
ಬೆಂಗಳೂರು (ಫೆ.19): ಇತ್ತೀಚಿಗೆ ಚಿನ್ನಾಭರಣವಿದ್ದ ಮಹಿಳಾ ಪ್ರಯಾಣಿಕರ ಬ್ಯಾಗ್ ಕಳವು ಮಾಡಿ ಪರಾರಿಯಾಗಿದ್ದ ಆಟೋ ಚಾಲಕನೊಬ್ಬನನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್.ಪುರದ ನಿವಾಸಿ ಸೈಯದ್ ಅತೀಕ್ ಬಂಧಿತನಾಗಿದ್ದು, ಆರೋಪಿಯಿಂದ 107 ಗ್ರಾಂ ಚಿನ್ನಾಭರಣ ಹಾಗೂ 1 ಆಟೋ ಸೇರಿದಂತೆ ₹6.5 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಸಾವಿರಾರು ಆಟೋಗಳ ಶೋಧ:
ಅತೀಕ್ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. ಕೆಲ ದಿನಗಳ ಹಿಂದೆ ತಮಿಳುನಾಡಿಗೆ ತೆರಳಲು ಕೆ.ಆರ್.ಪುರ ರೈಲ್ವೆ ನಿಲ್ದಾಣಕ್ಕೆ ಸೈಯದ್ ಆಟೋದಲ್ಲಿ ತಮ್ಮ ಇಬ್ಬರು ಮಕ್ಕಳ ಜತೆ ಮಹಿಳೆಯೊಬ್ಬರು ತೆರಳಿದ್ದರು. ಆ ವೇಳೆ ರೈಲ್ವೆ ನಿಲ್ದಾಣದಲ್ಲಿ ಅವರನ್ನು ನಿಲ್ಲಿಸಿದ ಬಳಿಕ ಪ್ರಯಾಣಿಕರು ಬ್ಯಾಗ್ ತೆಗೆದು ಕೊಳ್ಳುವ ಮುನ್ನವೇ ಬಾಡಿಗೆ ಪಡೆದು ಆಟೋ ಚಾಲಕ ತೆರಳಿದ್ದಾನೆ. ಈ ಬಗ್ಗೆ ರಾಮಮೂರ್ತಿನಗರ ಠಾಣೆಗೆ ಅವರು ದೂರು ಸಲ್ಲಿಸಿದರು.
ಹೆಂಡತಿ ತವರೂರಿಗೆ ಹೋಗಿದ್ದಾಳೆ, ಫಲಕದ ಮೂಲಕ ಡಂಗೂರ ಸಾರಿದ ಆಟೋ ಡ್ರೈವರ್!
ತನಿಖೆಗಿಳಿದ ಪೊಲೀಸರು, ರೈಲ್ವೆ ನಿಲ್ದಾಣದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಆಟೋ ನೋಂದಣಿ ಸಂಖ್ಯೆ ಅಸ್ಪಷ್ಟವಾಗಿ ಪತ್ತೆಯಾಗಿದೆ. ಬಳಿಕ ಬೆಂಗಳೂರು ನಗರದ ಸುಮಾರು 10 ಸಾವಿರಕ್ಕೂ ಅಧಿಕ ಆಟೋಗಳನ್ನು ಶೋಧಿಸಿದಾಗ ಕೊನೆಗೆ ಆರೋಪಿ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ