಮ್ಮ ವರದಿಯಲ್ಲಿ ತಿಳಿಸಿದ ದಿನಾಂಕದಿಂದ ಅನ್ವಯವಾಗುವಂತೆ ಹಿಂದಿನ ಎರಡೂವರೆ ವರ್ಷಗಳಲ್ಲಿ ಬಿ.ಬಿ.ಎಂ.ಪಿ. ಪತಿಯಿಂದ ಕೆ.ಆರ್.ಐ.ಡಿ.ಎಲ್. ವಹಿಸಿರುವ ಎಲ್ಲಾ ಕಾಮಗಾರಿಗಳನ್ನು (ಈಗಾಗಲೇ ಅನುಷ್ಠಾನಗೊಳಿಸಲಾಗಿರುವ ಮತ್ತು ಅನುಷ್ಠಾನಗೊಳಿಸುತ್ತಿರುವ) ತನಿಖೆ ಮಾಡಿ ಸಮಗ್ರ ವರದಿಯನ್ನು ಸಲ್ಲಿಸಲು ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮಾನ್ ಆದಿತ್ಯ ಬಿಸ್ವಾಸ್ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದೆ.
ಬಿಜೆಪಿ ಸರ್ಕಾರದ ಹಗರಣಗಳ ತನಿಖೆಗೆ ಕಾಂಗ್ರೆಸ್‌ನಿಂದ ಎಸ್‌ಐಟಿ ರಚನೆ
ತನಿಖೆಗೆ ಸಹಕರಿಸುವಂತೆ ಮುಖ್ಯ ಆಯುಕ್ತರಿಗೆ ಸೂಚನೆ: ತನಿಖೆಯನ್ನು ನಡೆಸಲು ಅಗತ್ಯವಿರುವ ಸಾಧನ ಸಲಕರಣೆಗಳು, ಸಾಮಗ್ರಿಗಳು, ಮಾನವ ಸಂಪನ್ಮೂಲ ಹಾಗೂ ಅಗತ್ಯವಿರುವ ದಾಖಲೆ ಮತ್ತು ಕಡತಗಳನ್ನು ಒದಗಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚನೆಯನ್ನು ನೀಡಲಾಗಿದೆ.