
ಬೆಂಗಳೂರು (ಫೆ.21): ನಗರದಲ್ಲಿ ಜನರ ಗಮನ ಬೇರೆಡೆ ಸೆಳೆದು ಮೊಬೈಲ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಕಳವು ಕೃತ್ಯದಲ್ಲಿ ತೊಡಗಿದ್ದ ಇಬ್ಬರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆನೇಕಲ್ ತಾಲೂಕಿನ ಆದೂರು ಗ್ರಾಮದ ನವೀನ್ ಹಾಗೂ ಆರ್.ಶಿವರಾಜ್ ಬಂಧಿತರಾಗಿದ್ದು, ಆರೋಪಿಗಳಿಂದ 11 ಲಕ್ಷ ರು. ಮೌಲ್ಯದ 5 ಬೈಕ್‌ಗಳು ಮತ್ತು 40 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚಿಗೆ ಮನೆ ಮುಂದೆ ನಿಲ್ಲಿಸಿದ್ದಾಗ ಜ್ಞಾನಗಂಗಾ ನಗರದ ಶ್ರೀಧರ್ ಎಂಬುವರ ಬೈಕ್ ಕಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನವೀನ್ ಹಾಗೂ ಶಿವರಾಜ್ ವೃತ್ತಿಪರ ಕ್ರಿಮಿನಲ್‌ಗಳಾಗಿದ್ದು, ಈ ಇಬ್ಬರ ಮೇಲೆ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಕೆಲ ತಿಂಗಳ ಹಿಂದೆ ಇಬ್ಬರನ್ನು ಆನೇಕಲ್ ಠಾಣೆ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಬಳಿಕ ಜಾಮೀನು ಪಡೆದು ಹೊರಬಂದು ಮತ್ತೆ ಇಬ್ಬರು ತಮ್ಮ ಚಾಳಿ ಮುಂದುವರೆಸಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.
ಜನರನ್ನು ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಹಾಗೂ ಮನೆಗಳ್ಳತನ ಕೃತ್ಯದಲ್ಲಿ ಆರೋಪಿಗಳು ನಿರತರಾಗಿದ್ದರು. ಈ ಬಗ್ಗೆ ತಾಂತ್ರಿಕ ಮಾಹಿತಿ ಆಧರಿಸಿ ನವೀನ್ ಹಾಗೂ ಶಿವರಾಜ್‌ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ