
ಪಟನಾ (ಫೆ.14) ಸದಾ ಕುಡಿದು ನಿಂದಿಸುತ್ತಿದ್ದ ಗಂಡನ ತೊರೆದು ಮಹಿಳೆಯೊಬ್ಬರು ಮನೆಗೆ ಸಾಲ ವಸೂಲಿಗೆ ಬರುತ್ತಿದ್ದ ಏಜೆಂಟ್ ಜೊತೆ ಪರಾರಿಯಾಗಿ ವಿವಾಹವಾದ ಘಟನೆ ಬಿಹಾರದಲ್ಲಿ ನಡೆದಿದೆ.ಈ ವಿವಾಹಕ್ಕೆ ಏಜೆಂಟ್ ಕುಟುಂಬ ಸಮ್ಮತಿಸಿದ್ದರೆ, ಮಹಿಳೆಯ ಕುಟುಂಬ ವಿರೋಧ ವ್ಯಕ್ತಪಡಿಸಿ ಪ್ರಕರಣ ದಾಖಲಿಸಿದೆ.
ಏನಿದು ಘಟನೆ?:
ಬಿಹಾರದ ಜಮುಯಿ ಜಿಲ್ಲೆಯ ನಿವಾಸಿ ನಕುಲ್ ಶರ್ಮಾರನ್ನು ಇಂದಿರಾ 2022ರಲ್ಲಿ ವಿವಾಹವಾದರು. ಆದರೆ ನಕುಲ್ ಸದಾ ಕುಡಿದು ಇಂದಿರಾಳಿಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದ. ನಕುಲ್ ಮನೆಗೆ ಭೇಟಿ ನೀಡುತ್ತಿದ್ದ ಹಣಕಾಸು ಕಂಪನಿಯ ಲೋನ್ ಏಜೆಂಟ್ ಪವನ್ ಕುಮಾರ್ ಇಂದಿರಾಗೆ ಭರವಸೆಯಾಗಿ ಕಾಣಿಸಿದ್ದ. ಪವನ್ ಜತೆಗಿನ ಇಂದಿರಾ ವ್ಯಾವಹಾರಿಕ ಪರಿಚಯ ಸ್ನೇಹವಾಯಿತು. ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಯಿತು. ಪವನ್, ಇಂದಿರಾ ಫೆ.4 ರಂದು ವಿಮಾನದಲ್ಲಿ ಪಶ್ಚಿಮ ಬಂಗಾಳದ ಅಸಾನ್ಸೋಲ್‌ಗೆ ಪರಾರಿಯಾಗಿದ್ದಳು. ಫೆ.11ಕ್ಕೆ ಹಿಂದೂ ಸಂಪ್ರದಾಯದಂತೆ ಇಬ್ಬರೂ ವಿವಾಹವಾಗಿ ಜಮುಯಿಗೆ ಮರಳಿದ್ದರು.
ಇದನ್ನೂ ಓದಿ: ರಷ್ಯಾದ ರೆವರ್ಟ್ ಬ್ರಾಂಡ್‌ನಿಂದ ಗಾಂಧೀಜಿ ಚಿತ್ರ ಇರುವ ಬಿಯರ್ ಮಾರಾಟ; ಭಾರತೀಯ ನೆಟಿಜನ್ ಆಕ್ರೋಶ!
ಇಬ್ಬರ ಕೊಂದು ತಾನೂ ಪ್ರಾಣ ಬಿಟ್ಟ ಮಣಿಪುರ ಸಿಆರ್‌ಪಿಎಫ್ ಯೋಧ
ಇಂಫಾಲ್: ಸಿಆರ್‌ಪಿಎಫ್ ಯೋಧನೊಬ್ಬ ತನ್ನ ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಸಿಬ್ಬಂದಿಯನ್ನು ಗಾಯಗೊಳಿಸಿ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ಭೀಕರ ಘಟನೆ ಮಣಿಪುರದಲ್ಲಿ ನಡೆದಿದೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್‌ನಲ್ಲಿರುವ ಸಿಆರ್‌ಪಿಎಫ್ ಶಿಬಿರದಲ್ಲಿ ರಾತ್ರಿ 8.20ರ ಸುಮಾರಿಗೆ ಈ ಘಟನೆ ನಡೆದಿದೆ. 120ನೇ ಬೆಟಾಲಿಯನ್‌ನ ಹವಾಲ್ದಾರ್ ಸಂಜಯ್ ಸಿಂಗ್ ಎಂಬಾತ ಶಿಬಿರದಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಕಾನ್‌ಸ್ಟೆಬಲ್ ಮತ್ತು ಒಬ್ಬ ಸಬ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿದರೆ, ಇತರೆ 8 ಜನರು ಗಾಯಗೊಂಡಿದ್ದಾರೆ. ಬಳಿಕ ಸಂಜಯ್ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ