ಬೆಂಗಳೂರಿನ ಜಾಲಹಳ್ಳಿಯಲ್ಲಿ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ತಾಯಿ ಗಂಗಾದೇವಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಬೆಂಗಳೂರು (ಏ.13): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆತ್ತ ತಾಯಿಯೇ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಘಟನೆಯು ಕೋಟ್ಯಂತರ ಜನರನ್ನು ಮಮ್ಮಲ ಮರುವಂತೆ ಮಾಡಿತ್ತು. ಈ ಘಟನೆಯ ಬೆನ್ನಲ್ಲಿಯೇ ಆಕೆಗೆ ಶಾಪ ಹಾಕಿದ್ದರು. ಮಕ್ಕಳನ್ನು ಕೊಲೆಗೈದ ತಾಯಿಯನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಲಾಗಿತ್ತು. ಆದರೆ, ಜೈಲಿನಲ್ಲಿ ಗಂಗಾದೇವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಬೆಂಗಳೂರಿನ ಜಾಲಹಳ್ಳಿಯಲ್ಲಿ ಮಕ್ಕಳನ್ನ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಗಂಗಾದೇವಿಯನ್ನ ಪೊಲೀಸರು ಬಂಧಿಸಿದ್ದಾರೆ. ಜಾಲಹಳ್ಳಿ ಪೊಲೀಸರು ಆರೋಪಿತೆ ಗಂಗಾದೇವಿಯನ್ನ ಅರೆಸ್ಟ್ ಮಾಡಿದ್ದಾರೆ. ಮಕ್ಕಳಾದ ಲಕ್ಷ್ಮಿ (9) ಹಾಗೂ ಗೌತಮ್ (7)ನನ್ನು ತಾಯಿ ಗಂಗಾದೇವಿ ಕೊಲೆ ಮಾಡಿದ್ದಳು. ಕೊಲೆ ಪ್ರಕರಣದ ಆರೋಪಿ ಗಂಗಾದೇವಿ ಪತಿಯೂ ಕೂಡ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣದ ಪೊಕ್ಸೊ ಕೇಸ್‌ನಲ್ಲಿ (POCSO Case) ಬಂಧಿತನಾಗಿ ಜೈಲಿನಲ್ಲಿದ್ದಾನೆ. ಆರೋಪಿತೆ ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದರು.
ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಉಗ್ರರಿಗೆ ವಿದೇಶಿ ಫಂಡಿಂಗ್; ಯಾವ ದೇಶದ ಹಣ ಗೊತ್ತಾ?
ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ವೇಳೆ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ ತಾಯಿ ಗಂಗಾದೇವಿಯನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಟ್ಟಿದ್ದರು. ಆದರೆ, ಆರೋಪಿ ಇಂದು ಜೈಲಿನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ತಾಯಿ ಗಂಗಾದೇವಿ ಮಂಗಳವಾರ ರಾತ್ರಿ ಇಬ್ಬರು ಮಕ್ಕಳನ್ನ ಸಾಯಿಸಿದ್ದರು. ಬುಧವಾರ ಬೆಳಿಗ್ಗೆ 112ಗೆ ಕರೆ ಮಾಡಿದ್ದರು. ತಾನು ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಹೇಳಿದ್ದಳು. ತಕ್ಷಣ ಸ್ಥಳಕ್ಕೆ ಹೋಗಿ ಗಂಗಾದೇವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಇನ್ನು ಪೊಲೀಸರು ಸ್ಥಳಕ್ಕೆ ಭೇಟಿ ಮಾಡಿದಾಗ ಜಾಲಹಳ್ಳಿ ವಿಲೇಜ್ ನಲ್ಲಿ ಗಂಗಾದೇವಿ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಳು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಗಂಗಾದೇವಿಯನ್ನ ಗುರುವಾರ ಪರಪ್ಪನ ಅಗ್ರಹಾರ ಜೈಲಿಗೆ ಲಾಗಿತ್ತು. ಗುರುವಾರ ರಾತ್ರಿ ಜೈಲಿನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇಂದು ಮರಣೋತ್ತರ ಪರೀಕ್ಷೆ ಮಾಡಿ ಸಂಬಂದಿಕರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ಈ ಘಟನೆ ಕುರಿತು ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.