ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಜೀವ ಬಲಿ

By Govindaraj S  |  First Published Jul 22, 2022, 1:35 PM IST

ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಜೀವ ಬಲಿಯಾಗಿರುವ ಘಟನೆ ನಗರದ ಹಲಸೂರಿನ ಯಲ್ಲಮ್ಮ ಕೋಯಿಲ್ ಸ್ಟ್ರೀಟ್ ಬಳಿ ನಡೆದಿದೆ. ಅಪ್ಪು (25) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ರಾಜಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.


ಬೆಂಗಳೂರು (ಜು.22): ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಮತ್ತೊಂದು ಜೀವ ಬಲಿಯಾಗಿರುವ ಘಟನೆ ನಗರದ ಹಲಸೂರಿನ ಯಲ್ಲಮ್ಮ ಕೋಯಿಲ್ ಸ್ಟ್ರೀಟ್ ಬಳಿ ನಡೆದಿದೆ. ಅಪ್ಪು (25) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ರಾಜಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಪವರ್ ಲೈನ್ ಕಟ್ ಆಗಿ ರಾಜಕಾಲುವೆ ಒಳಗೆ ಬಿದ್ದಿದೆ. ಇದೇ ಕಾಲುವೆಯಲ್ಲಿ ಕಬ್ಬಿಣ ಆಯಲು ತೆರಳಿದ್ದ ಯುವಕ, ಈ ವೇಳೆ ವಿದ್ಯುತ್ ಪ್ರವಹಿಸಿ ಶಾಕ್‌ನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹಲಸೂರು ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬ್ಯಾಂಕ್‌ ನೌಕರನ ಬಂಧನ: ಕಾರಿನಲ್ಲಿ ಬಂದು ಒಂಟಿ ಮಹಿಳೆಯರ ಸರಗಳವು ಮಾಡುತ್ತಿದ್ದ ಚಾಲಾಕಿ ಕಳ್ಳನನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆನೇಕಲ್‌ನ ಸೋಮಶೇಖರ್‌(45) ಬಂಧಿತ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಕಾರು, 2.15 ಗ್ರಾಂ ಚಿನ್ನದ ಸರ, ಲ್ಯಾಪ್‌ಟಾಪ್‌ ಜಪ್ತಿ ಮಾಡಲಾಗಿದೆ. ಆರೋಪಿ ಇತ್ತೀಚೆಗೆ ಬೊಮ್ಮನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಕೆಲಸ ಮುಗಿಸಿಕೊಂಡು ನಡೆದುಕೊಂಡು ಮನೆಗೆ ತೆರಳುತ್ತಿದ್ದ ಮಹಿಳಾ ಟೆಕ್ಕಿಯನ್ನು ಕಾರಿನಲ್ಲಿ ಹಿಂಬಾಲಿಸಿ ಲ್ಯಾಪ್‌ಟಾಪ್‌ ಕಸಿದು ಪರಾರಿಯಾಗಿದ್ದ.

Tap to resize

Latest Videos

Udupi: ಚಾಕಲೇಟ್ ನುಂಗಿದ ಬಾಲಕಿ ಉಸಿರುಗಟ್ಟಿ ಸಾವು!

ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೃತ್ತಿಯಲ್ಲಿ ಖಾಸಗಿ ಬ್ಯಾಂಕ್‌ ಉದ್ಯೋಗಿಯಾಗಿರುವ ಈತ ಹಲವು ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದಾನೆ. ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಕಾರಿನಲ್ಲಿ ಹಿಂಬಾಲಿಸಿ ಸರ ಹಾಗೂ ಲ್ಯಾಪ್‌ಟಾಪ್‌ ಕಸಿದು ಪರಾರಿಯಾಗುತ್ತಿದ್ದ. ಈ ಹಿಂದೆ ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಅಟ್ಟಿದ್ದರು. 

Bengaluru: ಬೆಸ್ಕಾಂ ವಿದ್ಯುತ್ ಅದಾಲತ್‌ಗೆ ಉತ್ತಮ ಪ್ರತಿಕ್ರಿಯೆ: 2900 ಗ್ರಾಹಕರು ಭಾಗಿ

ಜಾಮೀನು ಪಡೆದು ಹೊರಬಂದ ಬಳಿಕವೂ ಆರೋಪಿಯು ತನ್ನ ಹಳೇ ಚಾಳಿ ಮುಂದುವರಿಸಿದ್ದ. ಈತನ ಬಂಧನದಿಂದ ಬೊಮ್ಮನಹಳ್ಳಿ ಹಾಗೂ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎರಡು ಸುಲಿಗೆ ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಗಳು ಮಾಹಿತಿ ನೀಡಿದ್ದಾರೆ. ಆರೋಪಿಯು ಮೋಜು-ಮಸ್ತಿಗೆ ಹಣ ಹೊಂದಿಸಲು ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ. ಮದ್ಯಪಾನ ಮಾಡಿಕೊಂಡು ತನ್ನದೇ ಕಾರಿನಲ್ಲಿ ಸುತ್ತಾಡಿ ಒಂಟಿಯಾಗಿ ಓಡಾಡುವ ಸಾರ್ವಜನಿಕರ ಸುಲಿಗೆ ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

click me!