ರಾಜ್ಯದಲ್ಲಿ ಬೀದಿನಾಯಿಗಳಷ್ಟೇ ಅಲ್ಲ, ಹುಚ್ಚರ ದಾಳಿ ಹೆಚ್ಚಳ, ಸೈಡ್‌ ಬಿಡದ್ದಕ್ಕೆ ಬಸ್ ಚಾಲಕನನಿಗೆ ಥಳಿತ!

Published : Feb 04, 2026, 02:34 PM IST
Bidar Bhalki road rage incident Bike rider brutally attacks bus driver

ಸಾರಾಂಶ

ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಸೈಡ್ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬೈಕ್ ಸವಾರನೊಬ್ಬ ಕೆಕೆಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಚಾಲಕ ಚಂದ್ರಶೇಖರ ಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ.

ಬೀದರ್ (ಫೆ.4): ಸೈಡ್ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬೈಕ್ ಸವಾರನೋರ್ವ ಬಸ್ ಚಾಲಕನೊಂದಿಗೆ ಅಮಾನವೀಯ ವರ್ತಿಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬೀರಿ(ಕೆ) ಗ್ರಾಮದ ಬಳಿ ನಡೆದಿದೆ. ಚಲಿಸುತ್ತಿದ್ದ ಕೆಕೆಆರ್‌ಟಿಸಿ ಬಸ್ ಅನ್ನು ಅಡ್ಡಗಟ್ಟಿದ ಸವಾರ, ಚಾಲಕನನ್ನು ಬಸ್‌ನಿಂದ ಕೆಳಕ್ಕೆ ಎಳೆದು ಹಾಡುಹಗಲೇ ಹಿಗ್ಗಾಮುಗ್ಗಾ ಥಳಿಸಿದ್ದಾನೆ.

ಗಂಭೀರವಾಗಿ ಗಾಯಗೊಂಡ ಚಾಲಕ ಆಸ್ಪತ್ರೆಗೆ ದಾಖಲು

ಭಾಲ್ಕಿ ಬಸ್ ಡಿಪೋಗೆ ಸೇರಿದ ಬಸ್ ಇದಾಗಿದ್ದು, ಚಾಲಕ ಚಂದ್ರಶೇಖರ ಸ್ವಾಮಿ ಹಲ್ಲೆಗೊಳಗಾದ ದುರ್ದೈವಿ. ಬೈಕ್ ಸವಾರನ ಮೃಗೀಯ ವರ್ತನೆಯಿಂದಾಗಿ ಚಾಲಕನಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಅವರನ್ನು ಭಾಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸ್ಥಳಕ್ಕೆ ಪೊಲೀಸರ ಭೇಟಿ: ಆರೋಪಿ ಪರಾರಿ

ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಬಳಿಕ ಬೈಕ್ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಭಾಲ್ಕಿ ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾರಿಗೆ ನೌಕರನ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಕಿಡಿಗೇಡಿ ಸವಾರನಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಲಬುರಗಿ ಜೈಲಿನ ಶೌಚಾಲಯದಲ್ಲಿ ಮೊಬೈಲ್, ಇಯರ್ ಬಡ್ಸ್ ಪತ್ತೆ!
ರಾಯಚೂರು: ಎಲ್ಲಮ್ಮ ದೇವಿ ಜಾತ್ರೆಯಲ್ಲಿ ಬಾಡೂಟ ಸವಿದು ಹೊರಟಿದ್ದವ ಭೀಕರ ರಸ್ತೆ ಅಪಘಾತಕ್ಕೆ ಬಲಿ!