
ಹಾಸನ (ಮಾ.31) : ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರ್ಣಕ್ಕೀಡಾದ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಕ ನಡೆದಿದೆ.
ಅಶ್ವತ್ಥ್ (42), ಸಾಗರ್ (42) ಮೃತ ದುರ್ದೈವಿಗಳು. ಮೃತರಿಬ್ಬರೂ ಅರಕಲಗೂಡು ತಾಲ್ಲೂಕಿನ ಚಿಕ್ಕ ಆಲದಹಳ್ಳಿ ಗ್ರಾಮದವರಾಗಿದ್ದಾರೆ.
ಚನ್ನರಾಯಪಟ್ಟಣದ ಕಡೆಯಿಂದ ಹಾಸನದ ಕಡೆಗೆ ಬರುತ್ತಿದ್ದ ಬೈಕ್ ಬರುತ್ತಿದ್ದರು. ಈ ವೇಳೆ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ಬದಿ ಟ್ರಕ್ ನಿಲ್ಲಿಸಿಕೊಂಡು ಅಡುಗೆ ಮಾಡುತ್ತಿದ್ದ ಚಾಲಕ ಹಾಗೂ ನಿರ್ವಾಹಕರು. ವೇಗವಾಗಿ ಬಂದ ಬೈಕ್ ಸವಾರರು ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ
ಅಕ್ರಮ ದನ ಸಾಗಾಟದ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು ಆರೋಪ; ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ರಸ್ತೆ ಅಪಘಾತದಲ್ಲಿ ಯುವಕ ಸಾವು
ಕೊಡಗು: ಬೈಕ್ ಅಪಘಾತವಾಗಿ ಯುವಕನೋರ್ವ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲೂಕಿನ ಕೋತೂರು ಗ್ರಾಮದಲ್ಲಿ ನಡೆದಿದೆ.
ಜರ್ಸಿ ತಳಿ ಉತ್ಪಾದನಾ ಘಟಕದ ಹುಲ್ಲುಗಾವಲಿಗೆ ಬೆಂಕಿ; ಹತ್ತಾರು ಎಕರೆ ಹಸಿ ಹುಲ್ಲು ಸುಟ್ಟು ಭಸ್ಮ!
ಶ್ರವಣ್(20) ಮೃತ ಯುವಕ. ವಿರಾಜಪೇಟೆಯಿಂದ ತನ್ನೂರು ಕೋತೂರು ಗ್ರಾಮಕ್ಕೆ ಬರುತ್ತಿದ್ದ ವೇಳೆ ನಡೆದಿರುವ ಅಪಘಾತ. ಅಪಘಾತದಲ್ಲಿ ತಲೆಗೆ ಗಂಭೀರ ಪೆಟ್ಟು ಬಿದ್ದ ಹಿನ್ನೆಲೆ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿರುವ ಯುವಕ. ಅಪಘಾತ ಘಟನೆ ಸಂಬಂಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ