ಫ್ರೀ ಫೈರ್ ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದು, ಹಣಕ್ಕೆ ಪೀಡಿಸಿದ ತಂಗಿ ಮಗ; 14 ವರ್ಷದ ಅಳಿಯ ಮಾವನಿಂದಲೇ ಕೊಲೆ!

Published : Aug 08, 2025, 12:29 PM IST
Bengaluru Online Game Boy Death

ಸಾರಾಂಶ

ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಬಾಲಕನನ್ನು ಆತನ ಮಾವನೇ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಣಕ್ಕಾಗಿ ಪೀಡಿಸುತ್ತಿದ್ದ ಬಾಲಕನ ಕಿರುಕುಳ ತಾಳಲಾರದೆ ಮಾವ ಈ ಕೃತ್ಯ ಎಸಗಿ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಬೆಂಗಳೂರು (ಆ.08): ಮೊಬೈಲ್ ಗೇಮ್ ಚಟಕ್ಕೆ ಬಿದ್ದು ಹಣಕ್ಕಾಗಿ ಹಲ್ಲೆ ನಡೆಸುತ್ತಿದ್ದ ಸೋದರಳಿಯನಿಂದ ಬೇಸತ್ತ ಮಾವನೊಬ್ಬ ಆತನನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ನಡೆದು ಒಂದು ವಾರದ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.

ಕೊಲೆಯಾದ ಬಾಲಕನನ್ನು ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಿವಾಸಿ ಅಮೋಘ ಕೀರ್ತಿ (14) ಎಂದು ಗುರುತಿಸಲಾಗಿದೆ. ಈ ಕೃತ್ಯ ಎಸಗಿದ ಆರೋಪಿ ಆತನ ಮಾವ ನಾಗಪ್ರಸಾದ್ (50). ಅಮೋಘ ಕೀರ್ತಿ, ತನ್ನ ತಾಯಿ ಶಿಲ್ಪಾ ಅವರ ಸಹೋದರ ನಾಗಪ್ರಸಾದ್ ಅವರೊಂದಿಗೆ ಕಳೆದ 8 ತಿಂಗಳಿಂದ ವಾಸವಾಗಿದ್ದನು.

ಈ ಸಮಯದಲ್ಲಿ, ಬಾಲಕ ಫ್ರೀ ಫೈರ್ ಮೊಬೈಲ್ ಗೇಮ್‌ಗೆ ದಾಸನಾಗಿದ್ದ. ಗೇಮ್ ಆಡಲು ಪದೇ ಪದೇ ಹಣಕ್ಕಾಗಿ ಮಾವ ನಾಗಪ್ರಸಾದ್ ಅವರಿಗೆ ಪೀಡಿಸುತ್ತಿದ್ದ. ಹಣ ನೀಡಲು ನಿರಾಕರಿಸಿದಾಗ ಆತನ ಮೇಲೆ ಹಲ್ಲೆ ಕೂಡ ನಡೆಸಿದ್ದ ಎಂದು ತಿಳಿದುಬಂದಿದೆ. ಇದರಿಂದ ಬೇಸತ್ತಿದ್ದ ನಾಗಪ್ರಸಾದ್, ಈ ಕಿರುಕುಳಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದನು.

ಸೋಮವಾರ ಬೆಳಗಿನ ಜಾವ ಸುಮಾರು 4.30ರ ಸುಮಾರಿಗೆ ಅಮೋಘ ಕೀರ್ತಿ ನಿದ್ರೆಯಲ್ಲಿದ್ದಾಗ ನಾಗಪ್ರಸಾದ್ ಆತನ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ನಂತರ, ಆತ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದನು. ಆದರೆ, ಆತನ ಬಳಿ ಹಣವಿಲ್ಲದ ಕಾರಣ ಮೆಜೆಸ್ಟಿಕ್‌ನಲ್ಲಿ ಮೂರು ದಿನ ಅಲೆದಾಡಿದ್ದಾನೆ. ಕೊನೆಗೆ ತಪ್ಪಿತಸ್ಥ ಮನೋಭಾವದಿಂದ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಕೊಲೆಯಾದ ಬಾಲಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಎಫ್‌ಐಆರ್ ದಾಖಲಿಸಿಕೊಂಡು ಆರೋಪಿ ನಾಗಪ್ರಸಾದ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಿದ್ದಾರೆ. ಮೊಬೈಲ್ ಗೇಮ್‌ನ ದುಷ್ಪರಿಣಾಮದಿಂದ ಸೃಷ್ಟಿಯಾದ ಈ ದುರಂತವು ಸಮಾಜದಲ್ಲಿ ಆತಂಕಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಕಿಂಗ್: ರಾತ್ರಿಯಾದ್ರೆ ಬೆಡ್‌ರೂಂ ಬಳಿ ಬರ್ತಾನೆ ಸೈಕೋ! ಅಪರಿಚಿತನ ಕಾಟಕ್ಕೆ ಬೇಸತ್ತ ವೈದ್ಯೆ!
ಮಾಟ ಮಂತ್ರ ಪರಿಹಾರದ ನಾಟಕ: ಮಲ್ಲೇಶ್ವರಂನಲ್ಲಿ ಚಿನ್ನಾಭರಣ ದೋಚಿದ ನಕಲಿ ಸ್ವಾಮಿಗಳು!