
ಭಟ್ಕಳ(ಜ.26): ಮುಂಬೈನಲ್ಲಿ ಬಂಧನವಾದ ಶಂಕಿತ ಉಗ್ರನೋರ್ವನ ಜತೆ ನಂಟು ಹೊಂದಿರುವ ಆರೋಪದಡಿ ಭಟ್ಕಳದ ಮಹಿಳೆಯ ಮನೆಯ ಮೇಲೆ ಬುಧವಾರ ರಾತ್ರಿ ದಾಳಿ ನಡೆಸಿದ ಮುಂಬೈ ಎಟಿಎಸ್ ತಂಡ ಮಹಿಳೆಯನ್ನು ವಶಕ್ಕೆ ಪಡೆದು ಗುರುವಾರ ಭಟ್ಕಳದಲ್ಲಿಯೇ ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.
ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ ಜತೆ ನಂಟು ಹೊಂದಿರುವ ಮಹಾರಾಷ್ಟ್ರ ನಾಸಿಕ್ ನ ಓರ್ವ ಯುವಕನನ್ನು ಮುಂಬೈ ಎಟಿಎಸ್ ತಂಡ ಇತ್ತೀಚೆಗೆ ಬಂಧಿಸಿತ್ತು. ಆತನ ಜತೆ ಸಂಪರ್ಕದಲ್ಲಿದ್ದ ಮುಂಬೈನ ಓರ್ವ ಮಹಿಳೆಯನ್ನು ಬಂಧಿಸಿರುವ ತಂಡ ಆಕೆಯ ಸಂಪರ್ಕದಲ್ಲಿದ್ದ ಇಲ್ಲಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಜಾದ ನಗರದ ಮಹಿಳೆಯೋರ್ವಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಗೊತ್ತಾಗಿದೆ.
ರಾಮಲಲ್ಲಾ ಪ್ರತಿಷ್ಠಾಪನೆ ದಿನ ಮಸೀದಿ ಕೆಡವುವ ಸಂಕಲ್ಪ ತೊಟ್ಟಿದ್ದ ಸಂಸದ ಅನಂತ ಕುಮಾರ್ ಹೆಗಡೆ!
ಈಕೆಯ ಪತಿ ನಿಧನರಾಗಿದ್ದು ತಂದೆ-ತಾಯಿ, ಮಕ್ಕಳ ಜತೆ ವಾಸವಾಗಿದ್ದರು. ಸ್ಥಳೀಯ ಮದರಸಾದಲ್ಲಿ ಶಿಕ್ಷಕಿ ಆಗಿ ಕೆಲಸ ಮಾಡುತ್ತಿದ್ದ ಈಕೆ ಹೆಣ್ಣುಮಕ್ಕಳಿಗೆ ಧರ್ಮ ಶಿಕ್ಷಣ ಬೋಧಿಸುತ್ತಿದ್ದಳು ಎನ್ನಲಾಗಿದೆ. ಬಂಧಿತ ಶಂಕಿತ ಉಗ್ರನಿಗೆ ಹಣ ವರ್ಗಾವಣೆ ಮಾಡಿರುವ ಮತ್ತು ನೇರ ಸಂಪರ್ಕ ಇರುವ ಕುರಿತು ತನಿಖೆ ನಡೆಸಲಾಗುತ್ತಿದೆ. ತನಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಈಕೆಯ ಮನೆ ಶೋಧಿಸಿರುವ ತಂಡ ಮೊಬೈಲ್ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ