
ಬೆಂಗಳೂರು(ಏ.11): ಸ್ನೇಹಿತರ ವಿವಾಹ ವಿಚ್ಛೇದನ ಪ್ರಕರಣದಲ್ಲಿ ಹೇಳಿಕೆ ನೀಡಲು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಗೆ ತೆರಳಿದ್ದ ಮಹಿಳೆ ಜತೆಗೆ ಅನುಚಿತವಾಗಿ ವರ್ತಿಸಿದ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಮಂಜುನಾಥ್ ಈಗ ಅಮಾನತು ಆಗಿ ಮನೆಯಲ್ಲಿ ಕುಳಿತಿದ್ದಾರೆ.
ಪೊಲೀಸ್ ಠಾಣೆಗೆ ದೂರು ನಿಡಲು ಹೋಗಿದ್ದ ಮಹಿಳೆಯೊಬ್ಬರು ತನ್ನ ಮೇಲೆ ಸುದ್ದಗುಂಟೆಪಾಳ್ಯ ಪಿಎಸ್‌ಐ ಮಂಜುನಾಥ್ ಅವರು ಮೈ-ಕೈ ಹಾಗೂ ಸೊಂಟ ಮುಟ್ಟಿ ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದರು. ನಿನ್ನೆ ಸಂಜೆ ವೇಳೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಗೆ ಬಂದು ಪಿಎಸ್‌ಐ ಮೇಲೆ ಲಿಖಿತ ದೂರು ದಾಖಲಿಸಿದ್ದರು. ಮಹಿಳೆ ದೂಡಿನ ಆಧಾರದಲ್ಲಿ ಠಾಣೆಯಲ್ಲಿ ಎಫ್‌ಐಆರ್ ಅನ್ನೂ ದಾಖಲು ಮಾಡಲಾಯಿತು. ನಂತರ ದೂರು ಇದ್ದ ಪಿಎಸ್‌ಐ ಮೇಲೆ ತನಿಖೆಯನ್ನೂ ಮಾಡಲಾಗಿದ್ದು, ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಪಿಎಸ್‌ಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸರ್ಕಾರಿ ಕೊಟ್ಟಿದ್ದ ಕೆಲಸ ಮಾಡುವುದನ್ನು ಬಿಟ್ಟು ಚಪಲಕ್ಕೆ ಮಹಿಳೆಯ ಸೊಂಟ ಮುಟ್ಟಿದ ಪಿಎಸ್‌ಐ ಈಗ ಅಮಾನತ್ತಾಗಿ ಮನೆಯಲ್ಲಿ ಕೂತಿದ್ದಾರೆ.
ಬಿಜೆಪಿ ಕಚೇರಿಗೆ ನುಗ್ಗಿ ಸೈಲೆಂಟ್ ಸುನೀಲ ಬೆಂಬಲಿಗರ ಗಲಾಟೆ, ಚಾಮರಾಜಪೇಟೆ ಜಂಗ್ಲಿ ಕುಸ್ತಿಗೆ ಕಾಂಗ್ರೆಸ್ ಟಾಂಗ್!
ತಡರಾತ್ರಿ ವಾಟ್ಸಾಪ್‌ನಲ್ಲಿ ಸಂದೇಶ ಕಳಿಸಿ ಕಿರುಕುಳ: ಸುದ್ದಗುಂಟೆಪಾಳ್ಯ ಠಾಣೆ ಪಿಎಸ್‌ಐ ಮಂಜುನಾಥ ವಿರುದ್ಧ ಮಹಿಳೆ ಅನುಚಿತ ವರ್ತನೆ ಆರೋಪ ಮಾಡಿದ್ದರು. ಈ ಸಂಬಂಧ ಏ.10ರಂದು ಟ್ವಿಟರ್‌ನಲ್ಲಿ ಬರೆದು ನಗರ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿದ್ದರು.‘ಸ್ನೇಹಿತರ ವಿವಾಹ ವಿಚ್ಛೇದನ ಪ್ರಕರಣ ಸಂಬಂಧ ಹೇಳಿಕೆ ದಾಖಲಿಸಲು ಏ.8ರಂದು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಗೆ ತೆರಳಿದ್ದೆ. ಈ ವೇಳೆ ಪಿಎಸ್‌ಐ ಮಂಜುನಾಥ ಅವರು ಹೇಳಿಕೆ ದಾಖಲಿಸುವ ನೆಪದಲ್ಲಿ ನನ್ನ ಕೈ, ಸೊಂಟ ಮುಟ್ಟಿ ಅಸಭ್ಯವಾಗಿ ವರ್ತಿಸಿದರು. ಅಷ್ಟೇ ಅಲ್ಲದೆ, ತಡರಾತ್ರಿ ವಾಟ್ಸಾಪ್‌ನಲ್ಲಿ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದರು
‘ಈ ಘಟನೆಯಿಂದ ನಾನು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದೇನೆ. ಈ ಬಗ್ಗೆ ನಾನು ಏನು ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ. ಈ ಸಂದರ್ಭವನ್ನು ನಾನು ಹೇಗೆ ನಿಭಾಯಿಸಬೇಕು ಎಂಬುದು ಹೊಳೆಯುತ್ತಿಲ್ಲ. ಈ ಬಗ್ಗೆ ಸಲಹೆ ನೀಡಿ’ ಆ ಮಹಿಳೆ ಟ್ವಿಟರ್‌ನಲ್ಲಿ ಮನವಿ ಮಾಡಿಕೊಂಡಿದ್ದರು.
ನೇರವಾಗಿ ಪೊಲೀಸ್ ಠಾಣೆಗೆ ಬಂದು ಲಿಖಿತ ದೂರು ದಾಖಲು:ಇನ್ನು ಟ್ವಿಟರ್‌ನಲ್ಲಿ ದಾಖಲಾಗಿದ್ದ ದೂರಿನ ಆಧಾರದಲ್ಲಿ ಮಹಿಳೆಯನ್ನು ಪೊಲೀಸ್ ಕಚೇರಿಯಿಂದ ಸಂಪರ್ಕ ಮಾಡಿದ್ದಾರೆ. ನಂತರ, ನೀವು ಪೊಲೀಸ್ ಠಾಣೆಗೆ ಬಂದು ಎಫ್ಐಆರ್ ದಾಖಲಿಸಲು ಲಿಖಿತ ದೂರು ನೀಡಬೇಕು ಎಂದು ತಿಳಿಸಲಾಗಿತ್ತು. ನಾವು ಹೇಳಿದ ನಂತರ ಮಹಿಳೆ ನಿನ್ನೆ ಸಂಜೆ ಪೊಲೀಸ್ ಠಾಣೆಗೆ ಬಂದು ಲಿಖಿತ ರೂಪದಲ್ಲಿ ದೂರು ನೀಡಿದ್ದಾರೆ. ಮಹಿಳೆಯ ದೂರಿದ ಆಧಾರದ ಮೇಲೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇನ್ನು ಐಪಿಸಿ 354ಎ ,354ಡಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಸತ್ಯಾಂಶವನ್ನು ತಿಳಿದುಕೊಳ್ಳಲು ತನಿಖೆ ನಡೆಸಲಾಗಿದೆ ಎಂದು ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ.ಬಾಬಾ ಹೇಳಿದ್ದಾರೆ.
ಗೂಂಡಾ ಕಾಯ್ದೆಯಡಿ ಸುಪಾರಿ ಕಿಲ್ಲರ್ ಸೈಫ್, ರೌಡಿಶೀಟರ್ ಬೈಂದೂರು ರವಿ ಬಂಧನ
ಅನುಚಿತ ವರ್ತನೆಯ ಪಿಎಸ್‌ಐ ಅಮಾನತು: ಹಿರಿಯ ಅಧಿಕಾರಿಗೆ ತನಿಖೆ ಜವಾಬ್ದಾರಿಯನ್ನು ನೀಡಲಾಗಿತ್ತು. ಘಟನೆ ಸಂಬಂಧ ಎಸಿಪಿ ಹಂತದಲ್ಲಿ ತನಿಖೆಗೆ ಆದೇಶಿಸಲಾಗಿತ್ತು. ಇನ್ನು ತನಿಖೆಯಲ್ಲಿ ಪಿಎಸ್ ಐ ಹೇಳಿಕೆ ದಾಖಲಿಸಲು ಬಂದಿದ್ದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರೋದು ಗೊತ್ತಾಗಿದೆ. ಒಬ್ಬ ಅಧಿಕಾರಿಯಾಗಿ ಈ ರೀತಿ ಮಾಡಿರೋದು ತಪ್ಪು. ಹೀಗಾಗಿ ಆತನ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಸಸ್ಪೆಂಡ್ ಮಾಡಲಾಗಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ