
ಬೆಂಗಳೂರು (ಜೂ.4): ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಕಾರ್ಯಕ್ರಮ ಮತ್ತೊಮ್ಮೆ ಬದಲಾವಣೆಯ ಸಾಧ್ಯತೆ ಎದುರಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಸಂಜೆ ಐದರಿಂದ ಆರು ಗಂಟೆಯವರೆಗೆ ನಡೆಯಲಿರುವ ಅಭಿನಂದನಾ ಕಾರ್ಯಕ್ರಮಕ್ಕೆ ಟಿಕೆಟ್ ಅಥವಾ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶವಿದೆ. ಆದರೆ, ಈಗ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಕಾರ್ಯಕ್ರಮ ಆಯೋಜಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಭಾಗವಹಿಸಲಿದ್ದಾರೆ. ಈ ಬಾರಿ ಯಾವುದೇ ವಿಜಯ ಪಥಸಂಚಲನ ಇರುವುದಿಲ್ಲ. ಕೆಎಸ್‌ಸಿಎ ಕಾರ್ಯದರ್ಶಿ ಶಂಕರ್ ಅವರು ಕಮಿಷನರ್ ಜೊತೆಗೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಪರಿಶೀಲನೆಯ ಬಳಿಕ ಕಾರ್ಯಕ್ರಮದ ಸ್ಥಳದಲ್ಲಿ ಬದಲಾವಣೆ ಆಗುವ ಸಂಭವವಿದೆ.
ಪ್ರಸ್ತುತ, ಮುಖ್ಯಮಂತ್ರಿಯವರೊಂದಿಗೆ ಸಭೆ ನಡೆಯುತ್ತಿದ್ದು, ಗೃಹ ಸಚಿವರು ಮುಖ್ಯಮಂತ್ರಿಯವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶೀಘ್ರದಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಸ್ಥಳದಲ್ಲಿ ಸೀಮಿತ ಪಾರ್ಕಿಂಗ್ ವ್ಯವಸ್ಥೆ ಇರುವ ಕಾರಣ, ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಗಳನ್ನು ಬಳಸಲು ಸಲಹೆ ನೀಡಲಾಗಿದೆ. ಅಲ್ಲದೆ, ನಗರ ಮಧ್ಯೆ ಪ್ರದೇಶವನ್ನು ಮಧ್ಯಾಹ್ನ ಮೂರರಿಂದ ರಾತ್ರಿ ಎಂಟು ಗಂಟೆಯವರೆಗೆ ತಪ್ಪಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ