ಬೆಂಗ್ಳೂರಲ್ಲಿ ಮಾರಾಟ ಮಾಡಲು ತಮಿಳುನಾಡಿನಲ್ಲಿ ಬಚ್ಚಿಟ್ಟಿದ್ದ ರಕ್ತಚಂದನ ಜಪ್ತಿ

Published : Oct 30, 2022, 10:00 AM IST
ಬೆಂಗ್ಳೂರಲ್ಲಿ ಮಾರಾಟ ಮಾಡಲು ತಮಿಳುನಾಡಿನಲ್ಲಿ ಬಚ್ಚಿಟ್ಟಿದ್ದ ರಕ್ತಚಂದನ ಜಪ್ತಿ

ಸಾರಾಂಶ

ವಿಚಾರಣೆ ವೇಳೆ ಆರೋಪಿ ಇಮ್ತಿಯಾಜ್‌ ನೀಡಿದ ಮಾಹಿತಿ ಮೇರೆಗೆ ತಮಿಳುನಾಡಿಗೆ ತೆರಳಿದ ಪೊಲೀಸರ ತಂಡ 

ಬೆಂಗಳೂರು(ಅ.30): ರಕ್ತಚಂದನ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ಬೊಮ್ಮನಹಳ್ಳಿಯ ಇಮ್ತಿಯಾಜ್‌ ಷರೀಫ್‌ ಮತ್ತು ಕೃಷ್ಣಗಿರಿಯ ಸೈಯದ್‌ ನೂರುದ್ದೀನ್‌ ಅವರಿಂದ 400 ಕೆ.ಜಿ. ರಕ್ತಚಂದನ ಮರದ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ತಲೆ ಮರೆಸಿಕೊಂಡಿರುವ ಆಂಧ್ರಪ್ರದೇಶ ಮೂಲದ ಮತ್ತೊಬ್ಬ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅ.16ರಂದು ಸಂಜೆ ವಾಟಾಳ್‌ ನಾಗರಾಜ್‌ ರಸ್ತೆಯ ರೇಷ್ಮೆ ಭವನದ ಬಳಿ ಆರೋಪಿ ಇಮ್ತಿಯಾಜ್‌ ಷರೀಫ್‌ ಬ್ಯಾಗ್‌ ಹಿಡಿದು ಅನುಮಾನಾಸ್ಪದವಾಗಿ ನಿಂತಿದ್ದನ್ನು ಗಮನಿಸಿರುವ ಗಸ್ತು ಪೊಲೀಸರು, ಆತನನ್ನು ವಶಕ್ಕೆ ಪಡೆದು ಬ್ಯಾಗ್‌ ಪರೀಶೀಲಿಸಿದಾಗ 11 ಕೆ.ಜಿ. ತೂಕದ ರಕ್ತಚಂದನದ ತುಂಡುಗಳು ಪತ್ತೆಯಾಗಿವೆ. ಬಳಿಕ ಆತನನ್ನು ವಿಚಾರಣೆಗೆ ಒಳಪಡಿಸಿದಾಗ, ಗಿರಾಕಿಗೆ ರಕ್ತಚಂದನ ಮಾರಾಟ ಮಾಡಲು ಸ್ಯಾಂಪಲ್‌ ತೋರಿಸಲು ಬಂದಿದ್ದಾಗಿ ಬಾಯ್ಬಿಟ್ಟಿದ್ದಾನೆ. ಈತನ ನೀಡಿದ ಮಾಹಿತಿ ಮೇರೆಗೆ ಆರೋಪಿ ಸೈಯದ್‌ ನೂರುದ್ದೀನ್‌ನನ್ನು ಬಂಧಿಸಲಾಗಿದೆ.

ಬೆಂಗಳೂರು: ಸಂಪ್‌ನಲ್ಲಿತ್ತು 2.68 ಕೋಟಿಯ ರಕ್ತಚಂದನ, ನಾಲ್ವರು ರೈತರು ಸೇರಿ ಐವರ ಸೆರೆ

ವಿಚಾರಣೆ ವೇಳೆ ಆರೋಪಿ ಇಮ್ತಿಯಾಜ್‌ ನೀಡಿದ ಮಾಹಿತಿ ಮೇರೆಗೆ ತಮಿಳುನಾಡಿಗೆ ತೆರಳಿದ ಪೊಲೀಸರ ತಂಡ, ಅಲ್ಲಿನ ಕೃಷ್ಣಗಿರಿ ಹೊರವಲಯದ ಶೆಡ್‌ವೊಂದರಲ್ಲಿ ಆರೋಪಿಗಳು ಬಚ್ಚಿಟ್ಟಿದ್ದ 399 ಕೆ.ಜಿ. ತೂಕದ ರಕ್ತಚಂದನದ ತುಂಡುಗಳನ್ನು ಜಪ್ತಿ ಮಾಡಿದ್ದಾರೆ. ಈ ರಕ್ತ ಚಂದನ ಮಾರಾಟ ದಂಧೆಯಲ್ಲಿ ಹಲವರು ಭಾಗಿಯಾಗಿರುವ ಸಾಧ್ಯತೆಯಿದೆ. ಆರೋಪಿಗಳು ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬನಿಂದ ಈ ರಕ್ತಚಂದನದ ತುಂಡುಗಳನ್ನು ಖರೀಸಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. 

ತಲೆಮರೆಸಿಕೊಂಡಿರುವ ಆಂಧ್ರಪ್ರದೇಶ ಮೂಲದ ವ್ಯಕ್ತಿಯ ಬಂಧನದ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಶ್ರೀರಾಮಪುರ ಪೊಲೀಸ್‌ ಠಾಣೆಯಲ್ಲಿ ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ