
ಬೆಂಗಳೂರು(ಅ. 03) ಇದೊಂದು ವಿಚಿತ್ರ ಪ್ರಕರಣ ಎಫ್ಐಆರ್ ದಾಖಲಾಗಿದೆ. ಪೊಲೀಸ್ ಇನ್ಸ್‌ಪೆಕ್ಟರ್ ವಾಕಿಟಾಕಿ ಕಳ್ಳತನವಾಗಿದ್ದು ದೂರು ದಾಖಲಾಗಿದೆ.
ಭಾರತ್ ಬಂದ್ ವೇಳೆ ಟೌನ್ ಹಾಲ್ ಮುಂಭಾಗ ವಾಕಿಟಾಕಿ ಕಳ್ಳತನವಾಗಿತ್ತು. ಸಪ್ಟೆಂಬರ್ 27 ರಂದು ಸೋಮವಾರ ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು.
ಈ ವೇಳೆ ಟೌನ್ ಹಾಲ್ ಬಳಿ ರೈತರಿಂದ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿತ್ತು. ಟೌನ್ ಹಾಲ್ ಬಳಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಎಸ್ ಜೆ ಪಾರ್ಕ್ ಠಾಣೆ ಇನ್ಸ್‌ಪೆಕ್ಟರ ಶಿವಕುಮಾರ್ ಬಳಿಯಿದ್ದ ಎಲೆಕ್ಟ್ರಾನಿಕ್ ವಾಕಿಟಾಕಿ ಮಿಸ್ಸಿಂಗ್ ಆಗಿದೆ.
ಮಾಯಾಂಗನೆ ಮೋಹಕ್ಕೆ ಸಿಲುಕಿ ಮಾಹಿತಿ ಸೋರಿಕೆ ಮಾಡ್ತಿದ್ದ
ಟೌನ್ ಹಾಲ್ ಮುಂಭಾಗ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ರಸ್ತೆ ತಡೆಗೆ ಮುಂದಾಗಿದ್ದ ವೇಳೆ ಗುಂಪುನ್ನ ತಡೆಯಲು ಪೊಲೀಸರು ಯತ್ನಿಸಿದ್ದದ್ದರು. ಈ ವೇಳೆ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡಲು ಬೆಲ್ಟ್ ಗೆ ಸಿಕ್ಕಿಸಿದ ವಾಕಿಟಾಕಿ ಹುಡುಕಿದಾಗ ಮಿಸ್ಸಿಂಗ್ ಆಗಿರುವುದು ಗೊತ್ತಾಗಿದೆ.
ಪತ್ರಿಭಟನೆ ಬಳಿಕ ವಾಕಿಟಾಕಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಎಲ್ಲೂ ವಾಕಿಟಾಕಿ ಪತ್ತೆಯಾಗದ ಹಿನ್ನಲೆಯಲ್ಲಿ ದೂರು ನೀಡಲಾಗಿದೆ. ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಗೆ ಇನ್ಸ್‌ಪೆಕ್ಟರ್ ಶಿವಕುಮಾರ್ ದೂರು ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ