ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಮಾವ-ಸೊಸೆ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ (ಫೆ.27): ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಮಾವ-ಸೊಸೆ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ಅವರಾದ (ಬಿ) ಹತ್ತಿರ ಸೋಮವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಬೇಲೂರ (ಜೆ) ಗ್ರಾಮದ ಗುರುನಾಥ ದಂಡಗೂಳಕರ್ (50) ಮತ್ತು ಅವರ ಸೊಸೆ ಸಂಗೀತಾ (35) ಎಂದು ಗುರುತಿಸಲಾಗಿದೆ. ಲಕ್ಷ್ಮಣ ಕುಸಲಕರ್ ಎಂಬಾತ ಗಾಯಗೊಂಡಿದ್ದು, ಅವರನ್ನು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಕಲಬುರಗಿ ತಾಲೂಕಿನ ಬೆಲೂರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಗುರುನಾಥ, ಸಂಗೀತಾ ಮತ್ತು ಲಕ್ಷ್ಮಣ ಬೈಕ್ ನಲ್ಲಿ ಬಸವಕಲ್ಯಾಣಕ್ಕೆ ಮದುವೆ ಸಮಾರಂಭಕ್ಕೆ ತ್ರಿಬಲ್ ರೈಡ್ ಹೊರಟಿದ್ದರು ಎಂದು ತಿಳಿದು ಬಂದಿದೆ. ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.
ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಜಾಬ್ ಕಳೆದುಕೊಳ್ಳುವ ಭೀತಿ, ಪೇಟಿಎಂ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
undefined
ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಗದೀಶ್ ನಿಧನ
ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಟ್ಟಹಳ್ಳಿ ಕೆ.ಜಗದೀಶ್(45) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದು, ಮೃತರ ಅಂತ್ಯ ಸಂಸ್ಕಾರವನ್ನು ಸೋಮವಾರ ಬೆಳಗ್ಗೆ ಬೆಟ್ಟಹಳ್ಳಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕಳೆದ ವಾರ ಮೈಸೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಮಾರ್ಗ ಮಧ್ಯೆ ಕಾರು ಅಪಘಾತಕ್ಕೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಬೆಟ್ಟಹಳ್ಳಿ ಜಗದೀಶ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಒಂದೇ ದಿನ ಆಪರೇಷನ್ ಮಾಡಿಸಿಕೊಂಡ ಮೂವರು ಮಹಿಳೆಯರು ಸಾವು, ಇದೆಂಥಾ ಸರ್ಕಾರಿ ಆಸ್ಪತ್ರೆ!
ಮೂಲತಃ ಯಲಹಂಕ ಕ್ಷೇತ್ರದ ಬೆಟ್ಟಹಳ್ಳಿ ಗ್ರಾಮದವರಾದ ಜಗದೀಶ್ ಕಳೆದ ಹಲವು ವರ್ಷಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ವರ್ಷ ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.
ಜಗದೀಶ್ ಅವರ ನಿಧನಕ್ಕೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಶೋಕ ವ್ಯಕ್ತಪಡಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಉಂಟಾಗಿರುವ ದುಃಖ ಮತ್ತು ನಷ್ಟವನ್ನು ಭರಿಸುವಂತೆ ಪ್ರಾರ್ಥಿಸಿದ್ದಾರೆ.