ಬರೋಬ್ಬರಿ ₹23.74 ಕೋಟಿಯ ನ್ಯೂ ಇಯರ್ ಡ್ರಗ್ಸ್‌ ಜಪ್ತಿ: ನೈಜೇರಿಯಾ ಪೆಡ್ಲರ್ ಬಂಧನ

Published : Nov 26, 2025, 10:38 AM IST
Bengaluru

ಸಾರಾಂಶ

ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದುಕೊಂಡು ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿರುವ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು, 23.74 ಕೋಟಿ ರು. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರು (ನ.26): ವೀಸಾ ಅವಧಿ ಮುಗಿದ ಬಳಿಕವೂ ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದುಕೊಂಡು ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿರುವ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು, 23.74 ಕೋಟಿ ರು. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಯಲಹಂಕದ ಸ್ವರ್ಣ ಎಕ್ಲೇವ್‌ನಲ್ಲಿ ವಾಸವಾಗಿದ್ದ ನೈಜೇರಿಯಾ ಪ್ರಜೆ ಎಜೈಕ್ ನ್ಸೆಗ್ವು (42) ಬಂಧಿತ. ಆರೋಪಿಯಿಂದ 11.640 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ಸ್‌, 1,040 ಎಕ್ಸ್‌ಟೆಸಿ ಮಾತ್ರೆಗಳು, 2.235 ಕೆ.ಜಿ ಡ್ರಗ್ಸ್ ತಯಾರಿಕೆಯ ಕಚ್ಚಾ ಸಾಮಗ್ರಿ ಹಾಗೂ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬ್ಯುಸಿನೆಸ್ ವೀಸಾದಲ್ಲಿ 2017ರಲ್ಲಿ ಶ್ರೀಲಂಕಾದ ಮೂಲಕ ಭಾರತಕ್ಕೆ ಬಂದಿದ್ದ ಆರೋಪಿ ವೀಸಾ ಅವಧಿ ಮುಗಿದ ಬಳಿಕವೂ ನಗರದಲ್ಲಿ ವಾಸವಾಗಿದ್ದುಕೊಂಡು ಜೀವನ ನಿರ್ವಹಣೆಗಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ. ಪ್ರಾಥಮಿಕ ತನಿಖೆ ವೇಳೆ ಹೊಸ ವರ್ಷಾಚರಣೆಗೆ ಸರಬರಾಜು ಮಾಡಲು ದುಪ್ಪಟ್ಟು ಡ್ರಗ್ಸ್‌ ದಾಸ್ತಾನು ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಯು ಯಾರ ಜತೆ ಸಂಪರ್ಕ ಹೊಂದಿದ್ದಾನೆ ಎಂಬುದನ್ನು ಪತ್ತೆ ಮಾಡಲಾಗುತ್ತಿದೆ ಎಂದು ಹೇಳಿದರು.

ಆರೋಪಿ ವಿರುದ್ಧ 2019ರಲ್ಲಿ ಬಾಗಲೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಬಳಿಕವೂ ಡ್ರಗ್‌ ಪೆಡ್ಲಿಂಗ್ ತೊಡಗಿದ್ದರಿಂದ 2020ರಲ್ಲಿ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿ ಮತ್ತು ವಿದೇಶಿಯರ ಕಾಯ್ದೆ ಅಡಿ ಮತ್ತೊಂದು ಪ್ರಕರಣ ದಾಖಲಾಗಿತ್ತು. ಈತನನ್ನು ಡ್ರಗ್ಸ್‌ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಮತ್ತು ಹೈದರಾಬಾದ್ ಪೊಲೀಸರು ಬಂಧಿಸಿದ್ದರು ಎಂಬುದು ತನಿಖೆ ವೇಳೆ ಗೊತ್ತಾಗಿದೆ ಎಂದು ತಿಳಿಸಿದರು.

ದೆಹಲಿಯಿಂದ ಡ್ರಗ್ಸ್ ತರಿಸಿಕೊಂಡು ಮನೆಯಲ್ಲಿ ದಾಸ್ತಾನು ಮಾಡಿದ್ದ. ಕರ್ನಾಟಕ, ಚೆನ್ನೈ, ಹೈದರಾಬಾದ್ ಸೇರಿ ಹಲವೆಡೆ ಪರಿಚಯಸ್ಥರಿಗೆ, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಹೊಸ ವರ್ಷದ ಸಂದರ್ಭದಲ್ಲಿ ದುಪ್ಪಟ್ಟು ಹಣಕ್ಕೆ ಡ್ರಗ್ಸ್ ಮಾರಾಟ ಮಾಡುವ ಯೋಜನೆ ಹೊಂದಿದ್ದ. ನಗರದ ಹೊರವಲಯಲ್ಲಿರುವ ರೆಸಾರ್ಟ್ ಹಾಗೂ ನಗರದ ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳಿಗೆ ಪೂರೈಸಲು ಸಿದ್ಧತೆ ನಡೆದಿತ್ತು. ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿಯ ಸಂಪರ್ಕದಲ್ಲಿ ಯಾವ ಪೆಡ್ಲರ್​ಗಳಿದ್ದಾರೆ, ಎಷ್ಟು ವರ್ಷಗಳಿಂದ ಪೂರೈಕೆ ಮಾಡುತ್ತಿದ್ದ ಎಂಬುದರ ಬಗ್ಗೆ ತನಿಖೆ ತೀವ್ರಗೊಳಿಸಲಾಗಿದೆ. ದೆಹಲಿ ಹಾಗೂ ಮುಂಬೈಯಿಂದ ನಗರಕ್ಕೆ ಸರಬರಾಜು ಮಾಡುತ್ತಿದ್ದುದರ ಕುರಿತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

11 ತಿಂಗಳಲ್ಲಿ 130 ಕೋಟಿಯ ಡ್ರಗ್ಸ್‌ ಜಪ್ತಿ

ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕಳೆದ 11 ತಿಂಗಳಿನಲ್ಲಿ 113 ಕೋಟಿ ರು. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಲಾಗಿದೆ. ಹಲವರನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿದೆ. ಡ್ರಗ್ಸ್ ನಿಯಂತ್ರಣಕ್ಕಾಗಿ ವಿಶೇಷ ಅಭಿಯಾನ ನಡೆಯುತ್ತಿದೆ. ನಗರ ಪೊಲೀಸರು, ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದರು.

ವಿದೇಶಿಯರಿಗೆ ಮನೆ ಬಾಡಿಗೆಗೆ ನೀಡುವ ಸಂದರ್ಭದಲ್ಲಿ ಕಾನೂನು ಪಾಲಿಸದ ಕಾರಣ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲು ಬಾಗಲೂರು ಪೊಲೀಸರಿಗೆ ಸೂಚನೆ ನೀಡಲಾಗಿದೆ. ವಿದೇಶಿಗರಿಗೆ ಮನೆ ನೀಡುವಾಗ ಫಾರಂ ಸಿ ಸಲ್ಲಿಸಬೇಕು. ಪೊಲೀಸ್ ಠಾಣೆಗೆ ಯಾವುದೇ ಮಾಹಿತಿ ನೀಡಿಲ್ಲ. ಅಲ್ಲದೇ ಠಾಣಾ ವ್ಯಾಪ್ತಿಯಲ್ಲಿ ಬೃಹತ್‌ ಮೊತ್ತದ ಡ್ರಗ್ಸ್‌ ಸಂಗ್ರಹಿಸಲಾಗಿತ್ತು. ಇದರಲ್ಲಿ ಪೊಲೀಸರ ನಿರ್ಲಕ್ಷ್ಯದ ಬಗ್ಗೆಯೂ ತನಿಖೆ ನಡೆಸಲಾಗುವುದು.
-ಸೀಮಂತ್‌ ಕುಮಾರ್‌ ಸಿಂಗ್‌, ನಗರ ಪೊಲೀಸ್‌ ಆಯುಕ್ತ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮ೧ಹತ್ಯೆ; ನೇರಳೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ವ್ಯತ್ಯಯ!
ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!