ಯೂಟ್ಯೂಬ್ ನೋಡಿ ಕಳ್ಳತನಕ್ಕೆ ಇಳಿದಿದ್ದ ಖದೀಮರ ಸೆರೆ!

Published : Apr 22, 2022, 04:52 PM IST
ಯೂಟ್ಯೂಬ್ ನೋಡಿ ಕಳ್ಳತನಕ್ಕೆ ಇಳಿದಿದ್ದ ಖದೀಮರ ಸೆರೆ!

ಸಾರಾಂಶ

ಯ್ಯೂಟೂಬ್ ನೋಡಿ ಸಲಕರಣೆ ಖರೀದಿಸಿ ಸಿಲಿಕಾನ್ ಸಿಟಿಯಲ್ಲಿ 22 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತಾರಾಜ್ಯ ಖದೀಮರನ್ನು ಸಂಜಯನಗರ ಪೊಲೀಸರು ಬಂದಿಸಿದ್ದಾರೆ. ಕಳ್ಳತನಕ್ಕೆ ಬೇಕಾದ ಸಾಮಗ್ರಿಗಳನ್ನು ಇವರು ಯೂಟ್ಯೂಬ್ ನೋಡಿ ಖರೀದಿ ಮಾಡುತ್ತಿದ್ದರು.

ವರದಿ: ಪ್ರದೀಪ್ ಕಗ್ಗೆ

ಬೆಂಗಳೂರು (ಏ.22): ಸಂಜಯ್ ನಗರ ಪೊಲೀಸ್ (Sanjay Nagar Police) ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಏಳು ಮನೆಗಳ ಕಿಟಕಿ ಮುರಿದು  ಕಳ್ಳತನ ಮಾಡಿದ್ದ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡು ಇಬ್ಬರು  ಅಂತಾರಾಜ್ಯ ಖದೀಮರನ್ನು ಹಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಕಳ್ಳತನ ಮಾಡಲು ಬೇಕಾದ ಸಲಕರಣೆಗಳನ್ನ ಯ್ಯೂಟೂಬ್ ನಲ್ಲಿ(You Tube) ನೋಡಿ ಖರೀದಿ ಮಾಡುತ್ತಿದ್ದ ಇವರು, ಬಳಿಕ ಕದ್ದ ಬೈಕಿನಲ್ಲಿ ಹಗಲಿನಲ್ಲಿ ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ಮನೆಗಳ್ಳತನ ಮಾಡುತ್ತಿದ್ದರು. ತೆಲಂಗಾಣ (Telangana) ಮೂಲದ ವಿನೋದ್ ಕುಮಾರ್ (Vinod Kumar) ಹಾಗೂ ಪಶ್ಚಿಮ ಬಂಗಾಳದ (West Bengal) ರೋಹಿತ್ ಮಂಡಲ್ (Rohit Mondal) ಬಂಧಿತ ಆರೋಪಿಗಳು. 

ಈ‌ ಪೈಕಿ ಪ್ರಮುಖ ಆರೋಪಿ ವಿನೋದ್ ಹೈದರಾಬಾದ್ ನಿವಾಸಿಯಾಗಿದ್ದು 2015ರಲ್ಲಿ ಈತನ ವಿರುದ್ಧ ಆರು ಪ್ರಕರಣ ದಾಖಲಾಗಿ ಜೈಲಿಗೆ ಹೋಗಿ ಬಂದಿದ್ದ. ಆದರೆ ಮನೆಗೆ ಈತನನ್ನು ಮನೆಗೆ ಸೇರಿಸಿಕೊಂಡಿರಲಿಲ್ಲ. ಹೀಗಾಗಿ ಕೋಲ್ಕತ್ತಾಕ್ಕೆ ಹೋಗಿ ಮೂರು ವರ್ಷಗಳ ಕಾಲ ವಾಸವಾಗಿದ್ದ. ಈ ವೇಳೆ ಬಾಂಗ್ಲಾ ಮೂಲದ ಯುವತಿ ಪರಿಚಯವಾಗಿ ಪ್ರೇಮಾಂಕುರವಾಗಿ ಮದುವೆ ಮಾಡಿಕೊಂಡಿದ್ದ. ಜೊತೆಗೆ ರೋಹಿತ್ ಮಂಡಲ್ ನ ಪರಿಚಯವಾಗಿತ್ತು. ಈ ಮೂವರು ಜೊತೆಗೊಡಿ ಹೆಸರು ಬದಲಾಯಿಸಿಕೊಂಡು ಬಾಂಗ್ಲಾಕ್ಕೂ ಹೋಗಿ ಕೆಲ ಕಾಲ ಜೀವನ ಸಾಗಿಸಿದ್ದರು. 

ಆದರೆ ಅಲ್ಲಿ ಜೀವನ ನಡೆಸಲು ಕಷ್ಟವಾಗಿದ್ದರಿಂದ  ಮತ್ತೆ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ಕಳ್ಳತನಕ್ಕೆ ಸ್ಕೆಚ್ ಆಗಿದ್ದರು. ಕಳ್ಳತನ ಮಾಡಲು ಬೇಕಾದ ಸಲಕರಣೆಗಳನ್ನ ಯ್ಯೂಟೂಬ್ ನಲ್ಲಿ ನೋಡಿ ಖರೀದಿಸಿದ್ದರು. ಕೃತ್ಯ ಎಸಗಲು ನಗರದಲ್ಲಿ ಬೈಕ್ ಕದ್ದು ರಾತ್ರಿ ವೇಳೆ‌ ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದರು‌. 

ಖದೀಮರ ಕೈಚಳಕ ಹೆಚ್ಚಾಗುತ್ತಿದ್ದಂತೆ ಗಂಭೀರವಾಗಿ ತೆಗೆದುಕೊಂಡ ಇನ್ ಸ್ಪೆಕ್ಟರ್ ಬಾಲರಾಜ್ ನೇತೃತ್ವದ ತಂಡ ಇಬ್ಬರು ಅಂತರಾಜ್ಯ ಖದೀಮರನ್ನು ಬಂಧಿಸಿ 79 ಲಕ್ಷ ಮೌಲ್ಯದ 792 ಗ್ರಾಂ‌ಮ್ ಚಿನ್ನಾಭರಣ, ವಿವಿಧ ಕಂಪೆನಿಯ ಮೊಬೈಲ್, ಲಾಪ್ ಟಾಪ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ‌. ಆರೋಪಿಗಳ ಬಂಧನದಿಂದ  ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 22 ಕಳವು ಪ್ರಕರಣ ಪತ್ತೆ ಹಚ್ಚಿದಂತಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ