
ಹಾಸನ (ಜ.03): ಹೊಸ ವರ್ಷದಂದು ದೇವರ ದರ್ಶನಕ್ಕೆ ಬೈಕ್‌ನಲ್ಲಿ ಹೊರಟಿದ್ದ ದಂಪತಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಗೀಹಳ್ಳಿ ಗೇಟ್ ಬಳಿ ಅಪಘಾತಕ್ಕೀಡಾಗಿ ದಂಪತಿಗಳಿಬ್ಬರೂ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಹೊಸ ವರ್ಷದ ನಂತರದ ದಿನ ಮೊನ್ನೆ ಬೆಳಗ್ಗೆ ಇಬ್ಬರು ಪುಟ್ಟ ಮಕ್ಕಳೊಂದಿಗೆ ದೇವಸ್ಥಾನಕ್ಕೆ ಹೊರಟಿದ್ದಾರೆ. ಆದರೆ, ಈ ವೇಳೆ ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಭೀಕರ ಅಪಘಾತದಲ್ಲಿ ನಿನ್ನೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ಚಿಕಿತ್ಸೆ ಫಲಿಸದೆ ಇಂದು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದುರ್ಘಟನೆಯಲ್ಲಿ ತೋಟಿ ಗ್ರಾಮದ ಸುನಿಲ್ (32) ದಿವ್ಯಾ (26) ಮೃತ ದಂಪತಿ ಆಗಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಕ್ಕಳಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಘಟನೆ ಕುರಿತು ಹಿರೀಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Accident: ಹೊಸ ವರ್ಷಕ್ಕೆ ಗೋವಾಕ್ಕೆ ಹೋದವರ ಕಾರು ಡಿಕ್ಕಿ: ತಮಿಳುನಾಡಿನ ನಾಲ್ವರು ಸಾವು
ಟೈರ್ ಸ್ಪೋಟಗೊಂಡು ಲಾರಿ ಚಾಲಕ ಸಾವು: ತುಮಕೂರು : ಇನ್ನು ಇಂದು ಬೆಳಗ್ಗೆ ಸರಕು ಸಾಗಣೆ ಮಾಡುವ ಲಾರಿ ಟೈಯರ್ ಬ್ಲಾಸ್ಟ್ ಆಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ, ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ. ಟೈರ್ ಸ್ಪೋಟದಿಂದ ಸಾವನ್ನಪ್ಪಿದ ಚಾಲಕ ವೆಂಕಟೇಶ್ (43). ಲಾರಿ ಟೈರ್ ಹೀಟ್ ಆಗಿದ್ದ ಕಾರಣ ಚೆಕ್ ಮಾಡೋಕೆ ಟೈಯರ್ ಬಳಿ ಹೋಗಿದ್ದನು. ಚೆಕ್ ಮಾಡುತ್ತಿದ್ದ ವೇಳೆ ಟೈಯರ್ ಸ್ಫೋಟಗೊಂಡು ಸ್ಥಳದಲ್ಲೇ ಅಸುನೀಗಿದ್ದಾನೆ. ಇನ್ನು ಲಾರಿ ಚಾಲಕ ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದವನಾಗಿದ್ದನು. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸರು ಭೇಟಿ, ಪರಿಶೀಲನೆ ಮಾಡಿದ್ದಾರೆ. ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ