
ಬೆಂಗಳೂರು (ಅ.30): ಸ್ಯಾಂಡಲ್‌ವುಡ್ ನಿರ್ಮಾಪಕ ಹಾಗೂ ನಟ ರಾಕ್‌ಲೈನ್ ವೆಂಕಟೇಶ್ ಅವರ ತಮ್ಮನ ಮನೆಗೆ ಕನ್ನ ಹಾಕಿದ ಖದೀಮರು 5 ಕೆ.ಜಿ. ತೂಕದ ಚಿನ್ನಾಭರಣವನ್ನು ಹೊತ್ತೊಯ್ದಿದ್ದಾರೆ ಎಂದು ಸ್ವತಃ ರಾಕ್‌ಲೈನ್ ವೆಂಕಟೇಶ್ ತಮ್ಮನೇ ದೂರು ನೀಡಿದ್ದಾರೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ರಾಕ್ ಲೈನ್ ವೆಂಕಟೇಶ್ ತಮ್ಮನ ಮನೆಯಲ್ಲಿ ಕಳ್ಳತನವಾಗಿದೆ. ಯುರೋಪ್ ಪ್ರವಾಸಕ್ಕೆ ಕುಟುಂಬ ಸಮೇತವಾಗಿ ಹೋಗಿದ್ದ ವೇಳೆ ಕಳ್ಳರು ಕೈಚಳಕ ತೋರಿಸಿದ್ದಾರೆ. ವೆಂಕಟೇಶ್ ಅವರ ತಮ್ಮ ಹಾಗೂ ಕುಟುಂಬ ಸದಸ್ಯರು ಯುರೋಪ್ ಪ್ರವಾಸ ಮುಗಿಸಿಕೊಂಡು ನಿನ್ನೆ (ಭಾನುವಾರ) ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿದ್ದ 5 ಕೆ.ಜಿ. ಚಿನ್ನಾಭರಣ ಕಳ್ಳತನವಾಗಿದೆ ಎಂದು ದೂರು ನೀಡಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಹಾಲಕ್ಷ್ಮೀ ಲೇಔಟ್ ಠಾಣೆಯ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳ್ಳರ ಪತ್ತೆಗಾಗಿ ಟವರ್ ಡಂಪ್ ತೆಗೆದು ಆರೋಪಿಗಳಿಗಾಗಿ ಶೋಧ ಕಾರ್ಯ ಮಾಡಲಾಗುತ್ತಿದೆ. ಇನ್ನು ರಾಕ್‌ಲೈನ್ ವೆಂಕಟೇಶ್ ಅವರ ತಮ್ಮ ಮನೆಯಲ್ಲಿ ಕೆಲಸಕ್ಕೆ ಇದ್ದವರಿಂದಲೂ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು, ಶೋಧ ಕಾರ್ಯವನ್ನು ಮುಂದುವರೆಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ