ಬೆಂಗಳೂರಿನ ಜಾಲಹಳ್ಳಿಯಲ್ಲಿ ಹೋಂ ಗಾರ್ಡ್ ಒಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಾನೆ. ಪತ್ನಿಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಗಂಗರಾಜು ಎಂಬಾತ ಈ ಕೃತ್ಯ ಎಸಗಿದ್ದಾನೆ.
ಬೆಂಗಳೂರು (ಜ.08): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ವಾಸವಿದ್ದ ಕುಟುಂಬದಲ್ಲಿ ಪತ್ನಿಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಹೋಮ್‌ಗಾರ್ಡ್ ಗಂಡ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ತಾಯಿ ಹಾಗೂ ಇಬ್ಬರು ಮಕ್ಕಳನ್ನು ಕುಟುಂಬದ ಮಾಲೀಕನೇ ಕೊಲೆ ಮಾಡಿದ್ದಾನೆ. ಹೆಂಡತಿ ಭಾಗ್ಯಮ್ಮ, ಮಗಳು ನವ್ಯ (19) ಹಾಗೂ ಆತನ ಮನೆಯಲ್ಲಿಯೇ ಉಳಿದುಕೊಂಡಿದ್ದ ಅಕ್ಕನ ಮಗಳು ಹೇಮಾವತಿ (22) ಸೇರಿ ಮೂವರನ್ನು ಕೊಲೆ ಮಾಡಿದ್ದಾನೆ. ಇಲ್ಲಿ ಹೆಂಡತಿಯ ಶೀಲದ ಬಗ್ಗೆ ಅನುಮಾನ ಪಡುತ್ತಿದ್ದ ಗಂಗರಾಜು ಇಂದು ಬೆಳಗ್ಗೆ ಎಲ್ಲರನ್ನೂ ಕೊಲೆ ಮಾಡಿ ಬೀಸಾಡಿದ್ದಾನೆ. ಇನ್ನು ಕೊಲೆ ಮಾಡಿದ ನಂತರ ತಾನೇ ಸ್ವತಃ ಪೊಲೀಸ್ ಠಾಣೆಗೆ ತೆರಳಿ, ಹೆಂಡತಿ ಶೀಲದ ಮೇಲೆ ಅನುಮಾನ ಇತ್ತು. ಹೀಗಾಗಿ, ಮಚ್ಚಿನಿಂದ ಕೊಲೆ ಮಾಡಿದ್ದೇನೆ ಎಂದು ಮಚ್ಚಿನ ಸಮೇತವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಕೊಲೆ ಆರೋಪಿ ಗಂಗರಾಜು ಹೆಬ್ಬಗೋಡಿ ಪೊಲೀಸ್ ಠಾಣೆ ಹೋಂ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದನು. ಹೋಮ್‌ಗಾರ್ಡ್ ವಿಭಾಗದಲ್ಲಿ ಈತನಿಗೆ ಟ್ರಾಫಿಕ್ ಡ್ಯೂಟಿಗೆ ಹಾಕುತ್ತಿದ್ದರು. ಕೆಲಸದ ನಿಮಿತ್ತ ಗಂಗರಾಜು ಡ್ಯೂಟಿಗೆ ಹೋದಾಗ ಪತ್ನಿ ಭಾಗ್ಯಮ್ಮ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಡನೆ ಸೇರುತ್ತಿದ್ದಳು. ಈ ವಿಚಾರ ಮಗಳು ಹಾಗೂ ಮನೆಯಲ್ಲಿದ್ದ ಅಕ್ಕನ ಮಗಳಿಗೆ ಗೊತ್ತಿದ್ದರೂ ತನಗೆ ತಿಳಿಸಿಲ್ಲವೆಂದು ಕೋಪಗೊಂಡು ಕೊಲೆ ಮಾಡಿದ್ದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಪೀಣ್ಯಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಆಗಮಿಸಿ ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು ಕೊಲೆ ಬಗ್ಗೆ ಪೊಲೀಸರು ಇನ್ನಷ್ಟೇ ವಿಚಾರಣೆ ಮಾಡಿ ಮಾಹಿತಿ ಘಟನೆಗೆ ಇನ್ನಷ್ಟು ಮಾಹಿತಿಯನ್ನು ನೀಡಬೇಕಿದೆ.