ನ್ಯೂ ಇಯರ್ ಎಣ್ಣೆಪಾರ್ಟಿ ಮುಗಿಸಿ ವಾಪಸ್ಸಾಗುತ್ತಿದ್ದಾಗ ಬೈಕ್ ಅಪಘಾತ ಓರ್ವ ಸಾವು, ಇನ್ನೋರ್ವ ಗಂಭೀರ ಗಾಯ!

Published : Jan 01, 2024, 10:55 AM ISTUpdated : Jan 01, 2024, 11:10 AM IST
ನ್ಯೂ ಇಯರ್ ಎಣ್ಣೆಪಾರ್ಟಿ ಮುಗಿಸಿ ವಾಪಸ್ಸಾಗುತ್ತಿದ್ದಾಗ ಬೈಕ್ ಅಪಘಾತ ಓರ್ವ ಸಾವು, ಇನ್ನೋರ್ವ ಗಂಭೀರ ಗಾಯ!

ಸಾರಾಂಶ

ನಿನ್ನೆ ತಡರಾತ್ರಿ ಹೊಸವರ್ಷಾಚರಣೆ ವೇಳೆ ಎಣ್ಣೆ ಪಾರ್ಟಿ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಬೈಕ್ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘ    ಟನೆ ಬೆಳಗಾವಿ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದ ಪಂಕಜ್ ಮೃತ ಯುವಕ, ಇನ್ನೋರ್ವ ಯುವಕ ಸಂತೋಷ್ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಳಗಾವಿ (ಜ.1): ನಿನ್ನೆ ತಡರಾತ್ರಿ ಹೊಸವರ್ಷಾಚರಣೆ ವೇಳೆ ಎಣ್ಣೆ ಪಾರ್ಟಿ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಬೈಕ್ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘ    ಟನೆ ಬೆಳಗಾವಿ ನಗರದ ಕಾಲೇಜು ರಸ್ತೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದ ಪಂಕಜ್ ಮೃತ ಯುವಕ, ಇನ್ನೋರ್ವ ಯುವಕ ಸಂತೋಷ್ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೊಸವರ್ಷದ ಪಾರ್ಟಿಗೆಂದು ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳಿದ್ದರು. ತಡರಾತ್ರಿವರೆಗೆ ಪಾರ್ಟಿಯಲ್ಲಿ ಕಂಠಪೂರ್ತಿ ಕುಡಿದಿರುವ ಗೆಳೆಯರು. ಬಳಿಕ ಕುಡಿದ ಮತ್ತಿನಲ್ಲೇ ಬೈಕ್ ಚಾಲನೆ ಮಾಡಿಕೊಂಡು ಬಂದಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿಯಾಗಿರುವ ಬೈಕ್. ಡಿಕ್ಕಿಯಾದ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಯುವಕ ಪಂಕಜ್ ಸ್ಥಳದಲ್ಲೇ  

ಮದ್ಯ ಸೇವಿಸಿ ಚಾಲನೆ, ಅಪಘಾತ ಪ್ರಕರಣ ಸಂಬಂಧ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. 

ರಸ್ತೆ ಅಪಘಾತದಲ್ಲಿ ರಂಗಭೂಮಿ ಕಲಾವಿದ ಗೌತಮ್ ಕುಲಾಲ್ ವಗ್ಗ ದುರ್ಮರಣ! 

ವಿದ್ಯುತ್ ತಂತಿ ಕಟ್ ಆಗಿ ಅವಘಡ; ಮನೆ, ಬಣವೆ ಸುಟ್ಟು ಭಸ್ಮ!

ಹಾವೇರಿ: ವಿದ್ಯುತ್ ತಂತಿ ಕಟ್ ಆಗಿ ಒಂದು ಮನೆ, 2 ಬಣವೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೆವರಮರಳಿಹಳ್ಳಿಯಲ್ಲಿ ನಡೆದಿದೆ.

ಮುಂಜಾನೆ ಕೊರೆಯುವ ಚಳಿಗೆ ಹೆಚ್ಚುತ್ತಿರುವ ಅಪಘಾತ; ರಾತ್ರಿ ಪಾಳಿ ಚಾಲಕರಿಗೆ ಥರ್ಮೋ ಫ್ಲಾಸ್ಕ್ ನೀಡಲು KSRTC ನಿರ್ಧಾರ

ಪ್ರಕಾಶ ಹರಿಜನ ಮತ್ತು ಪುಟ್ಟಪ್ಪ ಬಡಿಗೇರ್ ಎಂಬುವರಿಗೆ ಸೇರಿದ ಬಣವೆಗಳು ಸುಟ್ಟು ಭಸ್ಮ. ಬಣವೆಗೆ ಹೊತ್ತಿದ ಬೆಂಕಿ ಚಂದ್ರಪ್ಪ ದಾನಣ್ಣನವರ್ ಎಂಬುವವರ  ಮನೆಗೂ ತಗುಲಿದ ಬೆಂಕಿ. ಗ್ರಾಮದ ಅನೇಕ ಮನೆಗಳ ವಿದ್ಯುತ್ ಮೀಟರ್‌ಗಳು ಸಹ ಸುಟ್ಟು ಭಸ್ಮವಾಗಿವೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಮುಂದುವರಿಸಿದ್ದಾರೆ. ಈ ವೇಳೆ ಹೆಸ್ಕಾಂ ಇಲಾಖೆ ವಿದ್ಯುತ್ ಸಮಸ್ಯೆ ಬಗೆಹರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಸವಣೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?