
ಬೆಂಗಳೂರು (ಫೆ.21): ಸಿಲಿಕಾನ್ ಸಿಟಿ ಬೆಂಗಳೂರಿ ಕೋರಮಂಗಲದಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಮಾಡಿರುವುದು ವರದಿಯಾಗಿದೆ. ಮಹಿಳೆಗೆ ಪರಿಚಿತವಿರುವ ವ್ಯಕ್ತಿಯೊಂದಿಗೆ ಖಾಸಗಿ ಹೋಟೆಲ್‌ನ ಟೆರೇಸ್ ಮೇಲೆ ಹೋದಾಗ ಮೂವರು ಸೇರಿಕೊಂಡು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.
ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಗೆ ಬಸ್ ತೋರಿಸುವುದಾಗಿ ಹೇಳಿ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣ ಮಾಸುವ ಮುನ್ನವೇ ಇದೀಗ ಕೋರಮಂಗಲದಲ್ಲಿ ಪರಿಚಿತ ಮಹಿಳೆಯ ಮೇಲೆ ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಈ ಘಟನೆ ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿ ನಿನ್ನೆ ಮಧ್ಯರಾತ್ರಿ 1.30ರ ವೇಳೆಗೆ ನಡೆದಿದೆ. ಮೂವರು ಸೇರಿಕೊಂಡು ಮಹಿಳೆಯನ್ನು ಹಿರಿದು ಮುಕ್ಕಿದ್ದಾರೆ ಎಂದು ತಿಳಿದುಬಂದಿದೆ.
ಕೋರಮಂಗಲದ ಖಾಸಗಿ ಹೊಟೆಲ್‌ನ ಟೆರೆಸ್‌ನಲ್ಲಿ ಕೃತ್ಯ ಎಸಗಿದ್ದಾರೆ. ಪರಿಚಯಸ್ಥ ಮಹಿಳೆಯನ್ನು ಒಬ್ಬ ಟೆರೇಸ್ ಮೇಲೆ ಕರೆದಿಕೊಂಡು ಹೋಗಿದ್ದಾರೆ. ಈ ವೇಳೆ ಇನ್ನಿಬ್ಬರು ಅಲ್ಲೇ ಕಾದು ಕುಳಿತು ಆತನೊಂದಿಗೆ ಸೇರಿಕೊಂಡು ಮೂವರು ಸೇರಿ ಸಾಮೂಹಿಕ ಆತ್ಯಾಚಾರ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳಗ್ಗೆ 5 ಗಂಟೆಗೆ ಸಂತ್ರಸ್ತ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಜೊತೆಗೆ, ಮಹಿಳೆಯ ದೂರನ್ನು ಆಧರಿಸಿ ಕೋರಮಂಗಲ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲು ಆಗಿದೆ. ಈ ಪ್ರಕರಣದ ಕುರಿತಂತೆ ಕೋರಮಂಗಲ ಪೊಲೀಸರು ಸದ್ಯ ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ