
ಬೆಂಗಳೂರು(ಸೆ.19): ನಗರದಲ್ಲಿ ದಿನೇ ದಿನೇ ಕ್ರೈಂ ಹೆಚ್ಚುತ್ತಿರುವ ಹಿನ್ನೆಲೆ ಕ್ರಿಮಿನಲ್ ಚಟುವಟಿಕೆಗಳನ್ನ ತಡೆಗಟ್ಟಲು ಬೆಂಗಳೂರು ನಗರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಲು ಪ್ರತಿ ಸಬ್ ಡಿವಿಷನ್ ಎಸಿಪಿಗಳ ನೇತೃತ್ವದಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ತೀವ್ರ ದಾಳಿ ನಡೆಸಲಾಗುತ್ತಿದೆ.
ಪೂರ್ವ ವಿಭಾಗದ ಹಲಸೂರು, ಬಾಣಸವಾಡಿ, ಇಂದಿರಾನಗರ, ಹೆಣ್ಣೂರು, ರಾಮಮೂರ್ತಿ ನಗರ, ಭಾರತಿ ನಗರ, ಶಿವಾಜಿನಗರ ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಗಳ ಮನೆಗಳ ಮೇಲೆ ಈ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಭೀಮಾ ತೀರದ SBI ಬ್ಯಾಂಕ್ ದರೋಡೆ:ತಾವು ಕದ್ದಿದ ಚಿನ್ನ-ನಗದು ವಾಪಸ್ ಮಾಡ್ತಿರೋ ಗ್ರಾಮಸ್ಥರು!
ಬೆಂಗಳೂರಿನಲ್ಲಿ ಸರಗಳ್ಳತನ, ಪುಂಡರ ಹಾವಳಿ:
ಇತ್ತೀಚೆಗೆ ಸರಗಳ್ಳತನ ಮತ್ತು ಪುಡಿ ರೌಡಿಗಳ ಹಾವಳಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಈ ಉದ್ದೇಶಿತ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸರು ಹಳೆ ರೌಡಿಗಳ ಕಾರ್ಯಚಟುವಟಿಕೆಗಳ ಮೇಲೆ ನಿಗಾ ಇಟ್ಟಿದ್ದು, ದಾಳಿಯ ವೇಳೆ ರೌಡಿಗಳ ಇತ್ತೀಚಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ಯಾವುದೇ ಸುಳಿವು ಸಿಕ್ಕರೆ ಸ್ಥಳದಲ್ಲೇ ಕಾನೂನು ಕ್ರಮಕ್ಕೆ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ ಜೊತೆಗೆ, ದಾಳಿಯ ಸಂದರ್ಭದಲ್ಲಿ ಮನೆಯಲ್ಲಿ ಮಾರಣಾಂತಿಕ ಆಯುಧಗಳು ಸಿಕ್ಕರೆ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸುವ ನಿರ್ಧಾರ ಕೈಗೊಳ್ಳಲಾಗಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಕ್ರೈಂ ತಡೆಗಟ್ಟಲು ಪೊಲೀಸ್ ಇಲಾಖೆಯ ಈ ಕಾರ್ಯಾಚರಣೆ ತೀವ್ರಗೊಂಡಿದೆ. ಮುಂದಿನ ಅಪ್‌ಡೇಟ್‌ಗಾಗಿ ಕಾಯಿರಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ