ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಕಳೆದ ಮೂರು ದಿನಗಳ ಹಿಂದೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಬೆಂಗಳೂರು (ಜು.08): ಬೆಂಗಳೂರಿನಲ್ಲಿ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಕಳೆದ ಮೂರು ದಿನಗಳ ಹಿಂದೆ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ದಿಯಾ ಮಂಡೋಲ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿನಿಯಾಗಿರುವ ದಿಯಾ ಮಂಡೋಲ್ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಆದರೆ, ಕಳೆದ ಮೂರು ದಿನಗಳ ಹಿಂದೆ ಹಾಸ್ಟೆಲ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಇನ್ನು ವಿದ್ಯಾರ್ಥಿನಿಯ ಸಾವಿಗೆ ಏನು ಕಾರಣವೆಂಬುದು ಇನ್ನು ತಿಳಿದುಬಂದಿಲ್ಲ. ಆದರೆ, ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ ಎಂದು ಪೊಲೀಸರು ಪ್ರಾಥಮಿಕ ಮಾಹಿತಿ ಆಧರಿಸಿ ತಿಳಿಸಿದ್ದಾರೆ.
ಈ ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಘಟನೆ ಕುರಿತು ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.