ಬೆಂಗಳೂರಿನ ದಾಸರಹಳ್ಳಿಯಲ್ಲಿ ಮಲತಂದೆಯೊಬ್ಬ ಇಬ್ಬರು ಹೆಣ್ಣುಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಮೃತರು 14 ಮತ್ತು 15 ವರ್ಷದವರಾಗಿದ್ದು, ಘಟನೆ ನಡೆದ ಸಮಯದಲ್ಲಿ ಮಕ್ಕಳ ತಾಯಿ ಕೆಲಸದಲ್ಲಿದ್ದರು.
ಬೆಂಗಳೂರು (ಆ.24): ನಾನು ಮದುವೆಯಾಗಿರುವ ಹೆಂಡತಿ ಬೇಕು. ಆದರೆ, ಆಕೆಯ ಮೊದಲ ಗಂಡನಿಗೆ ಜನಿಸಿದ್ದ ಇಬ್ಬರು ಹೆಣ್ಣುಮಕ್ಕಳ ಜವಾಬ್ದಾರಿ ಬೇಡವೆಂದು ಮಲತಂದೆಯೇ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ.
ಈಗಾಗಲೇ ಬೆಂಗಳೂರು ಸೇರಿದಂತೆ ನಗರ, ಪಟ್ಟಣ ಪ್ರದೇಶಗಳಲ್ಲಿ ವಾಸ ಮಾಡುವ ಜನರು ತಮಗೆ ಕುಟುಂಬದಲ್ಲಿ ಹೊಂದಾಣಿಕೆ ಆಗದಿದ್ದರೆ ಡಿವೋರ್ಸ್ ಕೊಟ್ಟು ಇನ್ನೊಂದು ಮದುವೆ ಮಾಡಿಕೊಂಡು ಜೀವನ ಮಾಡಿಕೊಂಡು ಹೋಗುವುದು ಸಾಮಾನ್ಯವಾಗಿದೆ. ಅದೇ ರೀತಿ ಗಂಡನಿಂದ ವಿಚ್ಚೇದನ ಪಡೆದು ವಾಸವಾಗಿದ್ದ ಅನಿತಾಳನ್ನು 9 ವರ್ಷಗಳ ಹಿಂದೆಯೇ ಉತ್ತರ ಭಾರತ ಮೂಲದ ಸುಮಿತ್ ಮದುವೆ ಮಾಡಿಕೊಂಡಿದ್ದಾನೆ. ನಾನು ನಿನ್ನನ್ನು ಮದುವೆಯಾಗಿ ಗಂಡನಾಗಿರುವುದಲ್ಲದೇ, ನಿನ್ನ ಮಕ್ಕಳಿಗೂ ಅಪ್ಪನಾಗಿ ಜವಾಬ್ದಾರಿ ಹೊರುತ್ತೇನೆ ಎಂದು ಮದುವೆ ಮಾಡಿಕೊಂಡಿದ್ದಾನೆ. ಸುಮಾರು 9 ವರ್ಷಗಳ ಕಾಲ ಹೆಂಡತಿ ಮಕ್ಕಳೊಂದಿಗೆ ಚೆನ್ನಾಗಿಯೇ ಜೀವನ ನಿರ್ವಹಣೆ ಮಾಡುತ್ತಿದ್ದ ಗಂಡ ಸುಮಿತ್, ಈಗ ಮಕ್ಕಳು ಹದಿಹರೆಯದ ವಯಸ್ಸಿಗೆ ಬಂದಾಗ ಕೊಲೆ ಮಾಡಿ ಪರಾರಿ ಆಗಿದ್ದಾನೆ.
ಕಾರ್ಕಳ ಹಿಂದೂ ಯುವತಿಗೆ ಡ್ರಗ್ಸ್ ಕೊಟ್ಟು ಅತ್ಯಾಚಾರವೆಸಗಿದ ಅಲ್ತಾಫ್; ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸರು!
ಈ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ಕುಟುಂಬ ದಾಸರಹಳ್ಳಿಯ ಕಾವೇರಿ ಬಡಾವಣೆಯಲ್ಲಿ ವಾಸವಿದ್ದರು. ಸುಮಾರು 14 ಹಾಗೂ 15 ವರ್ಷದ ಹೆಣ್ಣು ಮಕ್ಕಳನ್ನು ಮಲತಂದೆಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಸೋನಿಯಾ ಹಾಗೂ ಸೃಷ್ಟಿ ಕೊಲೆಯಾದ ಅಪ್ರಾಪ್ತ ಮಕ್ಕಳು ಆಗಿದ್ದಾರೆ. ಕೊಲೆಯಾದ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಈಶಾನ್ಯ ವಿಭಾಗ ಡಿಸಿಪಿ ಸಜೀತ್ ಹಾಗೂ ಅಮೃತಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ದಾಸರಹಳ್ಳಿಯ ಕಾವೇರಿ ಬಡಾವಣೆಯ ಮನೆಯೊಂದರ 2ನೇ ಮಹಡಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ಕು ಜನರ ಕುಟುಂಬ ವಾಸವಾಗಿತ್ತು. ಇನ್ನು ಸಮಿತ್ ಜೆಪ್ಟೊದಲ್ಲಿ ಡಿಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದನು. ಆದರೆ, ಶನಿವಾರ ಮಧ್ಯಾಹ್ನ ಹೆಂಡತಿ ಅನಿತಾ ಗಾರ್ಮೆಂಟ್ಸ್‌ನಲ್ಲಿ ಕೆಲಸಕ್ಕೆ ಹೋದಾಗ, ಮಲತಂದೆ ಸುಮಿತ್ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ಪರಾರಿ ಆಗಿದ್ದಾನೆ.
ಬಾಳೆ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಕಾಮತೃಷೆ ತೀರಿಸಿಕೊಂಡು ಕೊಲೆಗೈದನಾ ತೋಟದ ಮಾಲೀಕ!
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಈಶಾನ್ಯ ವಿಭಾಗ ಡಿಸಿಪಿ ಸಜೀತ್ ಅವರು, ದಾಸರಹಳ್ಳಿಯ ಮನೆಯಲ್ಲಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ಘಟನೆ ಮಧ್ಯಾಹ್ನ 3:30ರಲ್ಲಿ ನಡೆದಿದೆ. ಈ ಬಗ್ಗೆ ಮಕ್ಕಳ ತಾಯಿ ಅನಿತಾ ದೂರು ನೀಡಿದ್ದಾರೆ. ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಕ್ಕಳನ್ನು ಕೊಲೆ ಮಾಡಿದ ಬಳಿಕ ಮಲತಂದೆ ಸುಮಿತ್ ನಾಪತ್ತೆ ಆಗಿದ್ದಾರೆ. ಅವರಿಗಾಗಿ ಹುಡುಕಾಟ ಮಾಡಲಾಗುತ್ತಿದೆ. ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ.