
ಬೆಂಗಳೂರು (ಫೆ.18): ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ರೋಡ್‌ನಲ್ಲಿ ನಿನ್ನೆ ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ವಾಹನಗಳ ದಟ್ಟಣೆ ಇರುವಾಗಲೇ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಮಹಿಳೆಯು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಹಿಳೆ ತನ್ನ ವಾಹನದಲ್ಲಿ ವೇಗವಾಗಿ ಹೋಗುತ್ತಿದ್ದಾಗ ಮುಂಭಾಗದಲ್ಲಿದ್ದ ಆಟೋವನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪಕ್ಕದಲ್ಲೇ ಚಲಿಸುತ್ತಿದ್ದ ಆಟೋಗೆ ವಾಹನ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಯಲ್ಲೇ ಪಲ್ಟಿ ಹೊಡೆದಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳದಲ್ಲಿದ್ದ ವಾಹನ ಸವಾರರು ಮತ್ತು ಸಾರ್ವಜನಿಕರು ತಕ್ಷಣ ಸ್ಪಂದಿಸಿದ್ದಾರೆ. ಪಲ್ಟಿಯಾಗಿದ್ದ ಕಾರಿನಲ್ಲಿದ್ದ ಮಹಿಳೆಯನ್ನು ಕೂಡಲೇ ಮೇಲೆತ್ತಿ ಹೊರತೆಗೆದಿದ್ದಾರೆ. ಗಾಯಗೊಂಡಿದ್ದ ಮಹಿಳೆಯನ್ನ ಆಸ್ಪತ್ರೆಗೆ ಸೇರಿಸಿದ್ದಾರೆ.
ಕ್ಯಾಮೆರಾದಲ್ಲಿ ಸೆರೆಯಾದ ಭೀಕರ ದೃಶ್ಯ
ಈ ಇಡೀ ಅಪಘಾತದ ದೃಶ್ಯವು ಹಿಂಬದಿಯಲ್ಲಿ ಬರುತ್ತಿದ್ದ ಸವಾರನೊಬ್ಬನ ಮೊಬೈಲ್‌ನಲ್ಲಿ ಸೆರೆಯಾಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ವಾಹನ ಹೇಗೆ ನಿಯಂತ್ರಣ ತಪ್ಪಿತು ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ವೈರಲ್ ಆಗಿದೆ. ಸದ್ಯ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ