ಶನಿವಾರ ಮಧ್ಯಾಹ್ನದ ನಂತರ ಶಾಲೆ ಬಿಟ್ಟ ಮೇಲೆ ಕೆರೆಯ ದಡದಲ್ಲಿ ಆಟವಾಡುತ್ತಾ ಮೀನು ಹಿಡಿಯಲು ಹೋಗಿದ್ದ ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರು (ಜೂ.18): ಶನಿವಾರ ಮಧ್ಯಾಹ್ನದ ನಂತರ ಶಾಲೆ ಬಿಟ್ಟ ಮೇಲೆ ಕೆರೆಯ ದಡದಲ್ಲಿ ಆಟವಾಡುತ್ತಾ ಮೀನು ಹಿಡಿಯಲು ಹೋಗಿದ್ದ ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ನಡೆದಿದೆ.
ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಚಿಕ್ಕನಹಳ್ಳಿ ಅಮಾನಿಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಕಾರ್ತಿಕ್ (16), ಧನುಷ್ (15), ಮತ್ತು ಗುರುಪ್ರಸಾದ್ (6) ಸಾವನ್ನಪ್ಪಿದ ಬಾಲಕರು ಎಂದು ಗುರುತಿಸಲಾಗಿದೆ. ಮೀನು ಹಿಡಿಯಲು ಹೋಗಿ ಮೂವರು ಬಾಲಕರು ನೀರುಪಾಲಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ನಡೆದಿದೆ. ಶನಿವಾರ ಮಧ್ಯಾಹ್ನ ಶಾಲೆ ಮುಗಿಸಿ ಕೆರೆ ಬಳಿ ಹೋಗಿದ್ದ ಬಾಲಕರು ಮೀನು ಹಿಡಿಯಲು ಮುಂದಾದಾಗ ಈ ದುರ್ಘಟನೆ ಸಂಭವಿಸಿದೆ.
undefined
ಪ್ರೀತಿ ಕೊಂದ ಪೋಷಕರು: ಆತ್ಮಹತ್ಯೆಗೆ ಶರಣಾದ ಕೂಲಿ ಕಾರ್ಮಿಕ ಪ್ರೇಮಿಗಳು
ಮೂವರ ಮೃತದೇಹ ಪತ್ತೆ: ಇನ್ನು ಮಕ್ಕಳು ಕೆರೆಯ ಬಳಿಗೆ ಹೋಗಿ ಸಂಜೆಯಾದರೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಕೆರೆಯ ಬಳಿ ಹೋಗಿ ಪೋಷಕರು ನೋಡಿದಾಗ ಮೂವರ ಚಪ್ಪಲಿಗಳು ಮತ್ತು ಬಟ್ಟೆಗಳು ಕೆರೆಯ ದಡದಲ್ಲಿದ್ದವು. ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದರು. ನಿನ್ನೆ ಸಂಜೆಯಿಂದ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೋಲಿಸರು ಕಾರ್ಯಾಚರಣೆ ನಡೆಸಿದ್ದರು. ರಾತ್ರಿ ವೇಳೆಗೆ ಒಬ್ಬ ಬಾಲಕನ ಮೃತದೇಹ ಪತ್ತೆಯಾಗಿತ್ತು. ಇಂದು ಮಧ್ಯಾಹ್ನ ವೇಳೆ ನಿರಂತರ ಕಾರ್ಯಾಚರಣೆ ನಡೆಸಿದ್ದರಿಂದ ಬಾಕಿ ಇಬ್ಬರ ಮೃತದೇಹಗಳು ಪತ್ತೆಯಾಗುವೆ. ವಿಜಯಪುರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.